ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ: ಬುಧವಾರ ದಾಖಲೆ ಪ್ರಮಾಣದಲ್ಲಿ ಸೋಂಕಿತರು ಪತ್ತೆ

By Suvarna NewsFirst Published Oct 8, 2020, 9:47 PM IST
Highlights

ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಗುರುವಾರ ದಾಖಲೆ ಪ್ರಮಾಣದಲ್ಲಿ ಕೊರೋನಾ ಸೊಂಕಿತರ ಕೇಸ್ ಪತ್ತೆಯಾಗಿವೆ.

ಬೆಂಗಳೂರು, (ಅ.08): ರಾಜ್ಯದಲ್ಲಿ ಇಂದು (ಗುರುವಾರ) 10,704 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6,79,356ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್‌ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 101 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9,675.

ಕೊರೋನಾ ಪ್ರಕರಣಗಳು ಹೆಚ್ಚಾಗಿರುವ 10 ಜಿಲ್ಲೆಗಳ DC, ACಗಳಿಗೆ ಸಿಎಂ ಟಾಸ್ಕ್..!

ಗುರುವಾರ 9,613 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 5,52,519ಕ್ಕೆ ಏರಿಕೆಯಾಗಿದೆ. 1,17,143 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದ್ರೆ 5,121 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯಲ್ಲಿ ಸೋಂಕಿತರ ಸಂಖ್ಯೆ 2,67,362ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.

click me!