
ಚಿಕ್ಕಮಗಳೂರು (ಸೆ.17) : ಪ್ಲೇವುಡ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೊರಟ್ಟಿ ಎಂಬ ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆಯ ಸಾಮಿಲ್ ನಲ್ಲಿ ಪ್ಲೇವುಡ್ ತುಂಬಿಕೊಂಡು ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಹತ್ತು ಚಕ್ರದ ಲಾರಿ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಪಲ್ಟಿಯಾಗಿದೆ. ಲಾರಿ ಚಾಲಕನ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ.
ತೆಲಂಗಾಣದಲ್ಲಿ ಭೀಕರ ಅಪಘಾತ: ತಿರುಪತಿ ದರ್ಶನ ಪಡೆದು ಬರುತ್ತಿದ್ದ ಐವರು ಕನ್ನಡಿಗ ಭಕ್ತರು ಸಾವು
ಲಾರಿಯ ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾಗಿದ್ದು, ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿಯಾದ ಕಾರಣ ಕೆಲಕಾಲ ಟ್ರಾಫಿಕ್ ಜಾಮ್ ಆಯಿತು. ಸುಮಾರು ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿತ್ತು. ರಾಷ್ಟ್ರೀಯ ಹೆದ್ದಾರಿ, ವೀಕ್ ಎಂಡ್ ಹಾಗೂ ಹಬ್ಬದ ರಜೆ ಹಾಗೂ ಚಿಕ್ಕಮಗಳೂರು, ಮೂಡಿಗೆರೆಯಿಂದ. ಉಡುಪಿ-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿರುವುದರಿಂದ ವಾಹನಗಳು ಅತೀ ವೇಗವಾಗಿ ಓಡಾಡುತ್ತಿರುತ್ತೆ. ಹಾಗಾಗಿ, ಯಾವುದೇ ಅನಾಹುತ ಸಂಭವಿಸಬಾರದೆಂದು ರಾತ್ರಿ 1 ಗಂಟೆಗೆ ಸ್ಥಳಕ್ಕೆ ಬಂದ ಬಣಕಲ್ ಪೊಲೀಸರು ಇಡೀ ರಾತ್ರಿ ಸ್ಥಳದಲ್ಲೇ ಕಾವಲಿದ್ದು ಯಾವುದೇ ಅನಾಹುತ ಸಂಭವಿಸದಂತೆ ಎಚ್ಚರ ವಹಿಸಿದ್ದಾರೆ.
8 ಪ್ರಯಾಣಿಕರ ಹೊತ್ತು ಮುಂಬೈನಲ್ಲಿ ಇಳಿದ ಪ್ರೈವೇಟ್ ಜೆಟ್ ಅಪಘಾತ!
ಇಡೀ ರಾತ್ರಿ ಸ್ಥಳದಲ್ಲಿ ಕಾವಲಿದ್ದ ಪೊಲೀಸರು ಬೆಳಗ್ಗೆ ಜೆಸಿಬಿ ತರಿಸಿ ಲಾರಿಯನ್ನ ಒಂದು ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ