
ಬೆಂಗಳೂರು, (ಆ.15): ಕರ್ನಾಟಕ ಇಂದು (ಆ.15) ಹೊಸದಾಗಿ 1,431 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 21 ಜನರು ಸಾವನ್ನಪ್ಪಿದ್ದಾರೆ.
ಈ ಮೂಲಕ, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 29,29,464 ಕ್ಕೆ ಏರಿಕೆಯಾಗಿದ್ರೆ, ಈವರೆಗೆ ಕೊರೊನಾದಿಂದ 36,979 ಜನ ಸಾವನ್ನಪ್ಪಿದ್ದಾರೆ.
ಮಂಡ್ಯದಲ್ಲಿ ಮೂರನೆ ಅಲೆ ಭೀತಿ : ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ 40 ಮಂದಿಗೆ ಸೋಂಕು
ಸೋಂಕಿತರ ಪೈಕಿ 28,69,962 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇನ್ನೂ 22,497 ಕೊರೋನಾ ಸಕ್ರಿಯ ಪ್ರಕಟರಣಗಳಿವೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು (ಭಾನುವಾರ) ಒಂದೇ ದಿನ 305 ಕೇಸ್ ಪತ್ತೆಯಾಗಿದ್ದು, 3 ಮಂದಿ ಬಲಿಯಾಗಿದ್ದಾರೆ. ಈ ಮೂಲಕ, ಬೆಂಗಳೂರಲ್ಲಿ ಕೊರೋನಾ ಸಂಖ್ಯೆ 12,32,902ಕ್ಕೆ ಏರಿಕೆಯಾಗಿದ್ರೆ, ಈವರೆಗೆ 15,937 ಜನರ ಸಾವು ಸಂಭವಿಸಿದೆ. ಇನ್ನು 12,32,902 ಸೋಂಕಿತರ ಪೈಕಿ 12,08,798 ಜನರು ಗುಣಮುಖರಾಗಿದ್ದಾರೆ. ಈ ಮೂಲಕ ಬೆಂಗಳೂರಲ್ಲಿ 8,166 ಸಕ್ರಿಯ ಕೇಸ್‌ಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ