ಕೊರೋನಾ ಲಸಿಕೆ ಹಾಕಲು 1,535 ಸ್ಥಳ ಗುರುತು

By Kannadaprabha NewsFirst Published Jan 6, 2021, 9:57 AM IST
Highlights

ಲಸಿಕೆ ಹಾಕಲು ನಗರದಲ್ಲಿ ಸ್ಥಳಗಳ ಗುರುತು: ಚೋಳನ್‌ | ಸಿದ್ಧತೆ ಬಗ್ಗೆ ತೇಜಸ್ವಿ ಸೂರ್ಯ ಜತೆ ಅಧಿಕಾರಿಗಳ ಸಭೆ

ಬೆಂಗಳೂರು(ಜ.06): ಕೋವಿಡ್‌ ಲಸಿಕೆ ಹಾಕುವುದಕ್ಕೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಮೆಡಿಕಲ್‌ ಹಾಗೂ ನರ್ಸಿಗ್‌ ಕಾಲೇಜುಗಳು ಸೇರಿದಂತೆ ಒಟ್ಟು 1,535 ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ರಾಜೇಂದ್ರ ಚೋಳನ್‌ ತಿಳಿಸಿದ್ದಾರೆ.

"

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರೊಂದಿಗೆ ನಗರದಲ್ಲಿ ಕೋವಿಡ್‌ ಲಸಿಕೆ ಅಭಿಯಾನ ಸಿದ್ಧತೆಗೆ ಸಂಬಂಧಿಸಿದಂತೆ ಸಭೆ ನಡೆಸಿದರು.

ರಸ್ತೆ ದಾಟೋದಿನ್ನು ಸುಲಭ: 300 ಕಡೆ ಎತ್ತರಿಸಿದ ರಸ್ತೆದಾಟುವ ಮಾರ್ಗ

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಂದ್ರ ಚೋಳನ್‌, ಮೊದಲ ಹಂತದಲ್ಲಿ ಕೋವಿಡ್‌ ಲಸಿಕೆ ಹಾಕುವುದಕ್ಕೆ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಕೇಂದ್ರಗಳು, ಸರ್ಕಾರಿ ಮತ್ತು ಖಾಸಗಿ ಮೆಡಿಕಲ್‌ ಕಾಲೇಜುಗಳು ಸೇರಿದಂತೆ ಒಟ್ಟು 1,535 ಸ್ಥಳಗಳನ್ನು ಗುರುತಿಸಲಾಗಿದೆ. ಶಾಲೆಗಳು ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಶಾಲೆ ಮತ್ತು ಕಾಲೇಜುಗಳಲ್ಲಿ ಕೋವಿಡ್‌ ಲಸಿಕೆ ಹಾಕುವುದಕ್ಕೆ ಸದ್ಯ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

"

ಬ್ರಿಟನ್‌ನಿಂದ ಆಗಮಿಸಿದವರು ಹಾಗೂ ಅವರೊಂದಿಗೆ ಸಂಪರ್ಕ ಹೊಂದಿದವರ ಪೈಕಿ ಒಟ್ಟು 33 ಮಂದಿಗೆ ಕೋವಿಡ್‌ ಸೋಂಕು ಕಾಣಿಸಿಕೊಂಡಿದೆ. 33 ಮಂದಿಯಲ್ಲಿ 11 ಮಂದಿಗೆ ರೂಪಾಂತರ ಸೋಂಕು ದೃಢಪಟ್ಟಿದೆ ಎಂದು ವಿವರಿಸಿದರು.

click me!