
ನೆಲಮಂಗಲ (.28):ರಾಜಧಾನಿ ಬೆಂಗಳೂರು ನಗರಕ್ಕೆ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 10 ಗೋವುಗಳನ್ನು ನೆಲಮಂಗಲದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಮತ್ತು ಟೌನ್ ಪೊಲೀಸರು ಜಂಟಿಯಾಗಿ ರಕ್ಷಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ, ನೆಲಮಂಗಲ ಟೌನ್ ಪೊಲೀಸರ ನೆರವಿನೊಂದಿಗೆ ಶ್ರೀರಾಮ ಸೇನೆಯ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ, ಕುದೂರು ಮೂಲಕ ಬೆಂಗಳೂರು ನಗರದತ್ತ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದಿದ್ದಾರೆ.
ಈ ಜಾನುವಾರುಗಳನ್ನು ಗೂಡ್ಸ್ ವಾಹನದಲ್ಲಿ ತುಂಬಿಸಿಕೊಂಡು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ದ್ಯ ರಕ್ಷಿಸಲಾದ 10 ಗೋವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಅಕ್ರಮ ಸಾಗಾಟದಲ್ಲಿ ಭಾಗಿಯಾಗಿದ್ದವರ ವಿರುದ್ಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ