ಕರ್ನಾಟಕದಲ್ಲಿ ಇಳಿಕೆಯತ್ತ ಕೊರೋನಾ: ಪಾಸಿಟಿವಿಟಿ ದರ ಶೇಕಡ 1.02ಕ್ಕೆ ಇಳಿಕೆ

By Suvarna News  |  First Published Jul 4, 2021, 8:22 PM IST

* ಕರ್ನಾಟಕದಲ್ಲಿ ಇಳಿಕೆಯತ್ತ ಕೊರೋನಾ ವೈರಸ್
* ಹೊಸದಾಗಿ 1564 ಸೋಂಕು, 59 ಜನರು ಮಹಾಮಾರಿಗೆ ಬಲಿ
* ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ 1.02 


ಬೆಂಗಳೂರು, (ಜುಲೈ.04): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಇಳಿಕೆಯಾಗುತ್ತಿದೆ. ಇಂದು (ಭಾನುವಾರ) ಹೊಸದಾಗಿ 1564 ಜನರಿಗೆ ಸೋಂಕು ತಗುಲಿದ್ದು, 59 ಸೋಂಕಿತರು ಸಾವನ್ನಪ್ಪಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 28,53,643 ಕ್ಕೆ ಏರಿಕೆಯಾಗಿದ್ರೆ, ರಾಜ್ಯದಲ್ಲಿ ಇದುವರೆಗೆ 35,367 ಜನ ಸಾವನ್ನಪ್ಪಿದ್ದಾರೆ. ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Latest Videos

undefined

ಕೊರೋನಾದಿಂದ ಚೇತರಿಸಿಕೊಂಡ ಮಕ್ಕಳಲ್ಲಿ ಕಾಣಿಸಿಕೊಂಡ ಹೊಸ ರೋಗ ಲಕ್ಷಣಗಳು..!

 ಇನ್ನು ಕಳೆದ 24 ಗಂಟೆಗಳಲ್ಲಿ 4775 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ 27,73,407 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.  44,846 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.02 ರಷ್ಟು ಇದೆ. 

ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 352 ಜನರಿಗೆ ಸೋಂಕು ತಗುಲಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ. 1742 ಜನ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದು, 18,018 ಸಕ್ರಿಯ ಪ್ರಕರಣಗಳಿವೆ.

click me!