ರಾಜ್ಯದಲ್ಲಿ ಕೊರೋನಾ ಕೊಂಚ ಏರಿಕೆ, ಪಾಸಿಟಿವಿಟಿ ಶೇ.6.68ಕ್ಕೆ ಇಳಿಕೆ: ಇಲ್ಲಿದೆ ಜೂ. 09ರ ಅಂಕಿ-ಸಂಖ್ಯೆ

By Suvarna NewsFirst Published Jun 9, 2021, 10:10 PM IST
Highlights

* ರಾಜ್ಯದಲ್ಲಿ ಕೊರೋನಾ ಕೊಂಚ ಏರಿಕೆ
* ಜೂನ್ 9ರಂದು 10,959 ಕೊರೋನಾ ಪಾಸಿಟಿವ್ ಕೇಸ್ ಪತ್ತೆ
* ಆರೋಗ್ಯ ಇಲಾಖೆಯಿಂದ ಮಾಹಿತಿ 

ಬೆಂಗಳೂರು, (ಜೂನ್.09): ರಾಜ್ಯದಲ್ಲಿ ಇಂದು (ಬುಧವಾರ) 44,094 Rapid ಆಯಂಟಿಜೆನ್ ಟೆಸ್ಟ್ ಹಾಗೂ 1,19,868 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,63,962 ಕೊರೋನಾ ಪರೀಕ್ಷೆಗಳನ್ನು ಮಾಡಲಾಗಿದೆ.

 ಈ ಪೈಕಿ  10,959 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಈವರೆಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27,28,248 ಕ್ಕೆ ಏರಿಕೆಯಾಗಿದೆ. ನಿನ್ನೆಗೆ (ಜೂನ್.08) ಕಂಪೇರ್ ಮಾಡಿದ್ರೆ ಇವತ್ತು ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ  ಕೊಂಚ ಏರಿಕೆ ಕಂಡಿದೆ.

ಕಳೆದ 24 ಗಂಟೆಗಳಲ್ಲಿ 20,246 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ 24,80,411 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಪಾಸಿಟಿವಿಟಿ ದರ ಶೇಕಡ 6.68 ರಷ್ಟು ಇಳಿಕೆಯಾಗಿದೆ.

3ನೇ ಅಲೆಗೂ ಮುನ್ನ ಕವಾಸಾಕಿಯಿಂದ ಮಕ್ಕಳ ರಕ್ಷಣೆ  ಹೇಗೆ?

ಇನ್ನು ಬುಧವಾರ 192 ಮಂದಿ ಸಾವನ್ನಪ್ಪಿದ್ದು, ಈವರೆಗೆ ಕೊರೋನಾಗೆ ಬಲಿಯಾದವರ ಸಂಖ್ಯೆ 32,291ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 2,15,525 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನ ಅಂಕಿ-ಸಂಖ್ಯೆ
ಬೆಂಗಳೂರಿನಲ್ಲಿ ಇಂದು ಒಂದೇ ದಿನ 2395 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 11,89.541ಕ್ಕೆ ಏರಿಕೆಯಾಗಿದೆ. ಈ ಪೈಕಿ 10,76,247 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 50 ಜನರು ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ ಸತ್ತವರ ಒಟ್ಟು ಸಂಖ್ಯೆ 15,168ಕ್ಕೆ ಏರಿಕೆಯಾಗಿದೆ. 98,125 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾವಾರು ಕೇಸ್
ಬಾಗಲಕೋಟೆ 96, ಬಳ್ಳಾರಿ 211, ಬೆಳಗಾವಿ 341, ಬೆಂಗಳೂರು ಗ್ರಾಮಾಂತರ 385, ಬೀದರ್ 9, ಚಾಮರಾಜನಗರ 254, ಚಿಕ್ಕಬಳ್ಳಾಪುರ 268, ಚಿಕ್ಕಮಗಳೂರು 339, ಚಿತ್ರದುರ್ಗ 200, ದಕ್ಷಿಣ ಕನ್ನಡ 594, ದಾವಣಗೆರೆ 227, ಧಾರವಾಡ 275, ಗದಗ 95, ಹಾಸನ 745, ಹಾವೇರಿ 97, ಕಲಬುರಗಿ 48, ಕೊಡಗು 216, ಕೋಲಾರ 239, ಕೊಪ್ಪಳ 157, ಮಂಡ್ಯ 397, ಮೈಸೂರು 1163, ರಾಯಚೂರು 20, ರಾಮನಗರ 50, ಶಿವಮೊಗ್ಗ 562, ತುಮಕೂರು 662, ಉಡುಪಿ 413, ಉತ್ತರ ಕನ್ನಡ 312, ವಿಜಯಪುರ 158, ಯಾದಗಿರಿ 31.

click me!