ಸ್ತ್ರೀ ಸಾಮರ್ಥ್ಯ ಯೋಜನೆ ಅನುಷ್ಠಾನಕ್ಕೆ 1,000 ಕೋಟಿ ಮೀಸಲು: ಸಿಎಂ ಬೊಮ್ಮಾಯಿ

By Kannadaprabha News  |  First Published Dec 23, 2022, 9:00 PM IST

ಯೋಜನೆಯಿಂದ ರಾಜ್ಯದ 33 ಸಾವಿರ ಮಹಿಳಾ ಸಂಘದ 5 ಲಕ್ಷ ಮಹಿಳೆಯರಿಗೆ ಲಾಭವಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯಿಂದ ದೇಶದಲ್ಲಿ ದೊಡ್ಡ ಕ್ರಾಂತಿ ಉಂಟಾಗಲಿದೆ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


ಬೆಳಗಾವಿ(ಡಿ.23): ಸ್ತ್ರೀ ಸಾಮರ್ಥ್ಯ ಯೋಜನೆ ಅನುಷ್ಠಾನಕ್ಕಾಗಿ ಅಯವ್ಯಯದಲ್ಲಿ 1000 ಕೋಟಿ ಅನುದಾನ ಮೀಸಲಿರಿಸಲಾಗಿದೆ. ಯೋಜನೆಯಿಂದ ರಾಜ್ಯದ 33 ಸಾವಿರ ಮಹಿಳಾ ಸಂಘದ 5 ಲಕ್ಷ ಮಹಿಳೆಯರಿಗೆ ಲಾಭವಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯಿಂದ ದೇಶದಲ್ಲಿ ದೊಡ್ಡ ಕ್ರಾಂತಿ ಉಂಟಾಗಲಿದೆ. ಮಹಿಳಾ ಸ್ವ ಸಂಘ ಉತ್ಪನ್ನಗಳ ಮಾರಾಟಕ್ಕೆ ರಾಜ್ಯದ 5 ಸ್ಥಳಗಳಲ್ಲಿ ಶಾಶ್ವತ ಪ್ರದರ್ಶನ ಮಾರಾಟ ಮಳಿಗೆ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ… ಸಹಯೋಗದೊಂದಿಗೆ, ಬೆಳಗಾವಿಯ ಸದಾರ್ರ ಹೈಸ್ಕೂಲ… ಮೈದಾನದಲ್ಲಿ ಏರ್ಪಡಿಸಲಾದ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್‌ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ, ಆರಂಭಿಕ ಗ್ರಾಮೀಣ ಉದ್ಯಮ ಯೋಜನೆಯಡಿ ಸಮುದಾಯ ಉದ್ಯಮ ನಿಧಿ ವಿತರಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

Tap to resize

Latest Videos

ಅರಭಾವಿ ಕ್ಷೇತ್ರಕ್ಕೆ 860 ಕೋಟಿ ಬಂಪರ್‌: ಬಾಲಚಂದ್ರ ಜಾರಕಿಹೊಳಿ

ಸ್ತ್ರೀ ಸಾಮರ್ಥ್ಯ ಯೋಜನೆ ಮೂಲಕ ದೇಶದ ಅಭಿವೃದ್ಧಿ ಮಾಡುತ್ತಿರುವುದು ನಮ್ಮ ತಾಯಂದಿರು. ಸ್ತ್ರೀ ಸಾಮರ್ಥ್ಯದ ಮೌಲ್ಯಮಾಪನವಾಗಬೇಕು. ಮಹಿಳೆಯರು ನಿರ್ವಹಿಸುವ ಮನೆ ಕೆಲಸ ಹಾಗೂ ಸೇವೆ ಸಾಮನ್ಯವಾದುದಲ್ಲ. ಮಹಿಳೆಯರ ಶ್ರಮಕ್ಕೆ ಯಾರು ಬೆಲೆ ನೀಡುವುದಿಲ್ಲ. ಮನೆ ಕೆಲಸ ಮಾಡುವ ಮಹಿಳೆಯರಿಗೂ ಗೌರವ ಸಿಗಬೇಕು. ಅವರ ಕೆಲಸದ ಮೌಲ್ಯ ಮಾಪನವಾಗಬೇಕು. ಅವರ ಕೆಲಸಕ್ಕ ಆದಾಯ ಬರಬೇಕು. ಗ್ರಾಮೀಣ ಭಾಗದಲ್ಲಿ ಮಹಿಳೆಯರು ಪುರುಷರ ರೀತಿಯಲ್ಲಿ ಹೆಚ್ಚು ಕೆಲಸ ಮಾಡುತ್ತಾರೆ. …ಆದರೆ ಅವರಿಗೆ ಕಡಿಮೆ ಕೂಲಿ ನೀಡುತ್ತಾರೆ. ದೀನ ದಲಿತ ಮಹಿಳೆಯರು ಆಹಾರ ಕೊರತೆ ಎದುರಿಸುತ್ತಾರೆ. ಸ್ವಂತ ಭೂಮಿ ಇಲ್ಲದ ಅವರು ಬೇರೆಯವರ ಮನೆ ಹಾಗೂ ಜಮೀನಿನಲ್ಲಿ ದುಡಿಯುತ್ತಾರೆ.

ಮಹಿಳೆಯರಿಗಾಗಿ ಅಭಿವೃದ್ಧಿಗಾಗಿ ಮುಂದಿನ ಆಯವ್ಯಯದಲ್ಲಿ ವಿಶೇಷ ಯೋಜನೆ ಘೋಷಣೆ ಮಾಡಲಾಗುವುದು. ಸದ್ಯ ಸರ್ಕಾರದಿಂದ ಗ್ರಾ.ಪಂ. ವ್ಯಾಪ್ತಿಯಲ್ಲಿ 2 ಮಹಿಳಾ ಸಂಘಗಳಿಗೆ 1 ಲಕ್ಷ ಸಹಾಯಧನ ಹಾಗೂ ಬ್ಯಾಂಕ್‌ ಸಾಲ ನೀಡಿ ಅವರ ಸ್ವ ಉದ್ಯೋಗ ನೆರವು ನೀಡಲಾಗಿದೆ. ಅಮೃತ ಯೋಜನೆಯಡಿ 5000 ಸಾವಿರ ಮಹಿಳೆಯರಿಗೆ ಸಹಾಯ ಒದಗಿಸಲಾಗಿದೆ. ಕರಕುಶಲತೆ ಭಾರತೀಯ ನಾರಿಯರಿಗೆ ದೇವರು ಕೊಟ್ಟವರ. ಇದಕ್ಕೆ ಮಾರುಕಟ್ಟೆಒದಗಿಸಲು ಪ್ರದರ್ಶನ ಮೇಳ ಆಯೋಜಲಾಗಿದೆ. ಆನ್‌ ಲೈನ್‌ ಮಾರುಕಟ್ಟೆಗೆ ಮಹಿಳಾ ಸಂಘಗಳನ್ನು ಜೋಡಿಸಲು ಚಿಂತನೆ ನಡೆಸಲಾಗಿದೆ. ಮಹಿಳಾ ಉತ್ಪನ್ನಗಳಿಗೆ ಮಾರುಕಟ್ಟೆವಿಸ್ತರಿಸುವ ಕೆಲಸ ಮಾಡಲಾಗುವುದು. ಮಹಿಳೆಯರ ಸಾಮರ್ಥ್ಯದ ಮೇಲೆ ನಂಬಿಕೆಯಿಂದ ಹೆಚ್ಚಿನ ಬಂಡವಾಳ ಹೂಡಲು ಸಿದ್ಧನಿದ್ದೇನೆ. ಮಹಿಳೆಯರು ತಂತ್ರಜ್ಞಾನ ಅಳವಡಿಸಿಕೊಂಡು ನವೀನ ಮಾದರಿ ಉದ್ಯಮ ಪ್ರಾರಂಭಿಸಬೇಕು ಎಂದರು.

ಉನ್ನತ ಶಿಕ್ಷಣ, ಐಟಿ,ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಸಿ.ಎನ್‌. ಅಶ್ವಥ ನಾರಾಯಣ ಮಾತನಾಡಿ ಮುಖ್ಯಮಂತ್ರಿಗಳು ಮಹಿಳಾ ಸ್ವಸಹಾಯ ಸಂಘಗಳಿಗೆ ಶಕ್ತಿ ಹಾಗೂ ನಾಯತ್ವ ನೀಡಿ ಮಹಿಳೆಯರು ಸಬಲೀಕರಣಕ್ಕೆ ಹಗಲಿರುಳು ದುಡಿಯತ್ತಿದ್ದಾರೆ. ಸ್ವಸಹಾಯ ಸಂಘಗಳಿಗೆ ಪ್ರಥಮ ಆದ್ಯತೆ ನೀಡಲಾಗಿದೆ. ಮಹಿಳೆಯರ ಆರ್ಥಿಕ ಸದೃಢತೆ ಶ್ರಮಿಸುಲಾಗುತ್ತಿದೆ. ಈ ವರ್ಷದ ಆಯ್ಯವ್ಯಯದಲ್ಲಿ . 1000 ಕೋಟಿ ನೀಡಿ ಜೀವನೋಪಾಯ ವರ್ಷ ಎಂದು ಘೋಷಿಸಲಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಗೆ 500 ಕೋಟಿ ನೀಡಲಾಗಿದೆ. ಮಾರುಕಟ್ಟೆ ಬಲವರ್ಧನೆಗೆ , ಕೌಶಲ್ಯ ಅಭಿವೃದ್ಧಿ… ಇ ಕಾಮರ್ಸ… ಸಂಸ್ಥೆಗಳೊಂದಿಗೆ ಒಡಂಬಡಿಕೆಯ ಮಾಡಿಕೊಳ್ಳಲಾಗಿದೆ. ಆವಿಷ್ಕಾರ, ಪ್ರಗತಿಪರ ತಂತ್ರಜ್ಞಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಇದರ ಲಾಭ ಮಹಿಳೆಯರಿಗೂ ಲಭಿಸಿ ನಮ್ಮ ನಾಡಿನ ಮಹಿಳೆಯರು ವಿಶ್ವ ಮಟ್ಟದ ಪ್ರಗತಿ ಹೊಂದಬೇಕು. ರಾಜ್ಯದ ವಿವಿಧ ಜಿಲ್ಲೆಗಳ ಮಹಿಳಾ ಸ್ವ ಸಹಾಯ ಉತ್ಪನ್ನ ಸಂಘಗಳು ಭಾಗವಹಿಸಿದ ಬೆಳಗಾವಿಯ ಮೇಳ ಆಯೋಜನೆ . 1 ಕೋಟಿ ಖರ್ಚು ಮಾಡಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅನಿಲ… ಬೆನಕೆ ಮಾತನಾಡಿ, ಬೆಳಗಾವಿ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಗಡಿಯನ್ನು ಹಂಚಿಕೊಂಡಿದ್ದು, ಬೆಳಗಾವಿಯಲ್ಲಿ ಶಾಶ್ವತ ಪ್ರದರ್ಶನ ಹಾಗೂ ಮಾರುಕಟ್ಟೆಸ್ಥಾಪಿಸಲು ಮುಖ್ಯಮಂತ್ರಿಗಳಲ್ಲಿ ಕೋರಿದರು.

Tungabhadra Dam: ನವಲಿ ಸಮಾನಾಂತರ ಜಲಾಶಯ: ಶೀಘ್ರ ಸರ್ವಪಕ್ಷ ಸಭೆ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುರ್ಮಾ ಪ್ರಸ್ತಾವಿಕವಾಗಿ ಮಾತನಾಡಿ ಈ ಮೇಳದಲ್ಲಿ 160 ಮಳಿಗೆ ಸ್ಥಾಪಿಸಲಾಗಿದೆ. ಬಆಹಾರ ಮಳಿಗೆಗಳನ್ನು ತೆರೆಯಲಾಗಿದೆ. ಮಹಿಳೆಯ ಅಭಿವೃದ್ದಿಗಾಗಿ ಸ್ತ್ರೀ ಸಾಮರ್ಥ್ಯ ಯೋಜನೆಯಡಿ .500 ಕೋಟಿ ಅನುದಾನ ಒದಗಿಸಲಾಗಿದೆ. ಇದರಿಂದ 50 ಸಾವಿರ ಮಹಿಳಾ ಕುಟುಂಬಗಳಿಗೆ ಒಳಿತಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಉದ್ಯಮ ಯೋಜನೆಯಡಿ ಕೊಪ್ಪಳ ಹಾಗೂ ಮೈಸೂರಿನ ತಾಲೂಕುಗಳ ಮಹಿಳಾ ಸ್ವ ಸಹಾಯ ಸಂಘಗಳಿಗೆ . 50 ಲಕ್ಷ ಚೆಕ್‌ ವಿತರಣೆ ಮಾಡಲಾಯಿತು. ತಾಂತ್ರಿಕ ಬೆಂಬಲ ಸಂಸ್ಥೆಗಳಿಗೆ ಒಡಂಬಡಿಕೆಯ ಪತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ ಕಾರಜೋಳ, ಅಭಿವೃದ್ಧಿ ಆಯುಕ್ತ ಸರ್ಕಾರ ಪ್ರಧಾನ ಕಾರ್ಯದರ್ಶಿ ಐ.ಎನ್‌.ಎಸ್‌ ಪ್ರಸಾದ, ಜಿ.ಪಂ.ಸಿಇಓ ದರ್ಶನ ಮತ್ತಿತರರು ಉಪಸ್ಥಿತರಿದ್ದರು. ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕ ಡಾ. ರಾಗಪಿಯಾ.ಆರ್‌ ಸ್ವಾಗತಿಸಿದರು.

click me!