ಸಿದ್ಧಗಂಗಾ ಮಠದ 10 ಸಾವಿರ ಮಕ್ಕಳಿಗೆ ಸಾಮೂಹಿಕ ಕೇಶ ಮುಂಡನ

Published : Jan 28, 2019, 11:11 AM IST
ಸಿದ್ಧಗಂಗಾ ಮಠದ 10 ಸಾವಿರ  ಮಕ್ಕಳಿಗೆ ಸಾಮೂಹಿಕ ಕೇಶ ಮುಂಡನ

ಸಾರಾಂಶ

ಶಿವಕುಮಾರ ಸ್ವಾಮೀಜಿ ಅವರ ಪುಣ್ಯಾರಾಧನೆ ಅಂಗವಾಗಿ ಸಿದ್ಧಗಂಗಾ ಮಠದ 10 ಸಾವಿರ ಮಂದಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಾಮೂಹಿಕ ಕೇಶಮುಂಡನ ಮಾಡಲಾಗುತ್ತಿದೆ. 

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ ಪುಣ್ಯಾರಾಧನೆ ಅಂಗವಾಗಿ ಸಿದ್ಧಗಂಗಾ ಮಠದ 10 ಸಾವಿರ ಮಂದಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಾಮೂಹಿಕ ಕೇಶಮುಂಡನ ಮಾಡಲು ಅಖಿಲ ಕರ್ನಾಟಕ ಸವಿತಾ ಸಮಾಜ ಯುವಕರ ಸಂಘ ಮುಂದೆ ಬಂದಿದ್ದಾರೆ. 

ಮಂಗಳವಾರ ಸಿದ್ಧಗಂಗಾ ಮಠದ ಆವರಣದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 1500 ಮಂದಿ ಕಾರ್ಯಕರ್ತರು ಬೆಳಿಗ್ಗೆ 6 ಗಂಟೆಯಿಂದ ರಾತ್ರಿಯವರೆಗೂ ಸಾಮೂಹಿಕ ಕೇಶ ಮುಂಡನ ಮಾಡಲಿದ್ದಾರೆ. 

ಸಂಘದ ಸ್ಥಾಪಕ ಅಧ್ಯಕ್ಷ ವಿ. ಲಕ್ಷ್ಮೇ ಪ್ರಸನ್ನ ಅವರು ಸಿದ್ಧಗಂಗಾ ಕಿರಿಯ ಶ್ರೀಗಳಿಗೆ ಕೇಶಮುಂಡನ ಮಾಡುವ ಬಗ್ಗೆ ಮನವಿ ಸಲ್ಲಿಸಿದ್ದು ಸಿದ್ಧಲಿಂಗ ಸ್ವಾಮೀಜಿ ಅವರು ಕೂಡ ಒಪ್ಪಿಗೆ ನೀಡಿದ್ದಾರೆ. ಭಾರತದಲ್ಲೇ ಇದೊಂದು ಅತಿ ದೊಡ್ಡ ಕಾರ್ಯವಾಗಿದ್ದು ಕೇಶಮುಂಡನ ಕಾರ್ಯದ ಮೂಲಕ ಸೇವೆ ಮಾಡುವ ಭಾಗ್ಯ ನಮ್ಮದಾಗಿದೆ ಎಂಬುದು ಯುವಕರ ಸಂಘದವರ ಅಭಿಪ್ರಾಯವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್