
ಬೆಂಗಳೂರು, (ಏ.14): ಕರ್ನಾಟಕದಲ್ಲಿ ದಿನ ದಿನಕ್ಕೂ ಕಿಲ್ಲರ್ ಕೊರೋನಾ ಆತಂಕ ಸೃಷ್ಟಿಸುತ್ತಿದೆ. ಮೊದಲ ಅಲೆಗಿಂತಲೂ ಎರಡನೇ ಅಲೆ ಬಲು ಭೀಕರವಾಗಿದೆ.
ಇಂದು (ಬುಧವಾರ) ಒಂದೇ ದಿನದಲ್ಲಿ 11265 ಕೊರೋನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, 38 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಮೊದಲಿಗಿಂತಲೂ 2ನೇ ಅಲೆ ಬಲು ಭೀಕರ, ಇರಲಿ ಎಚ್ಚರ!
ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 1094912 ಕ್ಕೇರಿದರೆ, ಸಾವಿನ ಸಂಖ್ಯೆ 13046ಕ್ಕೆ ಏರಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 4364 ಜನ ಗುಣಮುಖರಾಗಿದ್ದಾರೆ. ಇದರೊಂದಿಗೆ ಇದುವರೆಗೆ 996367 ಜನ ಗುಣಮುಖರಾಗಿದ್ದಾರೆ. ಸದ್ಯ 85480 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 506 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ