Third Gender: ನಿಗಮ, ಮಂಡಳಿಗಳಲ್ಲೂ ತೃತೀಯ ಲಿಂಗಿಗಳಿಗೆ ಮೀಸಲಾತಿ: ಹೈಕೋರ್ಟ್‌

By Kannadaprabha News  |  First Published Mar 3, 2022, 10:19 AM IST

*  ರಾಜ್ಯ ಸರ್ಕಾರದಿಂದ ಹೈಕೋರ್ಟ್‌ಗೆ ಮಾಹಿತಿ ಸಲ್ಲಿಕೆ
*  ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ
*  ‘ಜೀವಾ’ ಸಂಸ್ಥೆಗೆ ಅನುಮತಿ ನೀಡಿ ಅರ್ಜಿ ಇತ್ಯರ್ಥಪಡಿಸಿದ ಕೋರ್ಟ್‌ 
 


ಬೆಂಗಳೂರು(ಮಾ.03): ಸರ್ಕಾರಿ ಹುದ್ದೆಗಳ ನೇಮಕಾತಿ(Recruitment of Government Posts) ವೇಳೆ ತೃತೀಯ ಲಿಂಗಿಗಳಿಗೆ(Third Gender) ಎಲ್ಲ ವರ್ಗಗಳಲ್ಲಿ ಶೇ.1ರಷ್ಟು ಸಮತಲ ಮೀಸಲು ಕಲ್ಪಿಸಿ ರೂಪಿಸಲಾಗಿರುವ ನಿಯಮವನ್ನು ಅಳವಡಿಸಿಕೊಳ್ಳುವಂತೆ ರಾಜ್ಯದ ಪ್ರಾಧಿಕಾರಗಳು ಹಾಗೂ ನಿಗಮ, ಮಂಡಳಿಗಳಿಗೆ ಕೋರಲಾಗಿದೆ ಎಂದು ಸರ್ಕಾರ(Government of Karnataka) ಹೈಕೋರ್ಟ್‌ಗೆ(High Court) ಮಾಹಿತಿ ನೀಡಿದೆ.

ಸರ್ಕಾರದ ಹುದ್ದೆಗಳ ನೇಮಕಾತಿ ವೇಳೆ ತೃತೀಯ ಲಿಂಗಿಗಳಿಗೆ ಎಲ್ಲ ವರ್ಗಗಳಲ್ಲಿ ಶೇ.1ರಷ್ಟು ಮೀಸಲು(Reservation) ಕಲ್ಪಿಸಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಲೈಂಗಿಕ ಅಲ್ಪಸಂಖ್ಯಾತರು, ಎಚ್‌ಐವಿ ಪೀಡಿತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ‘ಸಂಗಮ’ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ‘ಜೀವಾ’ ಎಂಬ ಎನ್‌ಜಿಓ(NGO) ಸಲ್ಲಿಸಿರುವ ಮಧ್ಯಂತರ ಅರ್ಜಿ ಬುಧವಾರ ವಿಚಾರಣೆಗೆ ನಿಗದಿಯಾಗಿದ್ದವು.

Tap to resize

Latest Videos

LGBT Rights: ಜೈಲಿನಲ್ಲಿ ತೃತೀಯಲಿಂಗಿಗಳಿಗೆ ಪ್ರತ್ಯೇಕ ವಾರ್ಡ್, ಶೌಚಾಲಯ

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರಿ ವಕೀಲರ ಮಾಹಿತಿ ನೀಡಿ, ಹೈಕೋರ್ಟ್‌ ನಿರ್ದೇಶದನ್ವಯ ರಾಜ್ಯ ಸರ್ಕಾರ, ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರ್ಪಡೆಗೊಳಿಸಿತ್ತು. ತಿದ್ದುಪಡಿ ಮೂಲಕ ಸರ್ಕಾರದ ಎಲ್ಲ ಹುದ್ದೆಗಳ ನೇಮಕಾತಿ ವೇಳೆ ತೃತೀಯ ಲಿಂಗಿಗಳಿಗೆ ಎಲ್ಲ ವರ್ಗಗಳಲ್ಲಿ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸಿ, 2021ರ ಜುಲೈ 6ರಂದು ಅಂತಿಮ ಅಧಿಸೂಚನೆ ಹೊರಡಿಸಿದೆ. ಜತೆಗೆ, ಅಧಿಸೂಚನೆಯನ್ನು ಎಲ್ಲ ಪ್ರಾಧಿಕಾರ ಮತ್ತು ನಿಗಮ-ಮಂಡಳಿಗೆ(Authority and Corporation Board) ಕಳುಹಿಸಿ, ಸರ್ಕಾರದ ನಿಯಮ ಅಳವಡಿಸಿಕೊಳ್ಳುವಂತೆ ಕೋರಿದೆ. ಆದರೆ, ನಿಯಮ ಜಾರಿಗೆ ತರುವಂತೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

‘ಜೀವಾ’ ಸಂಸ್ಥೆ ಪರ ವಕೀಲರು, ಸರ್ಕಾರದ ಪ್ರಾಧಿಕಾರ, ನಿಗಮ-ಮಂಡಳಿ, ಸ್ಥಳೀಯ ಸಂಸ್ಥೆಗಳ ಉದ್ಯೋಗದಲ್ಲಿ ಹಾಗೂ ಶೈಕ್ಷಣಿಕ ಸಂಸ್ಥೆಗಳ ಪ್ರವೇಶಾತಿಯಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ ಸೌಲಭ್ಯ ವಿಸ್ತರಿಸಬೇಕು. ರಾಜ್ಯ ಸರ್ಕಾರ ತೃತೀಯ ಲಿಂಗಿಗಳನ್ನು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ವರ್ಗ ಎಂದು ಪರಿಗಣಿಸಿ ಅವರ ಶ್ರೇಯೋಭಿವೃದ್ಧಿಗೆ ಕ್ರಮವಹಿಸಬೇಕು. ಈ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದರು.

ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಈಗಾಗಲೇ ಅರ್ಜಿದಾರರ ಮನವಿ ಈಡೇರಿದೆ. ಆದರೆ, ಸರ್ಕಾರದ ಇತರೆ ಪ್ರಾಧಿಕಾರ ಹಾಗೂ ನಿಗಮ-ಮಂಡಳಿಗಳ ನೇಮಕಾತಿಯಲ್ಲಿ ತಿದ್ದುಪಡಿ ನಿಯಮ ಜಾರಿಗೆ ತರಬೇಕೆಂಬ ಮನವಿ ಕುರಿತು ಪ್ರತ್ಯೇಕ ಅರ್ಜಿ ಸಲ್ಲಿಸಬಹುದು. ಅದರಲ್ಲಿ ಸರ್ಕಾರ ಸೇರಿದಂತೆ ಸಂಬಂಧಪಟ್ಟವರನ್ನು ಪ್ರತಿವಾದಿ ಮಾಡಬಹುದು ಎಂದು ‘ಜೀವಾ’ ಸಂಸ್ಥೆಗೆ ಅನುಮತಿ ನೀಡಿ ಅರ್ಜಿ ಇತ್ಯರ್ಥಪಡಿಸಿತು.

ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ, ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೂ ಮೀಸಲಾತಿ!

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ(6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ(ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇದೇ ಮೊದಲ ಬಾರಿಗೆ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಶೇ.1ರಷ್ಟು ಮೀಸಲಾತಿ ಕಲ್ಪಿಸಿದೆ.

Transgenders: ತೃತೀಯ ಲಿಂಗಿಗಳಿಗೂ ಮೀಸಲಾತಿ, ಸರ್ಕಾರ ಮತ್ತು ಪೊಲೀಸ್ ಇಲಾಖೆಯಿಂದ ಮಹತ್ವದ ಹೆಜ್ಜೆ

ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು-2022 ಅನ್ನು ಪ್ರಕಟಿಸಿದ್ದ ಕರಡು ಅಧಿಸೂಚನೆಗಳಿಗೆ ಸಲ್ಲಿಕೆಯಾಗಿದ್ದ ಆಕ್ಷೇಪಣೆಗಳನ್ನು ಪರಿಗಣಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಎಚ್.ಎಸ್ ಶಿವಕುಮಾರ್ ಅಧಿಕೃತ ಅಧಿಸೂಚನೆ ಹೊರಡಿಸಿದ್ದರು.

ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1 ಮತ್ತು ಇತರೆ ಹಿಂದುಳಿದ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ 47 ವರ್ಷದವರಿಗೆ, ಹಿಂದುಳಿದ ವರ್ಗದ ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 45 ವರ್ಷ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 42 ವರ್ಷದವರೆಗೂ ಅವಕಾಶ ನೀಡಿದೆ. ಪ್ರತಿ ಪ್ರವರ್ಗದಲ್ಲಿ ಶೇ.1ರಷ್ಟು ಹುದ್ದೆಗಳನ್ನು ತೃತೀಯ ಲಿಂಗಿಗಳಿಂದ ಭರ್ತಿಗೆ ಅವಕಾಶ ನೀಡಿದೆ.
 

click me!