ರಾಜ್ಯದಲ್ಲಿ ಮಿತಿಮೀರಿದ್ದ ಕೊರೊನಾ ಹಾವಳಿ ನಿಧಾನವಾಗಿ ತಗ್ಗತ್ತಿದೆ. ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ ಸಾವಿರದ ಆಸುಪಾಸಿನಲ್ಲಿ ಹೊಸ ಪ್ರಕರಣ ಪತ್ತೆ ಆಗುತ್ತಿದೆ.
ಬೆಂಗಳೂರು, (ಡಿ.20): ನಿತ್ಯ ರಾಜ್ಯದಲ್ಲಿ ಹೊಸ ಕೇಸ್ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿರುವುದು ಜನರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.
ಕರ್ನಾಟಕದಲ್ಲಿ ಇಂದು (ಭಾನುವಾರ) ಹೊಸದಾಗಿ 1194 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 9,09,469ಕ್ಕೇರಿದೆ.
undefined
ಇನ್ನು ಸೋಕಿನಿಂದ 5 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿರುವುದು ನಿಟ್ಟುಸಿರು ಬಿಡುವಂತೆ ಮಾಡಿದ್ದು, ರಾಜ್ಯದಲ್ಲಿ ಇದುವರೆಗೆ ಕೊರೋನಾದಿಂದ 12,009 ಜನರ ಸಾವನಪ್ಪಿದ್ದಾರೆ.
ವ್ಯಾಕ್ಸಿನ್ ಕೊಟ್ಟ ಜಾಗದಲ್ಲಿ ರಿಯಾಕ್ಷನ್, ಶುರುವಾಗಿದೆ ಟೆನ್ಷನ್; ಲಸಿಕೆ ಕೂಡಾ ಸೇಫಲ್ಲ?
ಸೋಂಕಿತರ ಪೈಕಿ 8,82,944 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 14,497 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರಲ್ಲಿ 219 ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನಲ್ಲಿಂದು 659 ಹೊಸ ಕೊರೋನಾ ಕೇಸ್ ಪತ್ತೆ ಆಗಿದೆ. 5 ಜನರ ಪೈಕಿ ಇಬ್ಬರು ಬೆಂಗಳೂರಿನಲ್ಲೇ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.