ಕನ್ನಡಪ್ರಭ, ಸುವರ್ಣ ನ್ಯೂಸ್‌ ‘ರೈತ ರತ್ನ’ ಪ್ರಶಸ್ತಿಗೆ 13 ಸಾಧಕರ ಆಯ್ಕೆ

By Kannadaprabha NewsFirst Published Feb 13, 2024, 6:49 AM IST
Highlights

ತೀರ್ಪುಗಾರರು ಒಟ್ಟಾರೆ 11 ವಿಭಾಗಗಳಲ್ಲಿ 13 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಲವೇ ದಿನಗಳಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಾಧಕ ರೈತರಿಗೆ ‘ರೈತ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಬೆಂಗಳೂರು(ಫೆ.13):  ಕೃಷಿಯಲ್ಲಿ ಅನನ್ಯ ಸಾಧನೆ ಮಾಡಿರುವ ರೈತರನ್ನು ಗುರುತಿಸಿ ಗೌರವಿಸಲೆಂದೇ ಕನ್ನಡಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜಂಟಿಯಾಗಿ ಸ್ಥಾಪಿಸಿರುವ ಪ್ರತಿಷ್ಠಿತ ‘ರೈತ ರತ್ನ’ ಪ್ರಶಸ್ತಿಯ 4ನೇ ಆವೃತ್ತಿಯ ವಿಜೇತರನ್ನು ತೀರ್ಪುಗಾರರು ಆಯ್ಕೆ ಮಾಡಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿರುವ ಕನ್ನಡಪ್ರಭ-ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಕೇಂದ್ರ ಕಚೇರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ತೀರ್ಪುಗಾರರು ಒಟ್ಟಾರೆ 11 ವಿಭಾಗಗಳಲ್ಲಿ 13 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಲವೇ ದಿನಗಳಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಾಧಕ ರೈತರಿಗೆ ‘ರೈತ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

Latest Videos

ಕನ್ನಡಪ್ರಭ, ಸುವರ್ಣನ್ಯೂಸ್‌ ‘ರೈತ ರತ್ನ’ ಪ್ರಶಸ್ತಿ : 11 ವಿಭಾಗದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ

ನಾಡಿನ ಮೂಲೆ ಮೂಲೆಯಿಂದ ಸುಮಾರು ಐನೂರಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ರೈತ ರತ್ನ ಪ್ರಶಸ್ತಿಗೆ ಸಾಧಕ ರೈತರನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ತೀರ್ಪುಗಾರರಿಗೆ ವಹಿಸಲಾಗಿತ್ತು. ಕೃಷಿ ತಜ್ಞರಾದ ಕೃಷ್ಣ ಪ್ರಸಾದ್‌, ಶಿವಾನಂದ ಕಳವೆ, ರತ್ನಗಿರಿ ಇಂಪೆಕ್ಸ್‌ ಸಂಸ್ಥೆಯ ಮುಖ್ಯಸ್ಥ ಎಸ್‌.ಎ.ವಾಸುದೇವಮೂರ್ತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್‌ ಪ್ರಾದೇಶಿಕ ನಿರ್ದೇಶಕ ಮನೋಜ್‌ ಮಿನೇಜಸ್‌ ಅವರು ತೀರ್ಪುಗಾರರಾಗಿ ಭಾಗವಹಿಸಿದ್ದರು.

11 ವಿಭಾಗಗಳಿಗೆ ನಾಮನಿರ್ದೇಶನ, 13 ಪ್ರಶಸ್ತಿ:

ಸುಸ್ಥಿರ ಕೃಷಿ, ಸಾವಯವ ಕೃಷಿ, ಆಧುನಿಕ ಕೃಷಿ, ಯುವ ರೈತ, ರೈತ ಮಹಿಳೆ, ಪಶು ಸಂಗೋಪನೆ, ತೋಟಗಾರಿಕೆ, ರೈತ ವಿಜ್ಞಾನಿ, ಕೃಷ್ಯುತ್ಪನ್ನ ಸಂಸ್ಥೆ ಅಥವಾ ವ್ಯಕ್ತಿ, ಕೃಷಿ ಸಂಶೋಧಕ ಅಥವಾ ತಂತ್ರಜ್ಞಾನಿ ಹಾಗೂ ಸುವರ್ಣ ಕೃಷಿ ಶಾಲೆ ಎಂಬ 11 ವಿಭಾಗಗಳಲ್ಲಿ ಪ್ರಶಸ್ತಿಗೆ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿತ್ತು.

ಸುಮಾರು ಎರಡು ತಿಂಗಳ ಕಾಲ ನಡೆದ ಪ್ರಕ್ರಿಯೆ ವೇಳೆ 500ಕ್ಕೂ ಹೆಚ್ಚು ನಾಮನಿರ್ದೇಶನಗಳು ಬಂದಿದ್ದವು. ಕನ್ನಡಪ್ರಭ ಸಂಪಾದಕೀಯ ತಂಡವು ಪ್ರತಿ ನಾಮನಿರ್ದೇಶನವನ್ನು ಕೂಲಂಕಷವಾಗಿ ಪರಿಶೀಲಿಸಿ ಪ್ರತಿ ವಿಭಾಗದಲ್ಲಿ ತಲಾ ಐದರಂತೆ ಸಾಧಕರನ್ನು ತೀರ್ಪುಗಾರರ ಸುತ್ತಿಗೆ ಆಯ್ಕೆ ಮಾಡಿತ್ತು.

Raita Ratna Award: ಗಾಳಿ, ನೀರಿನಷ್ಟೇ ರೈತರು ಅವಶ್ಯ: ರವಿ ಹೆಗಡೆ

ಆಯ್ದ 57 ನಾಮನಿರ್ದೇಶನಗಳನ್ನು ತೀರ್ಪುಗಾರ ಮುಂದಿಡಲಾಗಿತ್ತು. ಪ್ರತಿಯೊಂದು ಕ್ಷೇತ್ರದಲ್ಲೂ ಒಬ್ಬರಿಗಿಂತ ಇನ್ನೊಬ್ಬರು ಮಿಗಿಲು ಎಂಬಂತಿದ್ದ ರೈತ ಸಾಧಕರನ್ನು ತೀರ್ಪುಗಾರರು ಪರಸ್ಪರ ಸಮಾಲೋಚಿಸಿ, ಅಳೆದು ತೂಗಿ ಪ್ರಶಸ್ತಿಗೆ ಆರಿಸಿದರು. ಸುಮಾರು ನಾಲ್ಕು ತಾಸುಗಳ ಕಾಲ ನಡೆದ ಆಯ್ಕೆ ಪ್ರಕ್ರಿಯೆ ಬಳಿಕ 13 ಸಾಧಕರನ್ನು ಪ್ರಶಸ್ತಿಗೆ ಅಂತಿಮಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡಪ್ರಭದ ಪುರವಣಿ ಸಂಪಾದಕ ಗಿರೀಶ್‌ರಾವ್‌ ಹತ್ವಾರ್‌, ಕಾರ್ಯನಿರ್ವಾಹಕ ಸಂಪಾದಕ ವೆಂಕಟಸುಬ್ಬಯ್ಯ, ವಿಶೇಷ ಯೋಜನೆಗಳ ಸಂಪಾದಕ ವಿನೋದ್‌ಕುಮಾರ್‌ ಬಿ. ನಾಯ್ಕ್‌, ಉಪ ಸುದ್ದಿ ಸಂಪಾದಕ ಮಹಾಬಲ ಸೀತಾಳಭಾವಿ ಇದ್ದರು.

click me!