Corona Crisis: ಮತ್ತೆ ಸಾವಿರ ದಾಟಿದ ಕೊರೋನಾ: 1231 ಕೇಸು

Published : Jul 14, 2022, 04:30 AM IST
Corona Crisis: ಮತ್ತೆ ಸಾವಿರ ದಾಟಿದ ಕೊರೋನಾ: 1231 ಕೇಸು

ಸಾರಾಂಶ

ರಾಜ್ಯದಲ್ಲಿ ದೈನಂದಿನ ಕೋವಿಡ್‌ ಸೋಂಕಿತರ ಸಂಖ್ಯೆ ಮತ್ತೆ ಸಾವಿರದ ಗಡಿ ದಾಟಿದೆ. ಬುಧವಾರ 1,231 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು 1,047 ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್‌ ಸಾವು ವರದಿ ಆಗಿಲ್ಲ. 

ಬೆಂಗಳೂರು (ಜು.14): ರಾಜ್ಯದಲ್ಲಿ ದೈನಂದಿನ ಕೋವಿಡ್‌ ಸೋಂಕಿತರ ಸಂಖ್ಯೆ ಮತ್ತೆ ಸಾವಿರದ ಗಡಿ ದಾಟಿದೆ. ಬುಧವಾರ 1,231 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು 1,047 ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್‌ ಸಾವು ವರದಿ ಆಗಿಲ್ಲ. ಜುಲೈ 8ರಂದು 1,037 ಪ್ರಕರಣ ವರದಿಯಾದ ಬಳಿಕ ದೈನಂದಿನ ಪ್ರಕರಣಗಳ ಸಂಖ್ಯೆ ಮೂರಂಕಿಗೆ ಇಳಿದಿತ್ತು. ಆದರೆ ಬುಧವಾರ ಮತ್ತೆ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. 

25,743 ಕೋವಿಡ್‌ ಪರೀಕ್ಷೆ ನಡೆದಿದ್ದು ಶೇ.4.78ರ ಪಾಸಿಟಿವಿಟಿ ದರ ದಾಖಲಾಗಿದೆ. ಜೂನ್‌ 29ರಂದು ಶೇ. 4.84ರ ಪಾಸಿಟಿವಿಟಿ ದರ ದಾಖಲಾದ ಬಳಿಕದ ಅತಿ ಹೆಚ್ಚಿನ ಪಾಸಿಟಿವಿಟಿ ದರ ವರದಿಯಾಗಿದೆ. ಬೆಂಗಳೂರು ನಗರದಲ್ಲಿ 1,124 ಪ್ರಕರಣ ವರದಿಯಾಗಿದ್ದು ಉಳಿದಂತೆ ಧಾರವಾಡ 19, ಮೈಸೂರು 13, ಕೋಲಾರ 11, ದಕ್ಷಿಣ ಕನ್ನಡ 9, ಉಡುಪಿ, ತುಮಕೂರು ಮತ್ತು ಕಲಬುರಗಿ ಜಿಲ್ಲೆಯಲ್ಲಿ ತಲಾ 7 ಪ್ರಕರಣ ಪತ್ತೆಯಾಗಿವೆ.

ಜುಲೈ 15 ರಿಂದ 18 ವರ್ಷ ಮೇಲ್ಪಟ್ಟವರಿಗೂ ಉಚಿತ ಬೂಸ್ಟರ್‌ ಡೋಸ್‌!

7 ಕೋವಿಡ್‌ ಪ್ರಕರಣ ಪತ್ತೆ: ಜಿಲ್ಲೆಯಲ್ಲಿ ಬುಧವಾರ 202 ಮಂದಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದ್ದು, ಅವರಲ್ಲಿ ಉಡುಪಿ ತಾಲೂಕಿನ 5 ಮತ್ತು ಕಾರ್ಕಳ ತಾಲೂಕಿನ 2 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈದಿನ 5 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 24 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 539 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ದ.ಕ.ದಲ್ಲಿ 9 ಕೊರೋನಾ ಪ್ರಕರಣ: ದ. ಕ. ಜಿಲ್ಲೆಯಲ್ಲಿ ಬುಧವಾರ 9 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 18 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 55ಕ್ಕೆ ಇಳಿದಿದೆ. ಜಿಲ್ಲೆಯಲ್ಲಿ ಇದುವರೆಗೆ 1, 35, 982 ಮಂದಿ ಸೋಂಕಿತರಾಗಿದ್ದು, ಅವರಲ್ಲಿ 1, 34, 075 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1852 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಬುಲೆಟಿನ್‌ ತಿಳಿಸಿದೆ.

ಕೋವಿಡ್‌ ಸೋಂಕು ಪತ್ತೆಯಾದರೆ ಸೀಲ್‌ಡೌನ್‌ ಇಲ್ಲ: ನಗರದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ ಲಕ್ಷಣಗಳಿರುವವರನ್ನು ಶಾಲೆ, ಕಾಲೇಜು ಮತ್ತು ಕಚೇರಿಗೆ ಹಾಜರಾಗದಂತೆ ಸೂಚಿಸಬೇಕು ಎಂಬುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಒಳಗೊಂಡ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೊರಡಿಸಿದೆ. 

ನಗರ ವ್ಯಾಪ್ತಿಗೆ ಅನ್ವಯಿಸಿ ಶಿಕ್ಷಣ ಸಂಸ್ಥೆ, ಕಾಲೇಜು ಹಾಗೂ ಅಪಾರ್ಟ್‌ಮೆಂಟ್‌ಗಳಲ್ಲಿ ಕೋವಿಡ್‌ ಪರೀಕ್ಷೆ, ಚಿಕಿತ್ಸೆ, ಕ್ವಾರಂಟೈನ್‌, ಪ್ರವೇಶ ಕುರಿತ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.  ಸೋಂಕು ಕಂಡು ಬಂದರೆ ಶಾಲೆಗಳನ್ನು ಮುಚ್ಚುವ ಅಥವಾ ಅಪಾರ್ಟ್‌ಮೆಂಟ್‌ಗಳನ್ನು ಸೀಲ್‌ಡೌನ್‌ ಮಾಡುವ ಅಗತ್ಯವಿಲ್ಲ ಎಂದು ಹೇಳಲಾಗಿದೆ. ಶಾಲೆಗಳಲ್ಲಿ (12 ತರಗತಿವರೆಗೆ) ಸೋಂಕು ಲಕ್ಷಣ ಹೊಂದಿರುವ ಮಕ್ಕಳನ್ನು ಶಾಲೆಗೆ ಹಾಜರಾಗದಂತೆ ಸೂಚಿಸಬೇಕು. 

Booster Dose: 3ನೇ ಡೋಸ್‌ ಪಡೆದಿದ್ದು ಬರೀ 15% ಜನ!

ಸೋಂಕು ಲಕ್ಷಣ ಹೊಂದಿರುವವರನ್ನು ರಾರ‍ಯಪಿಡ್‌ ಆ್ಯಂಟಿಜೆನ್‌ ಪರೀಕ್ಷೆಗೆ ಒಳಪಡಿಸಿ ಸೋಂಕು ದೃಢಪಟ್ಟಲ್ಲಿ ಅವರ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ಹೋಂ ಐಸೋಲೇಷನ್‌, ಕೋವಿಡ್‌ ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗೆ ದಾಖಲಿಸಬೇಕು. ವರದಿ ನೆಗೆಟಿವ್‌ ಬಂದಲ್ಲಿ ಆರ್‌ಟಿಪಿಸಿಆರ್‌ ಮಾದರಿ ಪರೀಕ್ಷೆ ವರದಿ ಬರುವವರೆಗೂ ನಿಗಾದಲ್ಲಿ ಇರಿಸಿ ನಂತರ ಕ್ರಮ ವಹಿಸಬೇಕು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌