
ತುಮಕೂರು (ಜೂ.06): ಸರ್ಕಾರ ಗುಡಿಸಲು ಮುಕ್ತ ಉದ್ದೇಶದಿಂದ ರಾಜ್ಯದಲ್ಲಿ ಸುಮಾರು ಹತ್ತು ಲಕ್ಷಗಳ ಮನೆಗಳನ್ನು ನಿರ್ಮಿಸುವ ಮಹತ್ತರ ಗುರಿ ಹೊಂದಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ರಾಜ್ಯದಲ್ಲಿ ಆದ್ಯತೆಗನುಸಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮೂರು ಲಕ್ಷ ಮನೆಗಳನ್ನು ನಿರ್ಮಿಸಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ.
ಲಾಕ್ಡೌನ್ ಸಡಿಲಿಕೆ ಕಾದು ನೋಡಿ : ಸಚಿವ ಸೊಮಣ್ಣ
ಉಳಿದಂತೆ ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಇದರಿಂದ ಲಕ್ಷಾಂತರ ಮಂದಿಗೆ ನೆರವಾಗುವುದಾಗಿ ಸಚಿವರು ತಿಳಿಸಿದರು.
ಕರ್ನಾಟಕದಲ್ಲಿ ಮತ್ತಷ್ಟು ತಗ್ಗಿದ ಕೊರೋನಾ, ಪಾಸಿಟಿವಿಟಿ ದರದಲ್ಲಿ ಭಾರೀ ಇಳಿಕೆ
ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವವರ ಜೊತೆಗೆ ಸರ್ಕಾರ ಸದಾ ಇರುತ್ತದೆ. ಈಗಾಗಲೇ ಕೊರೋನಾ ಪರಿಹಾರವನ್ನೂ ಘೋಷಿಸಿದ್ದು, ಸೋಂಕು ನಿಯಂತ್ರಣ ಕಾರ್ಯದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ