
ಮಂಡ್ಯ (ಆ.26): ಹಬ್ಬದ ಸಂಭ್ರಮದಲ್ಲಿದ್ದ 17 ವರ್ಷದ ಬಾಲಕನಿಗೆ ಹೃದಯಾಘಾತವಾಗಿ ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಮಲ್ಲಿಗೇರೆ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿ ಚಿರಾಗ್, ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ನಿನ್ನೆ ಸಂಜೆ, ಹಬ್ಬದ ಸಿದ್ಧತೆಗಾಗಿ ಚಿರಾಗ್ ತನ್ನ ತಂದೆ-ತಾಯಿಯೊಂದಿಗೆ ಬಟ್ಟೆ ಖರೀದಿಗೆ ತೆರಳಿದ್ದ. ಈ ವೇಳೆ ಏಕಾಏಕಿ ಅವನಿಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾನೆ. ಕೂಡಲೇ ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರಾದರೂ, ಆಸ್ಪತ್ರೆಗೆ ತಲುಪುವ ಮುನ್ನವೇ ಚಿರಾಗ್ ಕೊನೆಯುಸಿರೆಳೆದಿದ್ದಾನೆ.
ಈ ಘಟನೆ ಕುಟುಂಬದವರಿಗೆ ಮತ್ತು ಗ್ರಾಮಸ್ಥರಿಗೆ ಆಘಾತವನ್ನುಂಟುಮಾಡಿದೆ. ಚಿರಾಗ್‌ನ ಆಕಸ್ಮಿಕ ಸಾವಿನಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ವೈದ್ಯಕೀಯ ತಪಾಸಣೆಯಲ್ಲಿ ಸಾವಿಗೆ ಹೃದಯಾಘಾತವೇ ಕಾರಣ ಎಂದು ದೃಢಪಟ್ಟಿದೆ. ಯುವ ವಯಸ್ಸಿನಲ್ಲೇ ಇಂತಹ ದುರಂತ ಸಂಭವಿಸಿದ್ದು, ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡುವ ಅಗತ್ಯವನ್ನು ಎತ್ತಿ ತೋರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ