ಕರ್ನಾಟಕದಲ್ಲಿ ಎಲ್ಲಿಗೆ ಬಂತು ಕೊರೋನಾ? ಇಲ್ಲಿದೆ ಶುಕ್ರವಾರದ ಅಂಕಿ-ಅಂಶ..!

By Suvarna NewsFirst Published Nov 27, 2020, 8:39 PM IST
Highlights

ಹಬ್ಬ ಹರಿದಿನಗಳು ಬರುತ್ತಿವೆ. ಇನ್ನೊಂದೆಡೆ ಜನರು ಸಾಮಾಜಿ ಅಂತರ ಕಾಪಾಡಿಕೊಳ್ಳದೇ ಮಾಸ್ಕ್ ಹಾಕದೇ ಓಡಾಡುತ್ತಿದ್ದಾರೆ. ಇದರ ಮಧ್ಯೆ ಇಂದಿನ ಕೊರೋನಾ ಅಂಕಿ-ಸಂಖ್ಯೆ ಎಷ್ಟು ಎನ್ನುವ ಮಾಹಿತಿ ಇಲ್ಲಿದೆ.

ಬೆಂಗಳೂರು, (ನ.27): ರಾಜ್ಯದಲ್ಲಿ  ಇಂದು (ಶುಕ್ರವಾರ) ಹೊಸದಾಗಿ 1526 ಮಂದಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದು, 12 ಮಂದಿ ಬಲಿಯಾಗಿದ್ದಾರೆ. 

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 8,81,086ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 11,736.

ಮೊದಲ ಆದ್ಯತೆ ಭಾರತಕ್ಕೆ, ಆದರೂ ಕೊರೊನಾ ಲಸಿಕೆ ಸಿಗೋದು ಡೌಟ್ ಯಾಕೆ?

ರಾಜ್ಯದಲ್ಲಿ ಇಂದು 1,451 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,43,950 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 25,379 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ  927 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,67,885ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಕೆ ಮಾಹಿತಿ ನೀಡಿದೆ.

click me!