ಸಚಿನ್‌ ಪಂಚಾಳ ಕುಟುಂಬಕ್ಕೆ ₹10 ಲಕ್ಷ ಪರಿಹಾರ: ಸಚಿವ ಈಶ್ವರ್‌ ಖಂಡ್ರೆ

Published : Dec 30, 2024, 04:48 AM IST
ಸಚಿನ್‌ ಪಂಚಾಳ ಕುಟುಂಬಕ್ಕೆ ₹10 ಲಕ್ಷ ಪರಿಹಾರ: ಸಚಿವ ಈಶ್ವರ್‌ ಖಂಡ್ರೆ

ಸಾರಾಂಶ

ಯುವ ಗುತ್ತಿಗೆದಾರ ಸಚಿನ ಪಂಚಾಳ ಆತ್ಮಹತ್ಯೆ ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಯಿಂದ ಅದರಲ್ಲೂ ಸಿಐಡಿ ತನಿಖೆಗಾಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಹಾಗೂ ಕುಟುಂಬದ ಸದಸ್ಯರಿಗೆ ಸರ್ಕಾರ ಹಾಗೂ ವಯಕ್ತಿಕವಾಗಿ ಒಟ್ಟು 10 ಲಕ್ಷ ರು. ಪರಿಹಾರ ಕೊಡಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು. 

ಬೀದರ್‌ (ಡಿ.30): ಯುವ ಗುತ್ತಿಗೆದಾರ ಸಚಿನ ಪಂಚಾಳ ಆತ್ಮಹತ್ಯೆ ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಯಿಂದ ಅದರಲ್ಲೂ ಸಿಐಡಿ ತನಿಖೆಗಾಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಹಾಗೂ ಕುಟುಂಬದ ಸದಸ್ಯರಿಗೆ ಸರ್ಕಾರ ಹಾಗೂ ವಯಕ್ತಿಕವಾಗಿ ಒಟ್ಟು 10 ಲಕ್ಷ ರು. ಪರಿಹಾರ ಕೊಡಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು. ಅವರು ಭಾಲ್ಕಿ ತಾಲೂಕು ಕಟ್ಟಿತೂಗಾಂವದಲ್ಲಿರುವ ಸಚಿನ ಪಾಂಚಾಳ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ನಂತರ ಭೇಟಿಯಾದ ಸುದ್ದಿಗಾರರಿಗೆ ಮಾತನಾಡಿ, ಸರ್ಕಾರ ಹಾಗೂ ಖಾಸಗಿ ನೆರವಿನಿಂದ ಒಟ್ಟು 10 ಲಕ್ಷ ಪರಿಹಾರ ಕೊಡಿಸುವ ಘೋಷಣೆ ಮಾಡಿದರು. 

ಈ ನೋವಿನ ಸಂದರ್ಭದಲ್ಲಿ ತಾವೂ ಹಾಗೂ ಸರ್ಕಾರ, ಸಚಿನ್‌ ಕುಟುಂಬದ ಜೊತೆ ನಿಲ್ಲುವುದಾಗಿ ತಿಳಿಸಿದರು. ಪ್ರತಿಯೊಂದು ಜೀವವೂ ಅಮೂಲ್ಯ, ಸಚಿನ್‌ ಪಾಂಚಾಳ ಸಾವು ತೀವ್ರ ನೋವು ತಂದಿದೆ. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ಬಿಜೆಪಿ ಸಾವಿನಲ್ಲೂ ರಾಜಕೀಯ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ. ನಿರ್ಲಕ್ಷ್ಯ ವಹಿಸಿದ ಇಬ್ಬರು ಪೊಲೀಸ್ ಸಿಬ್ಬಂದಿಯ ಅಮಾನತು ಮಾಡಲಾಗಿದೆ. ಹಿರಿಯ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಯುತ್ತಿದ್ದು, ಕರ್ತವ್ಯಲೋಪ ಕಂಡು ಬಂದರೆ ಕ್ರಮ ಜರುಗಿಸಲಾಗುವುದು ಎಂದು ಸಚಿವ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. 

ಆನೆಗಳ ಹಾವಳಿ ನಿಯಂತ್ರಣಕ್ಕೆ ಆನೆಧಾಮ ನಿರ್ಮಾಣ: ಸಚಿವ ಈಶ್ವರ್ ಖಂಡ್ರೆ

ಬಿಜೆಪಿಗೆ ಸುಳ್ಳೇ ಮನೆ ದೇವರು. ನಮ್ಮ ಸರ್ಕಾರ ಈ ಮಣ್ಣಿನ ಕಾನೂನಿಗೆ ಗೌರವ ಕೊಡುತ್ತದೆ. ಯಾರೇ ತಪ್ಪಿತಸ್ಥರಾಗಿದ್ದರೂ ಅಂಥವರ ವಿರುದ್ಧ ಕ್ರಮ ಆಗಲಿದೆ ಇಂತಹ ಪ್ರಕರಣಗಳು ಮರುಕಳುಹಿಸಬಾರದು. ಈ ಪ್ರಕರಣ ಪಕ್ಷಾತೀತವಾಗಿ ತನಿಖೆಯಾಗಲಿ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕೆಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ ಎಂದರು.

ಸಚಿನ್‌ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಲಿ: ಡೆತ್ ನೋಟ್‌ನಲ್ಲಿ ಏನೇನಿದೆ ಎಲ್ಲದರ ಬಗ್ಗೆ ತನಿಖೆಯಾಗುತ್ತದೆ. ಸಚಿನ ಏನೇನು ಬರೆದಿದ್ದಾನೆ, ಎಫ್‌ಎಸ್‌ಎಲ್‌ ವರದಿ ಬಂದ ಮೇಲೆ ತನಿಖೆಯಾಗುತ್ತದೆ. ಬಿಜೆಪಿ ಜೆಡಿಸ್ ಎಲ್ಲರೂ ಸೇರಿ ಕುಟುಂಬದವರಿಗೆ ಆತ್ಮಸ್ಥೈರ್ಯ ತುಂಬುವಂತೆ ಕೆಲಸ ಮಾಡಬೇಕು. ಆಡಳಿತದಲ್ಲಿ ಇರುವ ಲೋಪದೋಷಗಳು ಸರಿಪಡಿಸಲು ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

ಬಿಜೆಪಿಯವರದ್ದು ನಾಟಕ ಕಂಪನಿ‌: ಸಚಿವ ಶಿವರಾಜ ತಂಗಡಗಿ

ಸಿಬಿಐಗೆ ತನಿಖೆ ಒಪ್ಪಿಸಬೇಕೆಂಬ ಬಿಜೆಪಿ ಆಗ್ರಹ ವಿಚಾರವಾಗಿನ ಪ್ರಶ್ನೆಯೊಂದಕ್ಕೆ ಉತ್ತರಿಸಿ ಬಿಜೆಪಿ ಯವರು ಒಂದಾದರೂ ಪ್ರಕರಣ ಸಿಬಿಐಗೆ ಕೊಟ್ಟಿದ್ದಾರಾ? ಈಗ ಸುಮ್ಮನೇ ಮಾತನಾಡ್ತಾರೆ. ತಂತ್ರಜ್ಞಾನ ಮುಂದುವರೆದಿದೆ. ಸತ್ಯ ಮುಚ್ಚಿಡಲು ಆಗಲ್ಲ. ನಿಷ್ಪಕ್ಷಪಾತ, ಪಾರದರ್ಶಕವಾದ ತನಿಖೆ ಆಗಲಿದೆ. ಪ್ರಕರಣದ ತನಿಖೆ ಸಿಐಡಿ ನಡೆಸಬೇಕೆಂದು ಒತ್ತಾಯಿಸುತ್ತೇನೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ