
ಬೆಂಗಳೂರು(ಏ.09): ಸಾರಿಗೆ ನೌಕರರ ಮುಷ್ಕರ ಹಾಗೂ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನೈಋುತ್ಯ ರೈಲ್ವೆಯು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಮಾರ್ಗಗಳಲ್ಲಿ ಏ.8ರಿಂದ ಏ.14ರವರೆಗೆ 18 ವಿಶೇಷ ರೈಲು ಕಾರ್ಯಾಚರಣೆ ನಡೆಸಲಿದೆ.
ಹುಬ್ಬಳ್ಳಿ-ಯಶವಂತಪುರ, ಯಶವಂತಪುರ-ವಿಜಯಪುರ, ಯಶವಂತಪುರ-ಬೆಳಗಾವಿ, ಬೆಳಗಾವಿ-ಯಶವಂತಪುರ, ಮೈಸೂರು-ಬೀದರ್, ಬೀದರ್-ಮೈಸೂರು, ಯಶವಂತಪುರ-ಬೀದರ್, ಬೀದರ್- ಯಶವಂತಪುರ, ಕೆಎಸ್‌ಆರ್ ಬೆಂಗಳೂರು-ಮೈಸೂರು, ಮೈಸೂರು-ಕೆಎಸ್‌ಆರ್ ಬೆಂಗಳೂರು, ಮೈಸೂರು-ಯಶವಂತಪುರ, ಯಶವಂತಪುರ-ಶಿವಮೊಗ್ಗ ಟೌನ್, ಶಿವಮೊಗ್ಗ ಟೌನ್-ಯಶವಂತಪುರ, ಯಶವಂತಪುರ-ಕಾರವಾರ ಹಾಗೂ ಕಾರವಾರ-ಯಶವಂತಪುರ ಮಾರ್ಗಗಳಲ್ಲಿ ಈ ವಿಶೇಷ ರೈಲುಗಳು ಸಂಚರಿಸಲಿವೆ. ಈ ವಿಶೇಷ ರೈಲುಗಳಿಗೆ ವಿಶೇಷ ಪ್ರಯಾಣ ದರ ನಿಗದಿಗೊಳಿಲಾಗುತ್ತದೆ. ಈ ರೈಲುಗಳಲ್ಲಿ ಪ್ರಯಾಣಿಸಲು ಮುಂಗಡವಾಗಿ ಟಿಕೆಟ್ ಕಾಯ್ದಿರಿಸಬೇಕು.
ಸಾರಿಗೆ ಮುಷ್ಕರ: 'ಸರ್ಕಾರ ಬ್ಲಾಕ್‌ಮೇಲ್ ಸಹಿಸಲ್ಲ'
ಸಾರಿಗೆ ನೌಕರರ ಮುಷ್ಕರ ಆರಂಭವಾಗಿರುವುದರಿಂದ ಹಾಗೂ ಯುಗಾದಿ ಹಬ್ಬ ಸಮೀಪಿಸುತ್ತಿರುವುದರಿಂದ ಊರುಗಳಿಗೆ ತೆರಳುವ ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿಶೇಷ ರೈಲು ಕಾರ್ಯಾಚರಿಸುವಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅವರು ನೈಋುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ನೈಋುತ್ಯ ರೈಲ್ವೆ ವಿಶೇಷ ರೈಲು ಕಾರ್ಯಾಚರಣೆ ನಡೆಸಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ