ಮಾರ್ಚ್‌ನೊಳಗೆ 16 ಲಕ್ಷ ಮನೆ ಹಸ್ತಾಂತರ: ಸಚಿವ ಸೋಮಣ್ಣ

By Govindaraj S  |  First Published Aug 28, 2022, 7:56 PM IST

ರಾಷ್ಟ್ರಕ್ಕೆ ವಸತಿ ವ್ಯವಸ್ಥೆಯಲ್ಲಿ ಒಂದೇ ವಿಷನ್‌ ತರಬೇಕೆಂಬ ಪ್ರಧಾನ ಮಂತ್ರಿಗಳ ಆಶಯದಂತೆ ರಾಜ್ಯದಲ್ಲಿ ಕೂಡಾ ವಸತಿ ಯೋಜನೆಯ ವ್ಯವಸ್ಥೆಗೆ ಒಂದೇ ವಿಷನ್‌ ಜಾರಿಗೆ ತರಲಾಗಿದೆ ಎಂದು ರಾಜ್ಯ ವಸತಿ ಸಚಿವ ವಿ. ಸೋಮಣ್ಣ ಹೇಳಿದರು.


ಸುಬ್ರಹ್ಮಣ್ಯ (ಆ.28): ರಾಷ್ಟ್ರಕ್ಕೆ ವಸತಿ ವ್ಯವಸ್ಥೆಯಲ್ಲಿ ಒಂದೇ ವಿಷನ್‌ ತರಬೇಕೆಂಬ ಪ್ರಧಾನ ಮಂತ್ರಿಗಳ ಆಶಯದಂತೆ ರಾಜ್ಯದಲ್ಲಿ ಕೂಡಾ ವಸತಿ ಯೋಜನೆಯ ವ್ಯವಸ್ಥೆಗೆ ಒಂದೇ ವಿಷನ್‌ ಜಾರಿಗೆ ತರಲಾಗಿದೆ. ಹಿಂದಿನ ಸರ್ಕಾರ ಮಾಡಿದ ಲೋಪಗಳನ್ನು ಸರಿಪಡಿಸಿಕೊಂಡು ಇಡೀ ರಾಜ್ಯಕ್ಕೆ ಒಂದೇ ಸಾಫ್ಟ್‌ವೇರ್‌ ಆರಂಭಿಸಿ ನಿಜವಾದ ಬಡವರು ಯಾರಿದ್ದಾರೆ ಅವರ ಖಾತೆಗೆ ನೇರವಾಗಿ ಹಣ ಸಂದಾಯ ಮಾಡುವ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ರಾಜ್ಯ ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸುಮಾರು 750 ಪಂಚಾಯಿತಿಗಳನ್ನು ಆಯ್ಕೆ ಮಾಡಿ ಲಕ್ಷಾಂತರ ಮನೆಗಳನ್ನು ನೀಡಲಾಗಿದೆ. ಈಗಾಗಲೇ ಕೆಲಸ ಆರಂಭವಾಗಿದೆ, 6 ಲಕ್ಷ ಮನೆಗಳು ಸೇರಿದಂತೆ ಹಿಂದಿನ ಸರ್ಕಾರದ ಕಾಲದಲ್ಲಿ ಬಾಕಿ ಉಳಿದ 10 ಲಕ್ಷ ಮನೆಗಳು ನಿರ್ಮಾಣಗೊಳ್ಳಲಿದೆ. ಇದರಲ್ಲಿ 6 ಲಕ್ಷ ಮನೆಗಳ ನಿರ್ಮಾಣ ಈಗಾಗಲೇ ಮುಗಿದಿದೆ. ಉಳಿದ ಮನೆಗಳನ್ನು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮುಂದಿನ ಮಾರ್ಚ್‌ ತಿಂಗಳೊಳಗೆ ಒಟ್ಟು ಎಲ್ಲ 16 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

Tap to resize

Latest Videos

3 ತಿಂಗಳೊಳಗೆ ಗ್ರಂಥಾಲಯ ಸಜ್ಜುಗೊಳಿಸಲು ಸೂಚನೆ: ಸಚಿವ ವಿ.ಸೋಮಣ್ಣ

ದೇವಳಕ್ಕೆ ಭೇಟಿ: ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಸಚಿವರು, ಬಳಿಕ ಭೋಜನ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಚಿವರೊಂದಿಗೆ ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಆಗಮಿಸಿದ್ದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಾಹಣಾಧಿಕಾರಿ ಡಾ. ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ. ಭಟ್‌, ಶೋಭಾ ಗಿರಿಧರ್‌, ಎಇಒ ಪುಷ್ಪಲತಾ ರಾವ್‌, ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್‌ ಉಪಸ್ಥಿತರಿದ್ದರು.

ಬೆಳ್ತಂಗಡಿಯಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ: ಬೆಳ್ತಂಗಡಿ ತಾಲೂಕಿನಲ್ಲಿ 100 ಕೋಟಿ ರು. ವೆಚ್ಚದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಿ, ಅಲ್ಲಿ 4 ಹೆಲಿಪ್ಯಾಡ್‌ಗಳನ್ನು ರಚಿಸುವ ಬಗ್ಗೆ ಯೋಚಿಸಲಾಗಿದೆ ಎಂದು ವಸತಿ ಸಚಿವ ಸೋಮಣ್ಣ ಹೇಳಿದರು. ಅವರು ಶನಿವಾರ ಗುರುವಾಯನಕೆರೆಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ತಾಲೂಕಿನ 2021-22ನೇ ಸಾಲಿನ ಬಸವ ವಸತಿ ಹಾಗೂ ಬಿ.ಆರ್‌.ಅಂಬೇಡ್ಕರ್‌ ವಸತಿ ಯೋಜನೆ ಅರ್ಹ ಫಲಾನುಭವಿಗಳಿಗೆ ನೂತನ ಗೃಹ ನಿರ್ಮಾಣ ಕಾಮಗಾರಿಯ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು.

ಧರ್ಮಸ್ಥಳದಲ್ಲಿ ಏರ್‌ಪೋರ್ಟ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟಇಲಾಖೆಗಳ ಜತೆ ಚರ್ಚಿಸಿ ಇದಕ್ಕೆ ಬೇಕಾಗುವ 100 ಎಕರೆ ಜಾಗ ಗುರುತಿಸಲು ಮುಂದಿನ ವಾರದಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗುವುದು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿಯ ಯೋಜನೆಗಳು ಶಾಸಕ ಹರೀಶ್‌ ಪೂಂಜ ಅವರ ಕಾರ್ಯವೈಖರಿಯಿಂದ ರಾಜ್ಯವೇ ಗುರುತಿಸುವಂತಾಗಿದೆ. ಶಾಸಕರು ತಮ್ಮ ಕ್ಷೇತ್ರದ ಒಳಿತಿಗೆ ಇಲಾಖೆಗಳಿಂದ ಸಿಗುವ ಅನುದಾನವನ್ನು ಬಳಸಿ ಜನರಿಗೆ ಬೇಕಾದ ಸವಲತ್ತುಗಳನ್ನು ತಲುಪಿಸುತ್ತಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಸಮರ್ಪಣಾ ಭಾವದಿಂದ ನಡೆಯುತ್ತಿರುವ ಇವರ ಸೇವೆ ಅವಿಸ್ಮರಣೀಯವಾದದು ಎಂದು ಹೇಳಿದರು.

ನೂತನ ದಾಸೋಹ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಿ​: ಸಚಿವ ಸೋಮಣ್ಣ

ಶಾಸಕ ಹರೀಶ್‌ ಪೂಂಜ ಮಾತನಾಡಿ, ಪ್ರತಿಯೊಬ್ಬನಿಗೂ ಮನೆ ಕಟ್ಟುವ ಕನಸು ಇರುತ್ತದೆ. ಆ ಸಂಕಲ್ಪ ಈಡೇರುವ ಕಾಲ ಬಂದಿದೆ. ಸರ್ಕಾರವು ರಾಜ್ಯದ ಪ್ರತಿ ತಾಲೂಕಿಗೆ ಮನೆಗಳನ್ನು ಒದಗಿಸುವ ಮಹತ್ವಾಕಾಂಕ್ಷೆ ಯೋಜನೆಯನ್ನು ರೂಪಿಸಿ ಅದನ್ನು ಜನರಿಗೆ ತಲುಪಿಸುತ್ತಿದೆ. ಬೆಳ್ತಂಗಡಿ ತಾಲೂಕಿಗೆ ಇನ್ನೂ 5,000 ಮನೆಗಳ ಅಗತ್ಯವಿದ್ದು, ಈ ಬಗ್ಗೆ ಸಚಿವರಲ್ಲಿ ಮನವಿ ಮಾಡಲಾಗಿದೆ. ತಾಲೂಕಿನ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ವಿಷಯದಲ್ಲಿ ಹೆಚ್ಚಿನ ಶಕ್ತಿಯನ್ನು ನೀಡುತ್ತಿರುವುದರಿಂದ ಜನತೆಗೆ ಸೌಲಭ್ಯ ಒದಗಿಸಲು ಅನುಕೂಲವಾಗಿದೆ ಎಂದರು.

click me!