ಕರ್ನಾಟಕದಲ್ಲಿ ಮತ್ತೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮಂಗಳವಾರದಕ್ಕಿಂತ ಇಂದು (ಬುಧವಾರ) ಕೊರೋನಾ ಸಂಖ್ಯೆಯಲ್ಲಿ ಏರಿಕೆ ಕಂಡಿದೆ.
ಬೆಂಗಳೂರು, (ಡಿ.02): ರಾಜ್ಯದಲ್ಲಿ ಇಂದು (ಬುಧವಾರ) 1,440 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 8,87,667ಕ್ಕೆ ಏರಿಕೆಯಾಗಿದೆ.
ಮಂಗಳವಾರ 1330 ಕೊರೋನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದವು. ಇನ್ನು ಉಧವಾರ ಕೊರೋನಾಗೆ 19 ಮಂದಿ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 11,808ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 983 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ರಾಜ್ಯದಲ್ಲಿ 24,150 ಸಕ್ರಿಯ ಪ್ರಕರಣಗಳಿವೆ.
undefined
ಕರ್ನಾಟಕದಲ್ಲಿ ಕೊಂಚ ಕೊರೋನಾ ಏರಿಕೆ: ಇರಲಿ ಎಚ್ಚರಿಕೆ..!
ಸದ್ಯ ರಾಜ್ಯದಲ್ಲಿ 318 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಯುತ್ತಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.35 ಮತ್ತು ಮರಣ ಪ್ರಮಾಣ ಶೇ.1.11ರಷ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಬೆಂಗಳೂರು ವರದಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, 712 ಹೊಸ ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 3,71,204ಕ್ಕೆ ಏರಿಕೆಯಾಗಿದ್ದು, 18,394 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ಬೆಂಗಳೂರು ನಗರದಲ್ಲಿ 4,156 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.