
ಬೆಂಗಳೂರು (ಜು. 31) : ಮನೆಯಲ್ಲಿ ಯಾರು ಇಲ್ಲದ ವೇಳೆ ದುಷ್ಕರ್ಮಿಗಳು ಕಿಟಕಿ ಮುಖಾಂತರ ಬಾಗಿಲ ಲಾಕ್ ತೆರೆದು ಮನೆ ಪ್ರವೇಶಿಸಿ ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಾಗಲಗುಂಟೆಯ ಸೋಪ್ ಫ್ಯಾಕ್ಟರಿ ಲೇಔಟ್(Soap factory layout) ನಿವಾಸಿ ವಿನಾಯಕ್ ಶಿಂಧೆ(Vinayak sindhe) ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ದುಷ್ಕರ್ಮಿಗಳು ಸುಮಾರು 300 ಗ್ರಾಂ ಚಿನ್ನಾಭರಣ ಹಾಗೂ 500 ಗ್ರಾಂ ತೂಕದ ಬೆಳ್ಳಿ ಸಾಮಗ್ರಿಗಳು ಸೇರಿದಂತೆ ಸುಮಾರು .15.30 ಲಕ್ಷ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ವಿನಾಯಕ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: 10 ವರ್ಷ ಪಿಕ್‌ಪಾಕೆಟ್ ಮಾಡಿ ಮೊದಲ ಸಲ ಸಿಕ್ಕಿಬಿದ್ದ ಗ್ಯಾಂಗ್..!
ಪೀಣ್ಯದ ಖಾಸಗಿ ಕಂಪನಿಯಲ್ಲಿ ವಿನಾಯಕ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಕುಟುಂಬ ಸಮೇತ ಸೋಪ್ ಫ್ಯಾಕ್ಟರಿ ಲೇಔಟ್‌ನಲ್ಲಿ ನೆಲೆಸಿದ್ದಾರೆ. ಕಾರ್ಯ ನಿಮಿತ್ತ ವಿನಾಯಕ್ ಪತ್ನಿ 15 ದಿನಗಳ ಹಿಂದೆ ಸ್ವಂತ ಊರು ಹಾವೇರಿಗೆ ತೆರಳಿದ್ದರು. ಜು.28ರಂದು ಬೆಳಗ್ಗೆ 9ರ ಸುಮಾರಿಗೆ ವಿನಾಯಕ್ ಮನೆ ಬಾಗಿಲಿಗೆ ಬೀಗ ಹಾಕಿಕೊಂಡು ಕೆಲಸಕ್ಕೆ ತೆರಳಿದ್ದಾರೆ. ಕೆಲಸ ಮುಗಿಸಿ ಸಂಜೆ 7.15ರ ಸುಮಾರಿಗೆ ಮನೆಗೆ ವಾಪಾಸ್ ಬಂದಾಗ, ಮನೆಯ ಕಿಟಕಿ ತೆರೆದಿರುವುದು ಗೊತ್ತಾಗಿದೆ. ಹತ್ತಿರ ಹೋಗಿ ನೋಡಿದಾಗ ದುಷ್ಕರ್ಮಿಗಳು ಆಯುಧದಿಂದ ಕಿಟಿಕಿ ಲಾಕ್ ಮೀಟಿರುವುದು ಕಂಡು ಬಂದಿದೆ. ಬಳಿಕ ಮನೆ ಪ್ರವೇಶಿಸಿ ನೋಡಿದಾಗ ರೂಮ್‌ನಲ್ಲಿ ಬಟ್ಟೆಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಬೀರುವಿನಲ್ಲಿ ಇರಿಸಿದ್ದ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ದುಷ್ಕರ್ಮಿಗಳು ಹಾಡಹಗಲೇ ಕಿಟಕಿ ಲಾಕ್ ಮುರಿದು ಬಳಿಕ ಮನೆಯ ಬಾಗಿಲು ತೆರೆದು ಮನೆ ಪ್ರವೇಶಿಸಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಈ ಸಂಬಂಧ ವಿನಾಯಕ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಹತ್ತುವ ವೇಳೆ ಮಹಿಳೆಯ ಚಿನ್ನಾಭರಣ ಕಳ್ಳತನ; ಇಬ್ಬರು ಸರಗಳ್ಳಿಯರ ಬಂಧನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ