Corona Crisis: ಕರ್ನಾಟಕದಲ್ಲಿ 1692 ಮಂದಿಗೆ ಕೊರೋನಾ, ಇಬ್ಬರು ಸಾವು

By Govindaraj S  |  First Published Aug 1, 2022, 4:15 AM IST

ರಾಜ್ಯದಲ್ಲಿ ಭಾನುವಾರ 1,692 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು, 1,094 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವಿಗೀಡಾಗಿದ್ದಾರೆ. 33 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.5 ರಷ್ಟು ದಾಖಲಾಗಿದೆ.


ಬೆಂಗಳೂರು (ಆ.01): ರಾಜ್ಯದಲ್ಲಿ ಭಾನುವಾರ 1,692 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು, 1,094 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವಿಗೀಡಾಗಿದ್ದಾರೆ. 33 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.5 ರಷ್ಟು ದಾಖಲಾಗಿದೆ. ಶನಿವಾರಕ್ಕೆ ಹೋಲಿದರೆ ಸೋಂಕು ಪರೀಕ್ಷೆಗಳು ಒಂದು ಸಾವಿರ ಹೆಚ್ಚಾಗಿವೆ. ಆದರೂ, ಹೊಸ ಪ್ರಕರಣಗಳು 194 ಕಡಿಮೆಯಾಗಿವೆ. (ಶನಿವಾರ 1,886, ಕೇಸ್‌, ಸಾವು ಒಂದು). 

ತುಮಕೂರಿನಲ್ಲಿ 55 ವರ್ಷದ ಪುರುಷ, ಶಿವಮೊಗ್ಗದಲ್ಲಿ 63 ವರ್ಷದ ವೃದ್ಧ ಸಾವಿಗೀಡಾಗಿದ್ದಾರೆ. ಸದ್ಯ ಸಕ್ರಿಯ ಸೋಂಕಿತರ ಸಂಖ್ಯೆ 11,105ಕ್ಕೆ ಹೆಚ್ಚಿವೆ. ಈ ಪೈಕಿ 65 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 10 ಮಂದಿ ಐಸಿಯು, 9 ಮಂದಿ ಆಕ್ಸಿಜನ್‌, 46 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 11,040 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ.

Tap to resize

Latest Videos

undefined

Corona Crisis: ಕರ್ನಾಟಕದಲ್ಲಿ1886 ಮಂದಿಗೆ ಕೋವಿಡ್‌: 1 ಸಾವು

27 ಸಕ್ರಿಯ ಕಂಟೈನ್ಮೆಂಟ್‌ ಜೋನ್‌: ಬೆಂಗಳೂರಿನಲ್ಲಿ ಭಾನುವಾರ 1,154 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.7.31ಕ್ಕೆ ಏರಿಕೆ ಆಗಿದೆ. 861 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟ ವರದಿಯಾಗಿಲ್ಲ. ನಗರದಲ್ಲಿ ಸದ್ಯ 8,595 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 56 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹತ್ತು ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2279 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 

101 ಮಂದಿ ಮೊದಲ ಡೋಸ್‌, 183 ಮಂದಿ ಎರಡನೇ ಡೋಸ್‌ ಮತ್ತು 1995 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 16,620 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 13,556 ಆರ್‌ಟಿಪಿಸಿಆರ್‌ ಹಾಗೂ 3,064 ಮಂದಿಗೆ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ. ಭಾನುವಾರ ನಗರದಲ್ಲಿ ಹೊಸದಾಗಿ ಕಂಟೈನ್ಮೆಂಟ್‌ ಪ್ರದೇಶ ಸೃಷ್ಟಿಯಾಗಿಲ್ಲ. ನಗರದಲ್ಲಿ ಒಟ್ಟು 27 ಸಕ್ರಿಯ ಕಂಟೈನ್ಮೆಂಟ್‌ ಪ್ರದೇಶಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ದ.ಕ. 15, ಉಡುಪಿ 13 ಮಂದಿಗೆ ಸೋಂಕು: ದ.ಕ. ಜಿಲ್ಲೆಯಲ್ಲಿ ಭಾನುವಾರ 15 ಕೊರೋನಾ ಕೇಸ್‌ ಪತ್ತೆಯಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ. 6 ಮಂದಿ ಗುಣಮುಖರಾಗಿದ್ದು, ಪ್ರಸಕ್ತ 97 ಸಕ್ರಿಯ ಪ್ರಕರಣ ಇದೆ. ಜಿಲ್ಲೆಯ ಪಾಸಿಟಿವಿಟಿ ರೇಟ್‌ ಶೇ.1.69 ಆಗಿದೆ. ಇಲ್ಲಿವರೆಗೆ ಒಟ್ಟು ಪಾಸಿಟಿವ್‌ ಕೇಸ್‌ಗಳ ಸಂಖ್ಯೆ 1,36,245ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,854 ಆಗಿದೆ. ಒಟ್ಟು 1,34,294 ಮಂದಿ ಗುಣಮುಖರಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಭಾನುವಾರ 437 ಮಂದಿಯ ಕೋವಿಡ್‌ ಪರೀಕ್ಷೆ ಮಾಡಲಾಗಿದ್ದು, ಅವರಲ್ಲಿ ಉಡುಪಿ ತಾಲೂಕಿನ 5, ಕುಂದಾಪುರ ತಾಲೂಕಿನ 6 ಮತ್ತು ಕಾರ್ಕಳ ತಾಲೂಕಿನ ಒಬ್ಬರು ಮತ್ತು ಹೊರ ಜಿಲ್ಲೆಯ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಈ ದಿನ ಒಬ್ಬ ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 49 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 540 ಮಂದಿ ಕೋವಿಡ್‌ ನಿಂದ ಮೃತಪಟ್ಟಿದ್ದಾರೆ.

ಕೋವಿಡ್‌ ಲಸಿಕೆ: ಫ್ರೀ 3ನೇ ಡೋಸ್‌ಗೆ ಭಾರೀ ಬೇಡಿಕೆ

ಎಲ್ಲಿ, ಎಷ್ಟು ಪ್ರಕರಣ: ಬೆಂಗಳೂರಿನಲ್ಲಿ 1,154 ಪ್ರಕರಣ ಪತ್ತೆಯಾಗಿವೆ. ಉಳಿದಂತೆ ಧಾರವಾಡ 73, ಹಾಸನ 48, ಮೈಸೂರು 47, ಬೆಳಗಾವಿ 41, ಕಲಬುರಗಿ 31, ತುಮಕೂರು ಮತ್ತು ಉತ್ತರ ಕನ್ನಡ ತಲಾ 26, ಮಂಡ್ಯ 24, ಬಾಗಲಕೋಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 22 ಮಂದಿಗೆ ಸೋಂಕು ತಗುಲಿದೆ. 9 ಜಿಲ್ಲೆಗಳಲ್ಲಿ 20ಕ್ಕಿಂತ ಕಡಿಮೆ, 9 ಜಿಲ್ಲೆಗಳಲ್ಲಿ ಬೆರಳೆಣಿಕೆಯಷ್ಟುಮಂದಿಗೆ ಸೋಂಕು ತಗುಲಿದೆ. ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

click me!