
ಬೆಂಗಳೂರು (ಆ.14): ರಾಜ್ಯದಲ್ಲಿ ಶನಿವಾರ 1329 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 1614 ಮಂದಿ ಗುಣಮುಖರಾಗಿದ್ದಾರೆ. ಐದು ಮಂದಿ ಸಾವಿಗೀಡಾಗಿದ್ದಾರೆ. 31 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.4.2 ರಷ್ಟು ದಾಖಲಾಗಿದೆ. ಶುಕ್ರವಾರಕ್ಕೆ ಹೋಲಿದರೆ ಸೋಂಕು ಪರೀಕ್ಷೆಗಳನ್ನು ಒಂದು ಸಾವಿರ ಹೆಚ್ಚು ನಡೆಸಲಾಗಿದೆ. ಆದರೂ, ಹೊಸ ಪ್ರಕರಣಗಳು 703 ಇಳಿಕೆ ಆಗಿವೆ. (ಶುಕ್ರವಾರ 2032 ಕೇಸ್, ಸಾವು ಐದು).
ಧಾರವಾಡದಲ್ಲಿ ಇಬ್ಬರು ವೃದ್ಧರು, ಶಿವಮೊಗ್ಗ, ಬಳ್ಳಾರಿ ಹಾಗೂ ಕಲಬುರಗಿಯಲ್ಲಿ ತಲಾ ಒಬ್ಬರು ವೃದ್ಧರು ಸಾವಿಗೀಡಾಗಿದ್ದಾರೆ. ಹೊಸ ಪ್ರಕರಣಗಳು ಇಳಿಕೆ ಆಗಿ ಗುಣಮುಖರ ಸಂಖ್ಯೆ ಹೆಚ್ಚಾದ ಕಾರಣ ಸದ್ಯ ಸಕ್ರಿಯ ಸೋಂಕಿತರ ಸಂಖ್ಯೆ 10,105ಕ್ಕೆ ತಗ್ಗಿವೆ. ಈ ಪೈಕಿ 65 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ಮಂದಿ ಐಸಿಯು, 6 ಮಂದಿ ಆಕ್ಸಿಜನ್, 54 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 10,040 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ.
1 ವಾರದ ಬಳಿಕ ರಾಜ್ಯದಲ್ಲಿ ಮತ್ತೆ 2000+ ಕೋವಿಡ್ ಕೇಸ್, 5 ಸಾವು
ಬೆಂಗಳೂರಿನಲ್ಲಿ ತೀವ್ರವಾಗಿ ಕುಸಿದ ಕೊರೋನಾ ಸೋಂಕಿತ ಸಂಖ್ಯೆ: ನಗರದಲ್ಲಿ ಶನಿವಾರ 791 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.6.48ಕ್ಕೆ ಕುಸಿದಿದೆ. 1,112 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟ ವರದಿಯಾಗಿಲ್ಲ. ನಗರದಲ್ಲಿ ಸದ್ಯ 9781 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 62 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 26 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 7316 ಮಂದಿ ಕೋವಿಡ್ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ.
235 ಮಂದಿ ಮೊದಲ ಡೋಸ್, 1123 ಮಂದಿ ಎರಡನೇ ಡೋಸ್ ಮತ್ತು 5958 ಮಂದಿ ಮೂರನೇ ಡೋಸ್ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 16,436 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 13,224 ಆರ್‌ಟಿಪಿಸಿಆರ್ ಹಾಗೂ 3,212 ಮಂದಿಗೆ ರಾರಯಪಿಡ್ ಆ್ಯಂಟಿಜನ್ ಪರೀಕ್ಷೆ ನಡೆಸಲಾಗಿದೆ. ಶನಿವಾರ ನಗರದಲ್ಲಿ ಹೊಸದಾಗಿ ಯಾವುದೇ ಕಂಟೈನ್ಮೆಂಟ್ ಪ್ರದೇಶ ಸೃಷ್ಟಿಯಾಗಿಲ್ಲ. ಒಟ್ಟು 21 ಸಕ್ರಿಯ ಕಂಟೈನ್ಮೆಂಟ್ ಪ್ರದೇಶಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
ಉಡುಪಿಯಲ್ಲಿ 25 ಮಂದಿಗೆ ಸೋಂಕು: ದ.ಕ. ಜಿಲ್ಲೆಯಲ್ಲಿ ಶನಿವಾರ 17 ಕೊರೋನಾ ಪ್ರಕರಣ ಪತ್ತೆಯಾಗಿದ್ದು, 11 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 59 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ.1.75 ಆಗಿದೆ. ದ.ಕ. ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಕೊರೋನಾ ಪ್ರಕರಣಗಳ ಸಂಖ್ಯೆ 1,36,415ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 1,34,499 ಮಂದಿ ಗುಣಮುಖರಾಗಿದ್ದಾರೆ.
ಕೋವಿಡ್‌ನಿಂದ ಒಟ್ಟು 1,857 ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶನಿವಾರ 536 ಮಂದಿಯ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಅವರಲ್ಲಿ ಉಡುಪಿ ತಾಲೂಕಿನ 5, ಕುಂದಾಪುರ ತಾಲೂಕಿನ 2 ಮತ್ತು ಕಾರ್ಕಳ ತಾಲೂಕಿನ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಈ ದಿನ 5 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 32 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 540 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.
Corona Crisis: ಕೋವಿಡ್ ಸೋಂಕಿತರ ಸಾವು ಹೆಚ್ಚಳ: ಆತಂಕ
ಎಲ್ಲಿ ಎಷ್ಟು ಕೇಸ್?: ಶನಿವಾರ ಪತ್ತೆಯಾದ ಹೊಸ ಪ್ರಕರಣಗಳ ಪೈಕಿ ಹಾಸನದಲ್ಲಿ 55, ಬಳ್ಳಾರಿ 50, ರಾಯಚೂರು 46 ಮಂದಿಗೆ ಸೋಂಕು ತಗುಲಿದೆ. 10 ಜಿಲ್ಲೆಗಳಲ್ಲಿ ಬೆರಳೆಣಿಕೆಯಷ್ಟುಹಾಗೂ ಬೀದರ್ ಜಿಲ್ಲೆಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ