ಕಿಡಿಗೇಡಿಗಳಿಂದ ಮಾವಿನ ತೋಟಕ್ಕೆ ಬೆಂಕಿ, 150 ತೆಂಗಿನ ಸಸಿ, 100ಕ್ಕೂ ಹೆಚ್ಚು ಮಾವಿನ ಮರಗಳು ಸುಟ್ಟು ಭಸ್ಮ, ವೃದ್ಧ ರೈತ ದಂಪತಿ ಕಣ್ಣೀರು!

Published : Apr 28, 2026, 11:36 AM IST
100 Mango Trees and 150 Coconut Plants Destroyed in Arson Attack Elderly Couple Seek Justice

ಸಾರಾಂಶ

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ವೃದ್ಧ ರೈತ ರಾಜಯ್ಯ ಅವರ ಮಾವಿನ ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಈ ದುರ್ಘಟನೆಯಲ್ಲಿ 150 ತೆಂಗು, 100ಕ್ಕೂ ಹೆಚ್ಚು ಮಾವಿನ ಮರಗಳು ಹಾಗೂ ಕೃಷಿ ಉಪಕರಣಗಳು ಸುಟ್ಟು ಕರಕಲಾಗಿದ್ದು, ರೈತ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ.

ರಾಮನಗರ (ಏ.28): ಜಿಲ್ಲೆಯ ಮಾಗಡಿ ತಾಲೂಕಿನ ಬೆಳಗವಾಡಿ ಗ್ರಾಮದಲ್ಲಿ ಘೋರ ಕೃತ್ಯವೊಂದು ನಡೆದಿದೆ. ಗ್ರಾಮದ ವೃದ್ಧ ರೈತ ರಾಜಯ್ಯ ಎಂಬುವವರಿಗೆ ಸೇರಿದ ಮಾವಿನ ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಫಲವತ್ತಾದ ತೋಟವು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ವರ್ಷಗಳ ಕಾಲ ಪೋಷಿಸಿದ್ದ ಹಸಿರು ತೋಟವು ಕಿಡಿಗೇಡಿಗಳು ಹೊತ್ತಿಸಿದ ಕಿಡಿಗೆ ಸುಟ್ಟು ಬೂದಿಯಾಗಿರುವುದು ರೈತ ಕುಟುಂಬವನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ.

150 ತೆಂಗು 100ಕ್ಕೂ ಹೆಚ್ಚು ಮಾವಿನ ಮರಗಳು ಸುಟ್ಟು ಕರಕಲು!

ವೃದ್ಧ ರೈತ ತೋಟದಲ್ಲಿ ಬೆಳೆದಿದ್ದ 150 ತೆಂಗು, 100ಕ್ಕೂ ಹೆಚ್ಚು ಮಾವಿನ ಮರಗಳು ಬೆಂಕಿಗಾಹುತಿಯಾಗಿ ಸುಟ್ಟು ಕರಕಲಾಗಿವೆ. ಕೇವಲ ಬೆಳೆ ಮಾತ್ರವಲ್ಲದೆ, ಕೃಷಿ ಚಟುವಟಿಕೆಗೆ ಬಳಸುತ್ತಿದ್ದ ನೀರೆತ್ತುವ ಮೋಟಾರ್‌ಗಳು ಮತ್ತು ಪೈಪ್‌ಲೈನ್‌ಗಳು ಕೂಡ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣವಾಗಿ ನಾಶವಾಗಿವೆ. ಕಣ್ಣೆದುರೇ ಕೈಗೆ ಬಂದ ತುತ್ತು ಬಾಯಿಗೆ ಬರದಂತಾದ ಪರಿಸ್ಥಿತಿ ಕಂಡು ರೈತ ರಾಜಯ್ಯ ಕಣ್ಣೀರು ಹಾಕುತ್ತಿದ್ದಾರೆ..

ಅಂದಾಜಿನ ಪ್ರಕಾರ, ಈ ಬೆಂಕಿ ಅವಘಡದಿಂದ ಸುಮಾರು 3.5 ಲಕ್ಷ ರೂಪಾಯಿ ಮೌಲ್ಯದ ಬೆಳೆ ಹಾಗೂ ಉಪಕರಣಗಳು ನಷ್ಟವಾಗಿದೆ. ಯಾರೋ ಕಿಡಿಗೇಡಿಗಳು ಹಗೆತನದಿಂದ ಅಥವಾ ದುರುದ್ದೇಶದಿಂದ ತೋಟಕ್ಕೆ ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ರೈತ ದಂಪತಿ ಸ್ಥಿತಿ ನೋಡಿ ಅಯ್ಯೋ ಅನಿಸುವಂತಿದೆ. ರಾತ್ರಿ ಹಗಲೆನ್ನದೆ ಕಷ್ಟಪಟ್ಟು ಬೆಳೆಸಿದ ತೋಟ ಈಗ ಅಕ್ಷರಶಃ ಹೆಣ ಸುಟ್ಟ ಸ್ಮಶಾನದಂತಾಗಿದೆ

ಘಟನೆಗೆ ಸಂಬಂಧಿಸಿದಂತೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರ್ಕಾರ ಮತ್ತು ಜಿಲ್ಲಾಡಳಿತವು ಶೀಘ್ರವಾಗಿ ನಷ್ಟ ಸಮೀಕ್ಷೆ ನಡೆಸಿ ತಮಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಂತ್ರಸ್ತ ರೈತ ರಾಜಯ್ಯ ಅವರು ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ 200+ ವೈದ್ಯರ ನೇಮಕ, ಟ್ಯಾಬ್ ಸಹಿತ ಹೊಸ ಆ್ಯಂಬುಲೆನ್ಸ್ ವ್ಯವಸ್ಥೆ: ಆರೋಗ್ಯ ಸಚಿವ ಮಹತ್ವದ ಹೇಳಿಕೆ!
RCB ಪಂದ್ಯಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂ 200 ಸಿಸಿಟಿವಿ ಆಫ್ ಮಾಡಿದ್ದ ಇಬ್ಬರು ಅರೆಸ್ಟ್ ! ಉದ್ದೇಶ ಏನಿತ್ತು?