ಗುಡ್‌ನ್ಯೂಸ್: ಕರ್ನಾಟಕದಲ್ಲಿ ಕೊರೋನಾ ಪಾಸಿಟಿವ್, ಸಾವಿನ ಸಂಖ್ಯೆಯಲ್ಲೂ ಇಳಿಕೆ

By Suvarna NewsFirst Published Aug 8, 2021, 7:42 PM IST
Highlights

* ಕರ್ನಾಟಕದಲ್ಲಿ ತಗ್ಗಿದ ಕೊರೋನಾ ಸೋಂಕು
* ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಾವಿನ ಸಂಖ್ಯೆ ಇಳಿಮುಖ
* ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ

ಬೆಂಗಳೂರು, (ಆ.08): ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಕೇಸ್‌ ಹಾಗೂ ಸಾವಿನ ಸಂಖ್ಯೆಯಲ್ಲೂ ಇಳಿಕೆಯಾಗಿದೆ. 

ರಾಜ್ಯದಲ್ಲಿ ಇಂದು (ಆ.08) 1598 ಜನರಿಗೆ ಕೊರೋನಾ ನಾವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, 20 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು 1914 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಮತ್ತೊಂದು ಹೊಸ ವೈರಸ್‌ ಪತ್ತೆ..!

ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2918525ಕ್ಕೆ ಏರಿಕೆಯಾಗಿದ್ರೆ, ಈವರೆಗೂ 36793 ಮಂದಿ ಸೋಂಕಿಗೆ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು 2857776 ಸೋಂಕಿತರು ಗುಣಮುಖರಾಗಿದ್ದು. 23930 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 348 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1230486ಕ್ಕೆ ಏರಿಕೆಯಾಗಿದೆ. 1 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15914ಕ್ಕೆ ಏರಿಕೆಯಾಗಿದೆ. 8493 ಸಕ್ರಿಯ ಪ್ರಕರಣಗಳಿವೆ.

ಕಳೆದ 24 ಗಂಟೆಗಳಲ್ಲಿ 32,270 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,14,176 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,46,446 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. 

 ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.09ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.25ರಷ್ಟಿದೆ.

click me!