ನಿಮ್ಮ ಅಮೂಲ್ಯವಾದ ಮತ ಚಲಾಯಿಸಿ, ವಂಡರ್‌ ಲಾ ಟಿಕೆಟ್‌ ಮೇಲೆ ಡಿಸ್ಕೌಂಟ್‌ ಪಡೆಯಿರಿ..!

Published : May 04, 2023, 08:11 PM IST
ನಿಮ್ಮ ಅಮೂಲ್ಯವಾದ ಮತ ಚಲಾಯಿಸಿ, ವಂಡರ್‌ ಲಾ ಟಿಕೆಟ್‌ ಮೇಲೆ ಡಿಸ್ಕೌಂಟ್‌ ಪಡೆಯಿರಿ..!

ಸಾರಾಂಶ

ಮೇ.10 ರಂದು ಮತದಾನ ಮಾಡುವ ಪ್ರತಿಯೊಬ್ಬ ನಾಗರಿಕನಿಗೂ ವಂಡರ್‌ ಲಾ ಪ್ರವೇಶ ಶುಲ್ಕದ ಮೇಲೆ ಶೇ.15 ರಷ್ಟು ರಿಯಾಯಿತಿ ನೀಡುತ್ತಿದೆ. ಈ ಕೊಡುಗೆಯು ಮೇ. 10 ರಿಂದ ಮೇ. 12ರವರೆಗೂ ಆನ್‌ಲೈನ್‌ನಲ್ಲಿ ಮಾತ್ರ ಲಭ್ಯ. 

ಬೆಂಗಳೂರು(ಮೇ.04):  ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಹಾಗೂ ಮತದಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಭಾರತದ ಅತಿ ದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ ಲಾ ವಿಶೇಷ ರಿಯಾಯಿತಿ ಘೊಷಿಸಿದೆ.

ಹೌದು, ಮೇ.10 ರಂದು ಮತದಾನ ಮಾಡುವ ಪ್ರತಿಯೊಬ್ಬ ನಾಗರಿಕನಿಗೂ ವಂಡರ್‌ ಲಾ ಪ್ರವೇಶ ಶುಲ್ಕದ ಮೇಲೆ ಶೇ.15 ರಷ್ಟು ರಿಯಾಯಿತಿ ನೀಡುತ್ತಿದೆ. ಈ ಕೊಡುಗೆಯು ಮೇ. 10 ರಿಂದ ಮೇ. 12ರವರೆಗೂ ಆನ್‌ಲೈನ್‌ನಲ್ಲಿ ಮಾತ್ರ ಲಭ್ಯವಿದ್ದು, ಬುಕ್ಕಿಂಗ್‌ ಪೋರ್ಟಲ್‌ ಮೇ.5ರಿಂದ ತೆರೆಕೊಳ್ಳಲಿದೆ. ತಮ್ಮ ಬುಕ್ಕಿಂಗ್‌ನನ್ನು https://www.wonderla.com/ ಮೂಲಕ ಮಾಡಿಕೊಳ್ಳಬಹುದು. ಪ್ರವೇಶ ದ್ವಾರದಲ್ಲಿ ಆನ್‌ಲೈನ್‌ನಲ್ಲಿ  ಟಿಕೆಟ್ ಕಾಯ್ದಿರಿಸಿದ ಮತದಾರರಿಗೆ  ಕೈ ಬೆರಳಿಗೆ ಹಾಕಿದ ಶಾಹಿಯ ಆಧಾರದ ಮೇಲೆ ಪ್ರವೇಶ ನೀಡಲಾಗುತ್ತದೆ.

ಮಾಂಗ್ರೋವ್ ವನದ ಮಧ್ಯೆ ಕಯಾಕ್ ಮೂಲಕ ವಿನೂತನ ರೀತಿಯಲ್ಲಿ  ಮತದಾನ ಜಾಗೃತಿ

ಈ ಕುರಿತು ಮಾತನಾಡಿದ ವಂಡರ್‌ಲಾ ಹಾಲಿಡೇಸ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್‌ ಚಿತ್ತಿಲಪಿಲ್ಲಿ, ಪ್ರತಿಯೊಬ್ಬ ನಾಗರಿಕನೂ ಮತದಾನ ಮಾಡುವುದು ಅವರ ಕರ್ತವ್ಯವಾಗಿದೆ. ಮತದಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇದು ನಮ್ಮ ಪುಟ್ಟ ಹೆಜ್ಜೆ ಎಂದರು. 

ಹೆಚ್ಚಿನ ಮಾಹಿತಿಗಾಗಿ +91 80372 30333 ಅಥವಾ +91 80350 73966 ಸಂಪರ್ಕಿಸಿಬಹುದಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ