ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಪ್ರಮಾಣಕ್ಕಿಂತಲೂ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಿದೆ.
ಬೆಂಗಳೂರು, (ನ.15): ರಾಜ್ಯದಲ್ಲಿ ಇಂದು (ಭಾನುವಾರ) ಹೊಸದಾಗಿ ಕೇವಲ 1565 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 8,61,647ಕ್ಕೆ ಏರಿಕೆಯಾಗಿದೆ.
undefined
ಮತ್ತೊಂದೆಡೆ ಸೋಂಕಿನ ಪ್ರಮಾಣಕ್ಕಿಂತಲೂ 2,363 ಜನರು ಗುಣವಾಗಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ಗಳಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಇದುವರೆಗೂ ಗುಣವಾಗಿ ಬಿಡುಗಡೆಯಾದವರ ಸಂಖ್ಯೆ 8,22,953ಕ್ಕೆ ಏರಿಕೆಯಾಗಿದೆ.
ಭಾರತೀಯರಿಗೆ ಸಿಗಲಿದೆ ತಿಂಗಳಲ್ಲಿ ಕೋವಿಡ್ ಲಸಿಕೆ? ಯಾವುದದು..?
ಇದರೊಂದಿಗೆ ಸದ್ಯ ರಾಜ್ಯದಲ್ಲಿ 27,146 ಪ್ರಕರಣಗಳು ಸಕ್ರಿಯವಾಗಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿರುವ 746 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ ಒಂದೇ ದಿನ 21 ಜನ ಕೊರೋನಾಗೆ ಬಲಿಯಾಗಿದ್ದು, ಇದುವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 11,529ಕ್ಕೆ ತಲುಪಿದೆ.
ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣವು ಶೇ.1.57ರಷ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕೊರೋನಾ ವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 17075 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 82531 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.