Karnataka Assembly Elections 2023: ನಾಳೆ ಮತದಾನಕ್ಕೆ 1.56 ಲಕ್ಷ ಪೊಲೀಸ್‌ ಭದ್ರತೆ

Published : May 09, 2023, 10:45 AM ISTUpdated : May 09, 2023, 10:47 AM IST
Karnataka Assembly Elections 2023: ನಾಳೆ ಮತದಾನಕ್ಕೆ 1.56 ಲಕ್ಷ ಪೊಲೀಸ್‌ ಭದ್ರತೆ

ಸಾರಾಂಶ

ರಾಜ್ಯದಲ್ಲಿ ಮತದಾನದ ಚುನಾವಣಾ ಕರ್ತವ್ಯಕ್ಕೆ 304 ಡಿವೈಎಸ್ಪಿಗಳು, 991 ಪಿಐಗಳು, 2610 ಪಿಎಸ್‌ಐಗಳು, 5803 ಎಎಸ್‌ಐಗಳು, 46,421 ಪೊಲೀಸರು, 27,990 ಗೃಹ ರಕ್ಷಕರು ಸೇರಿದಂತೆ 84,119 ಅಧಿಕಾರಿ ಮತ್ತು ಸಿಬ್ಬಂದಿ ನಿಯೊಜಿಸಲಾಗಿದೆ. ಅಲ್ಲದೆ ಹೊರ ರಾಜ್ಯಗಳಿಂದ 8500 ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ಪಡೆಯಲಾಗಿದೆ: ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ 

ಬೆಂಗಳೂರು(ಮೇ.09):  ಎರಡು ತಿಂಗಳಿಂದ ರಾಜ್ಯದಲ್ಲಿ ನಡೆದ ರಾಜ್ಯಾಧಿಕಾರದ ಚುನಾವಣಾ ಸಮರಕ್ಕೆ ಶಾಂತಿಯುತವಾಗಿ ಶುಭಂ ಹೇಳಲು ಖಾಕಿ ಪಡೆ ಅಣಿಯಾಗಿದ್ದು, ಬುಧವಾರ ಮುಕ್ತ ಮತು ನ್ಯಾಯ ಸಮ್ಮತ ಮತದಾನಕ್ಕೆ 1.56 ಲಕ್ಷ ಪೊಲೀಸರು ಭದ್ರತೆಗೆ ನಿಯೋಜಿತರಾಗಿದ್ದಾರೆ.

ರಾಜ್ಯದಲ್ಲಿ ಮತದಾನದ ಚುನಾವಣಾ ಕರ್ತವ್ಯಕ್ಕೆ 304 ಡಿವೈಎಸ್ಪಿಗಳು, 991 ಪಿಐಗಳು, 2610 ಪಿಎಸ್‌ಐಗಳು, 5803 ಎಎಸ್‌ಐಗಳು, 46,421 ಪೊಲೀಸರು, 27,990 ಗೃಹ ರಕ್ಷಕರು ಸೇರಿದಂತೆ 84,119 ಅಧಿಕಾರಿ ಮತ್ತು ಸಿಬ್ಬಂದಿ ನಿಯೊಜಿಸಲಾಗಿದೆ. ಅಲ್ಲದೆ ಹೊರ ರಾಜ್ಯಗಳಿಂದ 8500 ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ಪಡೆಯಲಾಗಿದೆ. ಹಾಗೆ ಕೇಂದ್ರ ಹಾಗೂ ರಾಜ್ಯ ಭದ್ರತಾ ಪಡೆಗಳನ್ನು ಬಳಸಿಕೊಳ್ಳಲಾಗುತ್ತಿದ್ದು, ಒಟ್ಟಾರೆ 1.56 ಲಕ್ಷ ಪೊಲೀಸರು ಮತದಾನದ ದಿನ ಬಂದೋಬಸ್ತ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಮಾಹಿತಿ ನೀಡಿದ್ದಾರೆ.

Karnataka dry Days: ಇಂದಿನಿಂದ 4 ದಿನ ಮದ್ಯ ಮಾರಾಟವಿಲ್ಲ, ಬಹಿರಂಗ ಪ್ರಚಾರವೂ ಇರಲ್ಲ!

ಚುನಾವಣೆ ಭದ್ರತೆಗೆ 650 ಕೇಂದ್ರ ಭದ್ರತಾ ಪಡೆಗಳ ಪೈಕಿ 101 ಸಿಆರ್‌ಪಿಎಪ್‌, 108 ಬಿಎಸ್‌ಎಫ್‌, 75 ಸಿಐಎಸ್‌ಎಫ್‌, 70 ಐಟಿಬಿಪಿ, 75 ಎಸ್‌ಎಸ್‌ಬಿ, 35 ಆರ್‌ಪಿಎಫ್‌ ಮತ್ತು 186 ಎಸ್‌ಎಪಿ ಕಂಪನಿಗಳಿವೆ. ಅವುಗಳನ್ನು ಸೂಕ್ಷ್ಮ ವಿಧಾನಸಭಾ ಕ್ಷೇತ್ರಗಳಿಗೆ ನಿಯೋಜಿಸಲಾಗಿದೆ. ಇನ್ನು 224 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿರುತ್ತದೆ. ಹೆಚ್ಚುವರಿಯಾಗಿ ಜಿಲ್ಲಾ ಮತ್ತು ನಗರ ಸಶಸ್ತ್ರ ಮೀಸಲು ಪಡೆಗಳು ಸೇರಿದಂತೆ ಒಟ್ಟು 890 ಸೆ್ೊ್ರೖಕಿಂಗ್‌ ಪಾರ್ಟಿಗಳನ್ನು ಬಂದೋಬಸ್ತ್‌ ಕಾರ್ಯವನ್ನು ನಿರ್ವಹಿಲಿವೆ ಎಂದಿದ್ದಾರೆ.

ಈಗಾಗಲೇ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಪಥ ಸಂಚಲನ ನಡೆಸುವ ಮೂಲಕ ಕಾನೂನು ಸುವ್ಯವಸ್ಥೆ ಬಗ್ಗೆ ಜನ ಜಾಗೃತಿ ಮೂಡಿಸಲಾಗಿದೆ.

ಮತಗಟ್ಟೆಗಳ ನಿರ್ವಹಣೆ:

ರಾಜ್ಯ ವ್ಯಾಪ್ತಿ 58,282 ಮತಗಟ್ಟೆಗಳಿದ್ದು, ಅದರಲ್ಲಿ 11,617 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟಗಳೆಂದು ಗುರುತಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಅನುಗುಣವಾಗಿ ಸೂಕ್ಷ್ಮ ಮತಗಟ್ಟೆಗಳಿಗೆ ಪೊಲೀಸರ ಜತೆ ಹೆಚ್ಚುವರಿಯಾಗಿ ಸಿಎಪಿಎಫ್‌ ಕಂಪನಿಗಳನ್ನು ನಿಯೋಜನೆ ಮಾಡಲಾಗಿದೆ.

ಒಟ್ಟು 2,930 ಸೆಕ್ಟರ್‌ ಮೊಬೈಲ್‌ಗಳು ಕಾರ್ಯಾಚರಣೆಯಲ್ಲಿದ್ದು, ಒಂದೊಂದು ಸೆಕ್ಟರ್‌ ಮೊಬೈಲ್‌ಗಳಿಗೆ 20 ಬೂತ್‌ಗಳನ್ನು ನಿಗದಿಪಡಿಸಲಾಗಿದೆ. ಇಲ್ಲಿ ಪಿಎಸ್‌ಐ ಅಥವಾ ಎಎಸ್‌ಐ ದರ್ಜೆಯ ಅಧಿಕಾರಿಯನ್ನು ನೇಮಿಸಿ ನಿರಂತರ ಗಸ್ತನ್ನು ಕೈಗೊಳ್ಳಲಾಗಿದೆ. ಸೆಕ್ಟರ್‌ ಮೊಬೈಲ್ಸ್‌ಗಳ ಮೇಲ್ವಿಚಾರಣೆಗೆ 749 ಮೇಲ್ವಿಚಾರಣಾ ಮೊಬೈಲ್‌ಗಳಿದ್ದು, ಮೇಲ್ವಿಚಾರಕ ಮೊಬೈಲ್ಸ್‌ನ ಉಸ್ತುವಾರಿಯಾಗಿ ಓರ್ವ ಪೊಲೀಸ್‌ ಇನ್ಸ್‌ಪೆಕ್ಟರ್‌ ದರ್ಜೆಯ ಅಧಿಕಾರಿಯನ್ನು ನೇಮಿಸಲಾಗಿದೆ. ಆ ಅಧಿಕಾರಿಯು 4 ಸೆಕ್ಟರ್‌ ಮೊಬೈಲ್ಸ್‌ಗಳ ಮೇಲ್ವಿಚಾರಣೆಯನ್ನು ನಿರ್ವಹಿಸುತ್ತಾರೆ. ಡಿವೈಎಸ್ಪಿ ದರ್ಜೆಯ ಅಧಿಕಾರಿಯ ಉಸ್ತುವಾರಿಯಲ್ಲಿ 236 ಉಪ ವಿಭಾಗೀಯ ಮೊಬೈಲ್ಸ್‌ಗಳಿದ್ದು, ಒಂದು ವಿಧಾನಸಭಾ ಕ್ಷೇತ್ರವನ್ನು ಡಿವೈಎಸ್ಪಿ ನಿರ್ವಹಿಸುತ್ತಾರೆ ಎಂದು ಡಿಜಿಪಿ ವಿವರಿಸಿದ್ದಾರೆ.

ಮತದಾನ ದಿನದಂದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ 700ಕ್ಕೂ ಹೆಚ್ಚು ವಿಚಕ್ಷಣಾ ದಳಗಳನ್ನು ನೇಮಿಸಲಾಗಿದೆ. ಸೂಕ್ಷ್ಮ ಪ್ರದೇಶಗಳನ್ನೊಳಗೊಂಡಂತೆ ಅಂತರ್‌ ರಾಜ್ಯ ಹಾಗೂ ಅಂತರ್‌ ಜಿಲ್ಲಾ ಗಡಿಭಾಗಗಳಲ್ಲಿ ಸುಮಾರು 700ಕ್ಕೂ ಹೆಚ್ಚು ಚೆಕ್‌ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ಹೇಳಿದ್ದಾರೆ.

ಕುಡುಕ ತಂದೆ ದಿನಾ ಅಮ್ಮನನ್ನು ಹೊಡೀತಾರೆ: ಪೊಲೀಸರಿಗೆ ದೂರು ನೀಡಿದ ಬಾಲಕ

ಮುನ್ನೆಚ್ಚರಿಕೆ ಕ್ರಮಗಳು:

ವಿಧಾನಸಭಾ ಚುನಾವಣೆ ವೇಳೆ ಹಳೇ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದವರ ವಿರುದ್ಧ ಜಾರಿಯಾಗಿದ್ದ 5500 ವಾರೆಂಟ್‌ಗಳನ್ನು ಕಾರ್ಯಗತಗೊಳಿಸಲಾಗಿದೆ. ಕಳೆದ ಮೂರು ತಿಂಗಳಲ್ಲಿ 24,959 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿಗೊಳಿಸಲಾಗಿದೆ ಎಂದು ಡಿಜಿಪಿ ಮಾಹಿತಿ ನೀಡಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ 30,418 ಭದ್ರತಾ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ ಸನ್ನಡತೆ ಆಧಾರದ ಮೇಲೆ 53406 ವ್ಯಕ್ತಿಗಳನ್ನು ಬಾಂಡ್‌ ಒವರ್‌ ಮಾಡಲಾಗಿರುತ್ತದೆ. ಅದೇ ರೀತಿ ಭದ್ರತಾ ಪ್ರಕರಣಗಳನ್ನು ಉಲ್ಲಂಘಿಸಿದ 115 ಪ್ರಕರಣಗಳಲ್ಲಿ 1,57,02, 000 ರು ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಶಾಂತಿಯುತವಾದ ಮತದಾನ ನಡೆಯಲು ಒಟ್ಟು 714 ವ್ಯಕ್ತಿಗಳ ಮೇಲೆ ಗಡಿಪಾರು ಮಾಡಲಾಗಿದ್ದು, 68 ವೃತ್ತಿಪರ ಅಪರಾಧಿಗಳನ್ನು ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಮನ್ವಯ ಸಭೆ:

ಚುನಾವಣೆ ವೇಳೆ ನೆರೆಹೊರೆ ರಾಜ್ಯಗಳ ಗಡಿಭಾಗಳಲ್ಲಿ (ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಹಾಗೂ ಗೋವಾ) ಶಾಂತಿ, ಸೌಹಾರ್ದತೆಯ ಕಾಪಾಡುವ ನಿಟ್ಟಿನಲ್ಲಿ ಅಂತರ್‌ ರಾಜ್ಯ ಗಡಿಭಾಗದ ಜಿಲ್ಲೆಗಳ ಅಧಿಕಾರಿಗಳ ಜತೆ 50ಕ್ಕೂ ಹೆಚ್ಚು ಸಮನ್ವಯ ಸಭೆಗಳನ್ನು ನಡೆಸಲಾಗಿದೆ. ಚುನಾವಣೆಯಲ್ಲಿ ನೆರೆ ರಾಜ್ಯಗಳಿಂದ ಅನಧಿಕೃತ ಹಣ, ಮದ್ಯ, ಉಚಿತ ಉಡುಗೊರೆಗಳು ಹಾಗೂ ಇತರೆ ವಸ್ತುಗಳು ಪೂರೈಕೆಯಾಗದಂತೆ ನಿಗಾವಹಿಸಲಾಗಿದೆ. ಅದೇ ರೀತಿ ಹೊರ ರಾಜ್ಯಗಳ ರೌಡಿಗಳು ಸೇರಿದಂತೆ ಸಮಾಜಘಾತುಕ ವ್ಯಕ್ತಿಗಳ ಚಲನವಲನದ ಮೇಲೆ ಸೂಕ್ತ ನಿಗಾಹಿಸಲು ಗಡಿ ಭಾಗದ ಚೆಕ್‌ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ಡಿಜಿಪಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ