ರಾಜ್ಯದಲ್ಲಿ ಸೋಮವಾರ 1,287 ಮಂದಿಯಲ್ಲಿ ಕೋವಿಡ್ - 19 ದೃಢಪಟ್ಟಿದೆ. ಇಬ್ಬರು ಮರಣವನ್ನಪ್ಪಿದ್ದಾರೆ. 1,531 ಮಂದಿ ಚೇತರಿಸಿಕೊಂಡಿದ್ದಾರೆ. ಕಲಬುರಗಿಯಲ್ಲಿ 68 ವರ್ಷ ಮತ್ತು ಹಾವೇರಿಯಲ್ಲಿ 45 ವರ್ಷದ ಪುರುಷ ಮರಣವನ್ನಪ್ಪಿದ್ದಾರೆ.
ಬೆಂಗಳೂರು (ಆ.02): ರಾಜ್ಯದಲ್ಲಿ ಸೋಮವಾರ 1,287 ಮಂದಿಯಲ್ಲಿ ಕೋವಿಡ್ - 19 ದೃಢಪಟ್ಟಿದೆ. ಇಬ್ಬರು ಮರಣವನ್ನಪ್ಪಿದ್ದಾರೆ. 1,531 ಮಂದಿ ಚೇತರಿಸಿಕೊಂಡಿದ್ದಾರೆ. ಕಲಬುರಗಿಯಲ್ಲಿ 68 ವರ್ಷ ಮತ್ತು ಹಾವೇರಿಯಲ್ಲಿ 45 ವರ್ಷದ ಪುರುಷ ಮರಣವನ್ನಪ್ಪಿದ್ದಾರೆ. 17,955 ಮಂದಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ಪಾಸಿಟಿವಿಟಿ ದರ ಶೇ.7.16 ದಾಖಲಾಗಿದೆ.
ಬೆಂಗಳೂರು ನಗರದಲ್ಲಿ 992, ಕೊಡಗು ಮತ್ತು ಮೈಸೂರಿನಲ್ಲಿ ತಲಾ 38, ಬೆಳಗಾವಿ 32, ಬಳ್ಳಾರಿ 26, ಕಲಬುರಗಿ 25, ಮಂಡ್ಯ 22, ತುಮಕೂರು ಮತ್ತು ಕೋಲಾರ ತಲಾ 19, ಚಿಕ್ಕಬಳ್ಳಾಪುರ 12 ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಈವರೆಗೆ 40.08 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು 39.57 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 40,106 ಮಂದಿ ಅಸುನೀಗಿದ್ದಾರೆ. ಸೋಮವಾರ 69,391 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ.
undefined
Corona Crisis: ಕರ್ನಾಟಕದಲ್ಲಿ 1692 ಮಂದಿಗೆ ಕೊರೋನಾ, ಇಬ್ಬರು ಸಾವು
ಉಡುಪಿಯಲ್ಲಿ 3 ಮಂದಿಗೆ ಕೋವಿಡ್: ಜಿಲ್ಲೆಯಲ್ಲಿ ಸೋಮವಾರ 110 ಮಂದಿಯ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಅವರಲ್ಲಿ ಉಡುಪಿ ತಾಲೂಕಿನ ಇಬ್ಬರು ಮತ್ತು ಕಾರ್ಕಳ ತಾಲೂಕಿನ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಈ ದಿನ 4 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 48 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 540 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.
ದ.ಕ.ದಲ್ಲಿ 10 ಮಂದಿಗೆ ಕೊರೋನಾ: ದ.ಕ. ಜಿಲ್ಲೆಯಲ್ಲಿ ಸೋಮವಾರ 10 ಕೊರೋನಾ ಕೇಸ್ ಪತ್ತೆಯಾಗಿದ್ದು, 22 ಮಂದಿ ಗುಣಮುಖರಾಗಿದ್ದಾರೆ. ಪ್ರಸಕ್ತ 85 ಸಕ್ರಿಯ ಪ್ರಕರಣ ಇದೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ.1.49 ಆಗಿದೆ. ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,36,255ಕ್ಕೆ ಏರಿಕೆಯಾಗಿದ್ದು, ಒಟ್ಟು 1,34,316 ಮಂದಿ ಗುಣಮುಖರಾಗಿದ್ದಾರೆ. 1,854 ಮಂದಿ ಸಾವಿಗೀಡಾಗಿದ್ದಾರೆ.
ಫ್ರೀ 3ನೇ ಡೋಸ್‌ಗೆ ಭಾರೀ ಬೇಡಿಕೆ: ಕೇಂದ್ರ ಸರ್ಕಾರವು 18-59 ವರ್ಷದವರಿಗೂ ಕೊರೋನಾ ಲಸಿಕೆ 3ನೇ ಡೋಸ್ (ಮುಂಜಾಗ್ರತಾ ಡೋಸ್ ಅಥವಾ ಬೂಸ್ಟರ್ ಡೋಸ್) ಉಚಿತ ನೀಡಲಾರಂಭಿಸಿದ ನಂತರ ರಾಜ್ಯದಲ್ಲಿ ಮೂರನೇ ಡೋಸ್ ಪಡೆಯುವವರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕಳೆದ 15 ದಿನಗಳಲ್ಲಿ ನಿತ್ಯ ಸರಾಸರಿ 1 ಲಕ್ಷ ಮಂದಿಯಂತೆ 15.8 ಲಕ್ಷ ಮಂದಿ 3ನೇ ಡೋಸ್ ಪಡೆದಿದ್ದಾರೆ.
ಏ.10ರಿಂದ ದೇಶಾದ್ಯಂತ ಕೊರೋನಾ ಲಸಿಕೆಯ ಮೂರನೇ ಡೋಸ್ ಆರಂಭಿಸಲಾಯಿತು. ಆರೋಗ್ಯ, ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟವರಿಗೆ ಮಾತ್ರ ಉಚಿತ ಎಂದು ಘೋಷಿಸಲಾಗಿತ್ತು. ಆದರೆ, 18-59 ವರ್ಷದವರಿಗೆ ಮಾತ್ರ 225 ರು. ಶುಲ್ಕ ನಿಗದಿ ಪಡಿಸಿ, ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಪಡೆಯುವಂತೆ ಸೂಚಿಸಲಾಗಿತ್ತು. ಲಸಿಕೆ ಉಚಿತವಾಗಿ ಲಭಿಸದಿದ್ದ ಕಾರಣ ಹಾಗೂ ಸರ್ಕಾರಿ ಆಸ್ಪತ್ರೆ ಬದಲು ಆಯ್ದ ಖಾಸಗಿ ಆಸ್ಪತ್ರೆಯಲ್ಲಿ ಮಾತ್ರ ಲಸಿಕೆ ಲಭಿಸುತ್ತಿದ್ದ ಕಾರಣ 18- 59 ವಯೋಮಾನದ ಬಹುತೇಕ ಜನರು ಲಸಿಕೆಯಿಂದ ದೂರು ಉಳಿದಿದ್ದರು.
ಮಂಕಿಪಾಕ್ಸ್ ಎಚ್ಚರಿಕೆಯ ಗಂಟೆ, ಸಾಂಕ್ರಾಮಿಕವಾಗಿ ಹರಡುವ ಭೀತಿ; WHO ವಿಜ್ಞಾನಿ
ಅದರಲ್ಲೂ ರಾಜ್ಯದಲ್ಲಿ ಏಪ್ರಿಲ್ 10ರಿಂದ ಜುಲೈ 15ವರೆಗೂ (96 ದಿನಗಳಲ್ಲಿ) ನಿತ್ಯ ಸರಾಸರಿ ನಾಲ್ಕು ಸಾವಿರದಂತೆ 3.9 ಲಕ್ಷ ಮಂದಿ (18-59 ವರ್ಷದವರು) ಮಾತ್ರ ಮೂರನೇ ಡೋಸ್ ಪಡೆದಿದ್ದರು. ಆದರೆ, ಜುಲೈ 15ರಿಂದ ಕೇಂದ್ರ ಸರ್ಕಾರವು ಕೊರೋನಾ ಲಸಿಕೆ ಅಮೃತ ಮಹೋತ್ಸವ ಅಭಿಯಾನ ಆರಂಭಿಸಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ನೀಡಲಾರಂಭಿಸಿದ ನಂತರ ಮೂರನೇ ಡೋಸ್ ಪಡೆಯುವವರ ಸಂಖ್ಯೆ ನಿತ್ಯ 1 ಲಕ್ಷಕ್ಕೆ ಹೆಚ್ಚಳವಾಗಿದೆ.