Grama Vastavya: ಶೀಘ್ರದಲ್ಲಿಯೇ ಮಹಿಳೆಯರ ಖಾತೆಗೆ 1000 ರೂ ಜಮೆ: ಸಚಿವ ಅಶೋಕ್‌

By Kannadaprabha News  |  First Published Feb 26, 2023, 9:23 AM IST

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತಿ ಕುಟುಂಬದ ಓರ್ವ ಮಹಿಳೆಯರ ಬ್ಯಾಂಕ್‌ ಖಾತೆಗೆ ಶೀಘ್ರದಲ್ಲಿಯೇ ಒಂದು ಸಾವಿರ ರು.ಗಳನ್ನು ಪ್ರತಿ ತಿಂಗಳು ಜಮೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು. 


ಬಾಗಲಕೋಟೆ (ಫೆ.26): ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತಿ ಕುಟುಂಬದ ಓರ್ವ ಮಹಿಳೆಯರ ಬ್ಯಾಂಕ್‌ ಖಾತೆಗೆ ಶೀಘ್ರದಲ್ಲಿಯೇ ಒಂದು ಸಾವಿರ ರು.ಗಳನ್ನು ಪ್ರತಿ ತಿಂಗಳು ಜಮೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು. ಜಿಲ್ಲೆಯ ಕಲಾದಗಿ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡ ಜಿಲ್ಲಾ​ಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿವೆ. ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಪ್ರತಿ ಕುಟುಂಬದ ಓರ್ವ ಮಹಿಳಾ ಮುಖ್ಯಸ್ಥರ ಖಾತೆಗೆ ನೇರವಾಗಿ ಒಂದು ಸಾವಿರ ರು.ಗಳನ್ನು ನೀಡುವ ಯೋಜನೆ ರೂಪಿಸಲಾಗಿದ್ದು, ಶೀಘ್ರದಲ್ಲಿಯೇ ಈ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದರು.

ಗ್ರಾಮಗಳತ್ತ ಅಧಿ​ಕಾರಿಗಳು: ಸರ್ಕಾರ ಹಲವಾರು ಉಪಯುಕ್ತ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಅ​ಧಿಕಾರಿಗಳು ಒಂದು ತೀರ, ಫಲಾನುಭವಿಗಳು ಒಂದು ತೀರದಂತಾಗಿತ್ತು. ನಡುವೆ ಸಂಪರ್ಕ ಸೇತುವೆ ನಿರ್ಮಾಣ ಮಾಡುವ ದೃಷ್ಟಿಯಿಂದ ಜಿಲ್ಲಾ​ಧಿಕಾರಿಗಳು ಗ್ರಾಮಕ್ಕೆ ತೆರಳಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಇತ್ಯರ್ಥಪಡಿಸುವ ಕಾರ್ಯ ಮಾಡಲಾಗುತ್ತಿದೆ. ಇದರಿಂದ ಅಂಗವಿಕಲರಿಗೆ, ಅನಾಥರಿಗೆ, ವೃದ್ಧರಿಗೆ, ಅಸಹಾಯಕರಿಗೆ ಹಾಗೂ ಮುಗ್ಧ ಜನರು ಸರ್ಕಾರಿ ಕಚೇರಿಗಳಿಗೆ ತೆರಳಿ ಹಣ ಹಾಗೂ ಸಮಯ ವ್ಯರ್ಥವಾಗುವುದನ್ನು ತಪ್ಪಿಸಲಾಗುತ್ತಿದೆ. ಪ್ರತಿಯೊಬ್ಬ ಅ​ಧಿಕಾರಿಯು ಗ್ರಾಮದತ್ತ ತೆರಳಿ ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.

Tap to resize

Latest Videos

undefined

ದೇಶದ ಏಕತೆ, ಪ್ರಜಾಪ್ರಭುತ್ವ ಉಳಿಯಲು ಅಂಬೇಡ್ಕರ್‌ ಹೆಣೆದ ಸೂತ್ರ ಕಾರಣ: ಸಿಎಂ ಬೊಮ್ಮಾಯಿ

4.74 ಲಕ್ಷ ಕುಟುಂಬಗಳಿಗೆ ಸರ್ಕಾರಿ ಸೇವೆ: ಜಿಲ್ಲಾ​ಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ರಾಜ್ಯದಲ್ಲಿ ಇಲ್ಲಿಯವರೆಗೆ 4.74 ಲಕ್ಷ ಕುಟುಂಬಗಳಿಗೆ ಸರ್ಕಾರಿ ಸೌಭ್ಯಗಳನ್ನು ವಿತರಣೆ ಮಾಡಲಾಗಿದೆ. ಸರ್ಕಾರಿ ಜಾಗೆಯನ್ನು ಭೂ ಪರಿವರ್ತನೆ ಮಾಡಿಕೊಳ್ಳುವ ರೈತರಿಗೆ ಹಕ್ಕುಪತ್ರ ನೀಡುವ ಉದ್ದೇಶದಿಂದ ಭೂಕಬಳಿಕೆ ಕಾಯ್ದೆಯಲ್ಲಿ ಬದಲಾವಣೆ ತರಲಾಗಿದೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದು ಬಾರಿ ಕಂದಾಯ ದಾಖಲೆಗಳನ್ನು ಉಚಿತವಾಗಿ ನೀಡಲಾಗಿದೆ. ಕೃಷಿಕರಿಗೆ, ವೈಜ್ಞಾನಿಕ ಪದ್ಧತಿ ಅಳವಡಿವವರಿಗೆ ಪ್ರೋತ್ಸಾಹ ನೀಡಬೇಕು. ಆ ದಿಶೆಯಿಂದ 79ಅ ಮತ್ತು 79ಬಿ ತೆಗೆದು ಹಾಕಲಾಗಿದೆ ಎಂದರು.

ಹಿಂದಿನಿಂದ ಇಂದಿನವರೆಗೂ ತಾಂಡಾಗಳಿಗೆ ಹೆಸರಿಲ್ಲದೇ ಕಂದಾಯ ಗ್ರಾಮಗಳಾಗದೇ ಅತಂತ್ರ ಸ್ಥಿತಿಯಲ್ಲಿದ್ದವು. ಅಂತಹ ತಾಂಡಾಗಳನ್ನು ಗುರುತಿಸಿ ಕಾಯ್ದೆಯಲ್ಲಿ ತಿದ್ದುಪಡಿ ತರುವ ಮೂಲಕ 51 ಸಾವಿರ ಕುಟುಂಬಗಳಿಗೆ ಸ್ಥಳದಲ್ಲಿಯೇ ಹಕ್ಕುಪತ್ರ ವಿತರಿಸಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿಯೂ ಇಂತಹ ಪ್ರಸಂಗವಿದ್ದು, ಅಲ್ಲಿಯೂ ಹಕ್ಕುಪತ್ರ ವಿತರಣೆಗೆ ಕ್ರಮವಹಿಸಲಾಗುತ್ತಿದೆ. ಇಂತಹ ವಿನೂತನ ಯೋಜನೆ ಯಾವುದೇ ಸರ್ಕಾರ ಬರಲಿ ಹೋಗಲಿ ನಿರಂತರವಾಗಿ ಮುಂದುವರೆಯಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಶಿಸಿದರು. ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನರಿಗೆ ಅನೇಕ ಉಪಯುಕ್ತವಾದ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಇಂತಹ ಯೋಜನೆಗಳಿಂದ ಗ್ರಾಮಗಳ ಹೆಸರಿಲ್ಲದೇ ಅನೇಕ ತಾಂಡಾಗಳು ಗ್ರಾಮಗಳಾಗಿ ಪರಿವರ್ತನೆಗೊಂಡಿವೆ. 

ಆರ್‌.ಅಶೋಕ ಅವರ ಮುಂದಾಲೋಚನೆಯಿಂದ ಈ ಕಾರ್ಯ ಯಶಸ್ವಿಯಾಗಿದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿ​ಕಾರಿ ಪಿ.ಸುನೀಲ್‌ಕುಮಾರ, ಜಿಲ್ಲಾಧಿ​ಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಿಂದ ಗ್ರಾಮದ ಜನರ ಮನೆ ಬಾಗಿಲಿಗೆ ಯೋಜನೆಗಳನ್ನು ತಲುಪಿಸಲು ಸಾಧ್ಯವಾಗಿದೆ. ಕಂದಾಯ ಸಚಿವರ ಆದೇಶದನ್ವಯ ಪ್ರತಿ ಮಂಗಳವಾರ ಜಿಲ್ಲೆಯ ಒಂದು ತಾಲೂಕಿಗೆ ಭೇಟಿ ನೀಡುತ್ತಿರುವುದರಿಂದ ಕಡತಗಳು ತುರ್ತಾಗಿ ವಿಲೇಯಾಗುತ್ತಿವೆ. ಈ ಕಾರ್ಯಕ್ರಮದಿಂದ ಗ್ರಾಮಗಳ ರಸ್ತೆ ಸುಧಾರಣೆ, ವಿದ್ಯಾರ್ಥಿಗಳಿಗೆ ಬಸ್‌ ಸೌಲಭ್ಯ, ಪಹಣಿ ತಿದ್ದುಪಡಿ ಸೇರಿದಂತೆ ಅನೇಕ ಕಾರ್ಯಗಳು ನಡೆಯುತ್ತಿದೆ ಎಂದರು.

ದಿಲ್ಲಿಯಲ್ಲಿ ಪ್ರಧಾನಿ ಮೋದಿ ಕನ್ನಡ ಡಿಂಡಿಮ: ಕರ್ನಾಟಕದ ಪರಂಪರೆಗೆ ಭಾರಿ ಮೆಚ್ಚುಗೆ

ಕಾರ್ಯಕ್ರಮದಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ವಿಧಾನ ಪರಿಷತ್‌ ಸದಸ್ಯರಾದ ಎಚ್‌.ಆರ್‌.ನಿರಾಣಿ, ಪಿ.ಎಚ್‌.ಪೂಜಾರ, ವಿಧಾನ ಪರಿಷತ್‌ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಕಲಾದಗಿ ಗ್ರಾಪಂ ಅಧ್ಯಕ್ಷ ಜಮೀರಹಮದ್‌ ಜಮಾದಾರ, ಸಿಇಒ ಟಿ ಭೂಬಾಲನ್‌, ಯುಕೆಪಿ ವಿಶೇಷ ಜಿಲ್ಲಾಧಿ​ಕಾರಿ ಸೋಮಲಿಂಗ ಗೆನ್ನೂರ, ಅಪರ ಜಿಲ್ಲಾಧಿ​ಕಾರಿ ರಮೇಶ ಕಳಸದ, ಪ್ರೊಬೇಷನರಿ ಐ.ಎ.ಎಸ್‌ ಅಧಿ​ಕಾರಿ ಕನಿಷ್ಕ, ಉಪವಿಭಾಗಾ​ಧಿಕಾರಿ ಶ್ವೇತಾ ಬೀಡಿಕರ, ತಹಶೀಲ್ದಾರರಾದ ಅಮರೇಶ ಪಮ್ಮಾರ, ಸುಹಾಷ ಇಂಗಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

click me!