Yadagiri Anganwadi Recruitment 2022: ಯಾದಗಿರಿ ಜಿಲ್ಲೆಯ ಅಂಗನವಾಡಿ ಹುದ್ದೆಗಳ ನೇಮಕಾತಿ

By Suvarna News  |  First Published Mar 4, 2022, 9:26 PM IST

ಯಾದಗಿರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ 4 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಾರ್ಚ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ಯಾದಗಿರಿ(ಮಾ.4): ಯಾದಗಿರಿ ಜಿಲ್ಲೆಯ (Yadagiri  District) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಬರುವ  4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಒಳಪಟ್ಟ ಅಂಗನವಾಡಿ ಕೇಂದ್ರ  (Anganwadi Centers)ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅಂಗನವಾಡಿ ಕಾರ್ಯಕರ್ತೆ (Anganwadi Workers -), ಮತ್ತು  ಅಂಗನವಾಡಿ ಸಹಾಯಕಿ (Anganwadi Helpers) ಹುದ್ದೆಗಳು ಖಾಲಿ ಇದ್ದು, ಒಟ್ಟು 31 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು  ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ https://anganwadirecruit.kar.nic.in/ ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  10ನೇ ತರಗತಿ (ಅಂಗನವಾಡಿ ಕಾರ್ಯಕರ್ತೆ), ಕನಿಷ್ಟ 4ನೇ ತರಗತಿ (ಅಂಗನವಾಡಿ ಸಹಾಯಕಿ) ಉತ್ತೀರ್ಣರಾಗಿರಬೇಕು.   

Latest Videos

undefined

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 (ಮಾರ್ಚ್ 19,2022ಕ್ಕೆ ಒಳಪಟ್ಟು) ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. 

ಆಯ್ಕೆ ಪ್ರಕ್ರಿಯೆ: 
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಆಸಿಡ್ ದಾಳಿಗೊಳಗಾದವರಿಗೆ ಆದ್ಯತೆ: ಆಸಿಡ್ ದಾಳಿಗೊಳಗಾದ ಮಹಿಳೆಯರು ಖಾಲಿ ಇರುವ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿದರೆ  ಬೇರೆ ಯಾವುದೇ ಅರ್ಜಿಗಳನ್ನು ಗಣನೆಗೆ ತೆಗೆದುಕೊಳ್ಳದೆ, ಅಂತವರಿಗೆ ಮೊದಲ ಅದ್ಯತೆ ನೀಡಿ ನೇರವಾಗಿ ಅವರನ್ನೇ ಆಯ್ಕೆ ಮಾಡಲಾಗುತ್ತದೆ.

Karnataka Budget 2022-23: ನಿರೀಕ್ಷೆಯಂತೆಯೇ ಬಜೆಟ್‌ನಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್

ಇಲಾಖೆಯ ಸಂಸ್ಥೆಗಳ ನಿವಾಸಿಗಳ ಆದ್ಯತೆ: ಬಾಲ ನ್ಯಾಯ ಕಾಯ್ದೆಯಡಿ ಇಲಾಖೆಯ ಸಂಸ್ಥೆಗಳಲ್ಲಿ / ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದ ಹಾಲಿ /ಮಾಜಿ ನಿವಾಸಿಗಳಿಗೆ ಎರಡನೇ ಆದ್ಯತೆ ನೀಡಲಾಗುತ್ತದೆ.

ವಿಧವೆಯರಿಗೆ ಆದ್ಯತೆ:  ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ. ಬಳಿಕವಷ್ಟೇ ಇತರೆ ವಿಧವೆಯರನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಿದ  ಬಳಿಕ ವಿಧವೆಯಾದರೆ ಅಂತಹ ಅರ್ಜಿಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ವಿಧವೆಯರು ತಾವು ಎಲ್ಲಿಯ ವಾಸಸ್ಥಳ ಧೃಡೀಕರಣ ಪತ್ರ  ನೀಡುತ್ತಾರೋ ಅದೇ ಸ್ಥಳವನ್ನು ಅವರ ವಾಸಸ್ಥಳ ಎಂದು ಗಣನೆಗೆ ತೆಗದುಕೊಳ್ಳಲಾಗುವುದು. ವಿಧವಾ ಅಭ್ಯರ್ಥಿಯು ಗಂಡನ ಮರಣ ಪ್ರಮಾಣ ಪತ್ರ ನೀಡುವುದು ಕಡ್ಡಾಯವಾಗಿದೆ. ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ವಿಧವೆಯರು ಅರ್ಜಿ ಸ್ವೀಕೃತವಾಗಿದ್ದರೆ ಗರಿಷ್ಟ ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅಂಗವಿಕಲ ಅಭ್ಯರ್ಥಿಗಳಿಗೆ ಆದ್ಯತೆ: ಅಂಗನವಾಡಿ ಕಾರ್ಯಕರ್ತೆಯು 3 ರಿಂದ 6 ವರ್ಷದ ಮಕ್ಕಳಿಗೆ ಆಟ ಮತ್ತು ಅಭಿನಯ ಗೀತೆಗಳ ಮೂಲಕ ಶಾಲಾ ಪೂರ್ವ ಶಿಕ್ಷಣವನ್ನು ಹೇಳಿ ಕೊಡಬೇಕಾಗುತ್ತದೆ, ಆಟ-ಪಾಠ ಚಟುವಟಿಕೆ  ಸಮಯದಲ್ಲಿ  ಮಕ್ಕಳನ್ನು ಹಿಡಿದೆತ್ತಿ ನಿಲ್ಲಿಸಲು ಹಾಗೂ ಅಭಿನಯ ಮಾಡಿ ತೋರಿಸಬೇಕಾಗುತ್ತದೆ. ವೃತ್ತ ಸಭೆ, ತಾಯಂದಿರ ಸಭೆ ಮತ್ತು ಮನೆ ಭೇಟಿ ಕಾರ್ಯಗಳನ್ನು ಮಾಡಬೇಕಾಗುತ್ತದೆ. ಹೀಗಾಗಿ ಕಿವುಡರು, ಮೂಗರು, ಬುದ್ಧಿಮಾಂದ್ಯರು, ಮಾನಸಿಕ ಅಸ್ವಸ್ಥರು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಆಗುವುದಿಲ್ಲ. ಇತರೆ ದೈಹಿಕ ಅಂಗವಿಕಲರು ಶೇ.60% ಮೀರದಂತೆ ಇರುವವರು ಮತ್ತು ಶಾಲಾಪೂರ್ವ ಶಿಕ್ಷಣ ನಡೆಸಲು ಸಮರ್ಥವಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದು. ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಅಂಗವಿಕಲ ಅಭ್ಯರ್ಥಿಗಳು ಅರ್ಹರಾಗಿರುವುದಿಲ್ಲ. ಈ ಕುರಿತು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ನೀಡುವುದು ಕಡ್ಡಾಯವಾಗಿದೆ. ತಾವು ಎಲ್ಲಿಯ ವಾಸಸ್ಥಳ ಧೃಡೀಕರಣ ಪತ್ರ  ನೀಡುತ್ತಾರೋ ಅದೇ ಸ್ಥಳವನ್ನು ಅವರ ವಾಸಸ್ಥಳ ಎಂದು ಗಣನೆಗೆ ತೆಗದುಕೊಳ್ಳಲಾಗುವುದು. ಅಂಗವಿಕಲ ಅಭ್ಯರ್ಥಿಗಳ ಅಂಗವಿಕಲತೆ ಪ್ರಮಾಣದ ಬಗ್ಗೆ ಸಂಶಯ ಬಂದರೆ ಪುನರ್ ಪರಿಶೀಲಿಸುವ ಅಧಿಕಾರ  ಆಯ್ಕೆ ಸಮಿತಿ ಹೊಂದಿದೆ. ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ಅಂಗವಿಕಲರು ಅರ್ಜಿ ಸ್ವೀಕೃತವಾಗಿದ್ದರೆ ಗರಿಷ್ಟ ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

Government Teacher Post: ಅಂಗವಿಕಲ ಶಿಕ್ಷಕರಿಗೆ ಅಗ್ನಿ ಪರೀಕ್ಷೆ..!

ಅರ್ಜಿ ಸಲ್ಲಿಸುವ ವಿಧಾನ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ  ಅಭ್ಯರ್ಥಿಗಳು  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್​ಸೈಟ್   https://anganwadirecruit.kar.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ಬಳಿಕ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ   ಮಾರ್ಚ್ 31 ,2022ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿ  ಸಲ್ಲಿಸಬೇಕು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಿದರೆ ಅಂತಹ ಅರ್ಜಿಗಳು ತಿರಸ್ಕೃತವಾಗಲಿದೆ. 

click me!