1494 ಕೋಟಿ ರೂ.ಅಕ್ರಮ: ಸಿಎಂ ಸಿದ್ದರಾಮಯ್ಯ ಬಗ್ಗೆ ಇನ್ನೊಂದು ದೂರು..!

By Kannadaprabha NewsFirst Published Aug 24, 2024, 8:02 AM IST
Highlights

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಬಾಕಿ ಉಳಿದಿರುವ 1494 ಕೋಟಿ ದುರುಪಯೋಗವಾಗಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರು(ಆ.24):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಬಾಕಿ ಉಳಿದಿರುವ 1494 ಕೋಟಿ ದುರುಪಯೋಗವಾಗಿದೆ ಎಂದು ಆರೋಪಿಸಲಾಗಿದೆ.

ಶುಕ್ರವಾರ ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಅವರನ್ನು ಭೇಟಿಯಾಗಿ ಈ ವಿಚಾರವಾಗಿ ದೂರು ನೀಡಿದ್ದಾರೆ. 1494 ಕೋಟಿ ರು. ರಾಜ್ಯ ಸರ್ಕಾರದ ಖಜಾನೆಯಲ್ಲೂ ಇಲ್ಲ. ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಯಾವುದೇ ಮಾಹಿತಿ ನೀಡಿಲ್ಲ,  ಹೀಗಾಗಿ ಈ ಬಗ್ಗೆ ತನಿಖೆ ನಡೆಸಬೇಕಾಗಿದೆ. ಸಿಎಂ ಸಿದ್ದರಾಮಯ್ಯ, ಅವರೇ ಹಣಕಾಸು ಇಲಾಖೆ ನೋಡಿಕೊಳ್ಳು ತ್ತಿರುವುದರಿಂದ ಅವರ ವಿರುದ್ಧ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

Latest Videos

ಪ್ರಾಸಿಕ್ಯೂಷನ್‌ ವಿರುದ್ಧ ಸಿಎಂಗೆ ರಾಹುಲ್‌ ಗಾಂಧಿ ಅಭಯ: ಸಿದ್ದು ಬೆನ್ನಿಗೆ ಹೈಕಮಾಂಡ್‌..!

ಸಿದ್ದರಾಮಯ್ಯ ಅವರಿಂದ ಸಂವಿಧಾನದ ಬಾಧ್ಯತೆಯ ಉಲ್ಲಂಘನೆ ಮತ್ತು ಅಸಾಂವಿಧಾನಿಕ ಹಣಕಾಸು ವ್ಯವಹಾರಕ್ಕಾಗಿ ಅವರನ್ನು ವಜಾಗೊಳಿಸಬೇಕು ಎಂದು ಇದೇ ವೇಳೆ ಮನವಿ ಮಾಡಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಯಲ್ಲಿ ಬಳಕೆಯಾಗದ ಹಣ ಎಷ್ಟು ಇದೆ ಎಂದು ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರನ್ನು ಕೇಳಲಾಗಿತ್ತು. ಇದಕ್ಕೆ ಉತ್ತರ ನೀಡಿದ ಸಿದ್ದರಾಮಯ್ಯ ಅವರು, 1953 ಕೋಟಿ ರು. ಬಳಕೆಯಾಗದ ಹಣ ಇದ್ದು, ಖಜಾನೆಗೆ ಜಮೆಯಾಗುತ್ತಿದೆ ಎಂದು ಹೇಳಿದ್ದರು. ಆದರೆ, 1494 ಕೋಟಿ ರೂ. ಖಜಾನೆಗೂ ಜಮೆಯಾಗಿಲ್ಲ ಆರೋಪಿಸಲಾಗಿದೆ. ಖರ್ಚಾಗದೇ ಇದ್ದ ಹಣ ಸಂಚಿತ ನಿಧಿ ಮೂಲಕ ಸರ್ಕಾರಕ್ಕೆ ಬರಬೇಕು. ಅಲ್ಲದೆ ಆ ಹಣ ಎಲ್ಲಿಇಗೆ ಹೋಯಿತು ಎಂಬುದರ ಅನುಮತಿ ಪಡೆಯಬೇಕು, ಈ ಬಗ್ಗೆ ಹಣಕಾಸು ಇಲಾಖೆಗೂ ಪತ್ರ ಬರೆದು ವಿಚಾರಿಸಿದಾಗ ಅಲ್ಲಿಯೂ ಜಮೆಯಾಗಿಲ್ಲ ಎಂಬ ಮಾಹಿತಿ ಬಂದಿದೆ. ಹಾಗಾದರೆ ಆ ಹಣ ಎಲ್ಲಿಗೆ ಹೋಗಿದೆ ಎಂಬುದರ ಬಗ್ಗೆ ತನಿಖೆಯಾಗಬೇಕಿದೆ ಎಂದು ತಿಳಿಸಲಾಗಿದೆ.

click me!