
ಬೆಂಗಳೂರು (ಜ.25): ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ 103 ಇನ್ಸ್‌ಪೆಕ್ಟರ್‌ಗಳು ಹಾಗೂ 23 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗೇನಾದರೂ ವರ್ಗಾವಣೆಯ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳಿಸದೇ ಇರುವ ಅಧಿಕಾರಿಗಳು ಮುಂದಿನ ಸೇವಾ ಸ್ಥಳದ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ವರ್ಗಾವಣೆಯಾಗಿರುವ ಪೊಲೀಸ್ ಅಧಿಕಾರಿಗಳು ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಸ್ಥಳದಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರ ನಿರ್ದೇಶನದಂತೆ ಐಪಿಎಸ್ ಉಮೇಶ್ ಕುಮಾರ್ ಅದೇಶ ಹೊರಡಿಸಿದ್ದಾರೆ.
ಸಂಬಂಧಪಟ್ಟ ಘಟಕಾಧಿಕಾರಿಗಳು ಮೇಲ್ಕಂಡ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆವರದಿ ಮಾಡಿಕೊಳ್ಳುವಂತೆ ಸೂಚಿಸುವುದು ಹಾಗೂ ಸದರಿ ಅಧಿಕಾರಿಗಳು ಬಿಡುಗಡೆಗೊಂಡ ಮತ್ತು ವರದಿ ಮಾಡಿದ ಬಗ್ಗೆ ಕಚೇರಿಗೆ ಪಾಲನಾ ವರದಿ ಸಲ್ಲಿಸಬೇಕೆಂದು ಹೇಳಲಾಗಿದೆ.
ವರ್ಗಾವಣೆಗೊಂಡಿರುವ 23 ಡಿವೈಎಸ್‌ಪಿ ಅಧಿಕಾರಿಗಳು:
ವರ್ಗಾವಣೆಗೊಂಡಿರುವ 103 ಪೊಲೀಸ್ ಇನ್ಸ್‌ಪೆಕ್ಟರ್‌ಗಳು:
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ