ಕರ್ನಾಟಕದಲ್ಲಿ ಕೊರೋನಾ: ಇಲ್ಲಿದೆ ಜು.20ರ ಅಂಕಿ-ಸಂಖ್ಯೆಯ ವಿವರ

By Suvarna NewsFirst Published Jul 20, 2021, 9:42 PM IST
Highlights

* ಕರ್ನಾಟಕಲ್ಲಿ ಇಂದು (ಜುಲೈ 20) 1,464 ಜನರಿಗೆ ಕೊರೋನಾ ಸೋಂಕು ದೃಢ
* 29 ಜನ ಮಹಾಮಾರಿಗೆ ಬಲಿ
* ಕೊರೋನಾ ಪಾಸಿಟಿವಿಟಿ ದರ ಶೇ.1.29
* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ

ಬೆಂಗಳೂರು, (ಜು.20): ಕರ್ನಾಟಕಲ್ಲಿ ಇಂದು (ಜುಲೈ 20) 1,464 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 29 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 28,86,702ಕ್ಕೆ ಏರಿಕೆಯಾಗಿದ್ರೆ, ಈವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 36,226 ಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆ: ಏನು ಓಪನ್? ಏನಿಲ್ಲ?

ಸೋಂಕಿತರ ಪೈಕಿ 28,24,197 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 26,256 ಕೊರೋನಾ ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ.1.29 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 352 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, 5 ಮಂದಿ ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,22,807ಕ್ಕೆ ಏರಿಕೆಯಾಗಿದೆ. ಈ ಪೈಕಿ 11,96,953 ಜನರು ಗುಣಮುಖರಾಗಿದ್ದಾರೆ.

ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,807 ಜನರ ಸಾವು ಸಂಭವಿಸಿದೆ. ಇನ್ನು ಸದ್ಯ ಸಿಲಿಕಾನ್ ಸಿಟಿಯಲ್ಲಿ 10,046 ಸಂಕ್ರಿಯ ಪ್ರಕಟರಣಗಳಿವೆ.

click me!