
ಬೆಂಗಳೂರು(ಏ.04): ಬಿಸಿಲ ಬೇಗೆಯಿಂದ ಕಾದಿದ್ದ ಬೆಂಗಳೂರಿಗೆ ವರುಣ ಮತ್ತೆ ತಂಪರೆದಿದ್ದಾನೆ. ದೇವನಹಳ್ಳಿ ಸುತ್ತು ಮತ್ತು ಭಾರಿ ಮಳೆಯಾಗಿದೆ. ಮಳೆಯಿಂದಾಗಿ ಬೆಂಗಳೂರಿನ ಹವಾಮಾನದಲ್ಲಿ ವೈಪರಿತ್ಯವಾಗಿದೆ. ಇದರ ಪರಿಣಾಮ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ 10ಕ್ಕೂ ಹೆಚ್ಚು ವಿಮಾನಗಳನ್ನು ಬೇರೆಗೆ ವರ್ಗಾಯಿಸಲಾಗಿದೆ. ಸಂಜೆಯಿಂದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.
ದೆಹಲಿ ಹಾಗೂ ಮುಂಬೈ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ. ಬೆಂಗಳೂರಿನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಚೆನ್ನೈ, ಕೊಯಂಬತ್ತೂರು, ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದೆ. ಬೆಂಗಳೂರಿನ ಗ್ರಾಮಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಜೆಯಿಂದ ಮಳೆಯಾಗಿದೆ. ದೇವನಹಳ್ಳಿ ಸುತ್ತ ಮುತ್ತ ಭಾರಿ ಮಳೆಯಾಗಿದೆ. ಹೀಗಾಗಿ ವಿಮಾನಗಳನ್ನು ಬೇರೆಡೆ ಮಾರ್ಗ ಬದಲಾಯಿಸಲಾಗಿದೆ.
Weather Forecast: ಇನ್ನೂ 2 ದಿನ ಗುಡುಗು ಸಹಿತ ಮಳೆ: ಸುವರ್ಣನ್ಯೂಸ್‌ಗೆ ಹವಾಮಾನ ಇಲಾಖೆ ಮುನ್ಸೂಚನೆ
ದಿಢೀರ್ ವಿಮಾನ ಸಂಚಾರ ಮಾರ್ಗ ಬದಲಾವಣೆಯಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಬೆಂಗಳೂರಿನಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಇದೀಗ ಹೈದರಾಬಾದ್, ಚೆನ್ನೈ, ಕೊಯಂಬತ್ತೂರು ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದೆ. ಇದೀಗ ಮತ್ತೆ ಬೆಂಗಳೂರಿಗೆ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.
ದೇವನಹಳ್ಳಿಯಲ್ಲಿ ಸುರಿದ ಮಳೆಗೆ ರಸ್ತೆಗಳು ಜಲಾವೃತಗೊಂಡಿದೆ. ದೇವನಹಳ್ಳಿ, ಬೂದಿಗೆರೆ ಸಂಪರ್ಕ ಕಲ್ಪಿಸುವ ರಸ್ತೆ ನೀರು ತುಂಬಿಕೊಂಡಿದೆ. ವಾಹನ ಸವಾರರು ಪರದಾಡುವಂತಾಗಿದೆ. ಇತ್ತ ನೀರಿನಿಂದ ತುಂಬಿದ್ದ ರಸ್ತೆಯಲ್ಲಿ ಸಾಗಿದ ಕಾರು ಹಾಗೂ ಆಟೋ ರಿಕ್ಷಾ ಅರ್ಧಕ್ಕೆ ನಿಂತಿದೆ. ಇದರ ಪರಿಣಾಮ ಟ್ರಾಫಿಕ್ ಜಾಮ್ ಮತ್ತಷ್ಟು ಹೆಚ್ಚಾಗಿದೆ.
ನಗರದ ಮೆಜೆಸ್ಟಿಕ್, ಗಾಂಧಿನಗರ, ಚಾಮರಾಜಪೇಟೆ ಸೇರಿದಂತೆ ಹಲವೆಡೆ ಸೋಮವಾರ ರಾತ್ರಿ ಮಳೆಯಾಗಿತ್ತು. ಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರ, ಗೋವಿಂದರಾಜ ನಗರ, ವಿಜಯ ನಗರ, ಕುರುಬರಹಳ್ಳಿ, ಸಂಜಯ ನಗರ, ಯಶವಂತಪುರ, ಶಿವಾನಂದ ವೃತ್ತ, ಶೇಷಾದ್ರಿಪುರಂ, ಹೆಬ್ಬಾಳ, ಮೈಸೂರು ರಸ್ತೆ, ಸಂಪಂಗಿರಾಮ ನಗರ, ಕುರುಬರಹಳ್ಳಿ, ರಾಜರಾಜೇಶ್ವರಿ ನಗರ ಸೇರಿದಂತೆ ಹಲವೆಡೆ ಅರ್ಧ ಗಂಟೆಗಿಂತ ಹೆಚ್ಚು ಸಮಯ ಜೋರಾದ ಮಳೆ ಸುರಿದಿತ್ತು.
8 ರವರೆಗೆ ಹಗುರ ಮಳೆ ಸಾಧ್ಯತೆ : ಕೃಷಿ ಹವಾಮಾನ ಕ್ಷೇತ್ರ ಮಾಹಿತಿ
ಹವಾಮಾನ ವೈಪರೀತ್ಯದ ಪರಿಣಾಮ ನಗರದಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಂಭವವಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಂಗಳವಾರವೂ ಸಂಜೆ ಅಥವಾ ರಾತ್ರಿ ಸಂದರ್ಭದಲ್ಲಿ ಮೋಡದ ವಾತಾವರಣ ಇರಲಿದೆ. ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ನಗರದ ಬಹುತೇಕ ಕಡೆ ಮಳೆ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ