ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 1,492 ಕೋಟಿ ರು. ಅನುದಾನ

By Kannadaprabha News  |  First Published Jun 26, 2021, 8:12 AM IST

* 1492.97 ಕೋಟಿ ರು. ಅನುದಾನಕ್ಕೆ ರಾಜ್ಯಪಾಲರ ಅನುಮೋದನೆ
* ನಂಜುಂಡಪ್ಪ ವರದಿ ಆಧರಿಸಿ ಅನುದಾನ ಹಂಚಿಕೆ 
* ಕ್ರಿಯಾಯೋಜನೆ ರೂಪಿಸಲು ರಾಜ್ಯಪಾಲರಿಂದ ಹಸಿರು ನಿಶಾನೆ


ಬೆಂಗಳೂರು(ಜೂ.26):   ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಸಕ್ತ ಸಾಲಿನ ಕ್ರಿಯಾಯೋಜನೆ ರೂಪಿಸಲು 1492.97 ಕೋಟಿ ರು. ಅನುದಾನಕ್ಕೆ ರು ಅನುಮೋದನೆ ನೀಡಿದ್ದಾರೆ.
ಟಿಎಸ್‌ಪಿ ಯೋಜನೆಗೆ 100 ಕೋಟಿ ರು., ಎಸ್‌ಸಿಪಿ ಯೋಜನೆಗೆ 300 ಕೋಟಿ ರು. ಹಾಗೂ ಸಾಮಾನ್ಯ 1092.97 ಕೋಟಿ ರು. ಅನುದಾನ ಹಂಚಿಕೆ ಮಾಡಲಾಗಿದ್ದು, ಅದರಂತೆ ಕ್ರಿಯಾಯೋಜನೆ ರೂಪಿಸಲು ರಾಜ್ಯಪಾಲರಿಂದ ಹಸಿರು ನಿಶಾನೆ ದೊರೆತಿದೆ.

2021-22 ನೇ ಸಾಲಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಒದಗಿಸಲಾಗಿರುವ 1492.97 ಕೋಟಿ ರು. ಅನುದಾನಕ್ಕೆ ಮಂಡಳಿ ವ್ಯಾಪ್ತಿಯ ಜಿಲ್ಲೆ ಹಾಗೂ ತಾಲ್ಲೂಕುಗಳಿಗೆ ನಂಜುಂಡಪ್ಪ ವರದಿ ಆಧರಿಸಿ ಅನುದಾನ ಹಂಚಿಕೆ ಮಾಡಲಾಗಿದೆ. ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಗಳಡಿ ಮಂಡಳಿಯ ಒಟ್ಟು ಅನುದಾನದ ಶೇ. 84 ರಷ್ಟು ದಲ್ಲಿ ಮೈಕ್ರೋ ಯೋಜನೆಗೆ ಶೇ.70ರಷ್ಟು ಅನುದಾನವನ್ನು ತಾಲ್ಲೂಕುವಾರು ಹಂಚಿಕೆ ಮಾಡಲಾಗುವುದು. ಮ್ಯಾಕ್ರೋ ಯೋಜನೆಗೆ ಶೇ. 30 ರಷ್ಟು ಅನುದಾನವನ್ನು ಬೃಹತ್‌ ಮೊತ್ತದ ಮೂರ್ನಾಲ್ಕು ಯೋಜನೆಗಳಿಗೆ ಮಾತ್ರ ಹಂಚಿಕೆ ಮಾಡಲಾಗುವುದು.

Tap to resize

Latest Videos

ಕೆರಳಿದ ಕಲ್ಯಾಣ: ಸರ್ಕಾರದ ಬಳಿಗೆ ನಿಯೋಗಕ್ಕೆ ನಿರ್ಧಾರ

ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಲಯಗಳು, ಕೈಗಾರಿಕೆ, ಕೌಶಲ್ಯಾಭಿವೃದ್ಧಿ, ನೀರಾವರಿ, ಕುಡಿಯುವ ನೀರು, ರಸ್ತೆ ಮತ್ತು ಸಂಪರ್ಕ, ಅಂತರ್ಜಲ ಸಂರಕ್ಷಣೆ, ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಕಾಮಗಾರಿ ನಡೆಸಲಾಗುವುದು. ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಗಳಡಿ ಜಿಲ್ಲಾವಾರು ಸಾಮಾನ್ಯ, ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನಕ್ಕೆ ಕ್ರಿಯಾ ಯೋಜನೆ ಸಲ್ಲಿಸಿ ಸರ್ಕಾರದಿಂದ ಅನುಮೋದನೆ ಪಡೆದುಕೊಳ್ಳಬೇಕು. ಎಸ್‌ಸಿಪಿ ಮತ್ತು ಟಿಎಸ್‌ಪಿಯಡಿ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಗೆ ಕ್ರಿಯಾಯೋಜನೆಯನ್ನು ಪ್ರತ್ಯೇಕವಾಗಿ ರೂಪಿಸಿ ಅನುಷ್ಠಾನಗೊಳಿಸಬೇಕಿದೆ.
 

click me!