
ವರದಿ: ಕಿರಣ್.ಕೆ.ಎನ್, ಏಷ್ಯಾನೆಟ್ ಸುವರ್ಣ ನ್ಯೂಸ್, ಬೆಂಗಳೂರು
ಬೆಂಗಳೂರು(ಮೇ.29): ಕಾಂಗ್ರೆಸ್ ಮುಖಂಡ ಯೂಸೂಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬುಗೆ ನಿನ್ನೆ(ಶನಿವಾರ) ಇಡಿ ಶಾಕ್ ನೀಡಿತ್ತು. ಬೆಳ್ಳಂಬೆಳಿಗ್ಗೆ ಬಾಬು ಒಡೆತನದ ಬಂಗಲೆ, ಕಚೇರಿ ಸೇರಿ 7 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದರು.
ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಗೆ ಕೆಲ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬಾಬು ಒಡೆತನದ ವಸಂತನಗರದಲ್ಲಿರುವ ರುಕ್ಸಾನಾ ಪ್ಯಾಲೇಸ್ ನಿವಾಸ, ಉಮ್ರಾ ಡೆವಲರ್ಸ್, ಉಮ್ರಾ ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಾಲಾಡಿದ್ದಾರೆ. ಬೆಳಗ್ಗೆ 6.30ಕ್ಕೆ 20ಕ್ಕೂ ಹೆಚ್ಚು ಇಡಿ ಅಧಿಕಾರಿಗಳ ತಂಡವು ದಾಳಿ ನಡೆಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸಿಆರ್‌ಪಿಎಫ್ ಸಿಬ್ಬಂದಿಯಿಂದ ಭದ್ರತೆ ಪಡೆದಿದ್ದರು.
ಶ್ರೀಮಂತ ರಾಜಕಾರಣಿ ಕೆಜಿಎಫ್ ಬಾಬುಗೆ ಇ.ಡಿ. ಶಾಕ್: 1743 ಕೋಟಿ ಒಡೆಯನ ಮೇಲೆ ಬೆಳ್ಳಂಬೆಳಗ್ಗೆ ದಾಳಿ
ಬಾಬು ಅವರ ಹಲವು ಕಡೆಗಳ ನೂರಾರು ಕೋಟಿ ರೂ. ಮೌಲ್ಯದ ಜಮೀನು, ನಿವೇಶನ, ಅಪಾರ್ಟ್‌ಮೆಂಟ್, ಕಟ್ಟಡಗಳನ್ನು ಹೊಂದಿರುವುದಕ್ಕೆ ಸಂಬಂಧಿಸಿದ ದಾಖಲೆಗಳು ಇಡಿ ಕೈ ಸೇರಿದೆ. ಮೊದಲ ಪತ್ನಿ ರುಕ್ಸಾನ, ಎರಡನೆ ಪತ್ನಿ ಶಾಜಿಯಾ, ಮಗಳು ಉಮ್ರಾ ಫರೀಫ್, ಮಗ ಅಫ್ನಾನ್ ಸೇರಿ ಕುಟುಂಬಸ್ಥರ ಹೆಸರಿನಲ್ಲಿ ಒಟ್ಟು 23 ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ. ಬಾಬು ತಮ್ಮ ಹೆಸರಿನಲ್ಲಿ 12 ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದ್ದಾರೆ. ಕುಟುಂಬಸ್ಥರ ಖಾತೆಯಲ್ಲಿ 70 ಕೋಟಿಗೂ ಅಧಿಕ ಹಣ ಇರುವುದು ಇಡಿ ತನಿಖೆಯಲ್ಲಿ ತಿಳಿದು ಬಂದಿದೆ.
ರಾತ್ರಿ ದಾಳಿ ಅಂತ್ಯಗೊಳಿಸಿದ ಇಡಿ...!
ಇಡಿ ಅಕ್ರಮ ಹಣದ ವರ್ಗಾವಣೆ ಬಗ್ಗೆ ತನಿಖೆ ನಡೆಸುತ್ತಿದೆ. ಈ ಹಿಂದೆ 4 ಸಾವಿರ ಕೋಟಿ ರೂ.ಗೂ ಹೆಚ್ಚಿನ ಸಂಪತ್ತನ್ನು ಹೊಂದಿರುವುದಾಗಿ ಬಾಬು ಹೇಳಿಕೆ ಕೊಟ್ಟಿದ್ದರು. ರಾಜಕೀಯವಾಗಿ ಮಹತ್ವಾಕಾಂಕ್ಷಿಯಾಗಿದ್ದ ಬಾಬು ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ವಿಧಾನ ಪರಿಷತ್‌ನ ಸ್ಥಳೀಯ ಸಂಸ್ಥೆಗಳಿಗೆ ಕಳೆದ ಬಾರಿ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದರು. ಸದ್ಯ ಕೆಲವೆಡೆ ದಾಖಲೆಗಳನ್ನು ಸೀಲ್ ಮಾಡಿರುವ ಇಡಿ ದಾಳಿ ಅಂತ್ಯಗೊಳಿಸಿದ್ರು ಕೊನೆಗೆ ರಾತ್ರಿ ಹನ್ನೆರಡು ಗಂಟೆಗೆ ಸಮಯದಲ್ಲಿ ಇಡಿ ಅಧಿಕಾರಿಗಳು ದಾಳಿಯನ್ನು ಮುಕ್ತಾಯ ಗೊಳಿಸಿದ್ದಾರೆ. ತನಿಖೆ ಬಳಿಕ ಅಷ್ಟೆ ಸರ್ಕಾರದ ಲೆಕ್ಕಕ್ಕೆ ಇಲ್ಲದಂತೆ ಏನೆಲ್ಲಾ ವರ್ಗಾವಣೆ ಮಾಡಿ, ಯಾವ ದೇಶದಲ್ಲಿ ಹಣ ವರ್ಗಾವಣೆ ಮಾಡಿದ್ದಾರೆ. ಜೊತೆಗೆ ಅಕ್ರಮ ಹಣ ವರ್ಗಾವಣೆ ಎಷ್ಟರ ಮಟ್ಟಕ್ಕೆ ನಡೆದಿದೆ ಎಂಬುದು ತಿಳಿಯಬೆಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ