ರಾಜ್ಯದಲ್ಲಿ ಎರಡು ಸಾವಿರಕ್ಕೆ ಹೆಚ್ಚಿದ್ದ ಕೊರೋನಾ ಸೋಂಕಿನ ಹೊಸ ಪ್ರಕರಣಗಳು ತುಸು ಇಳಿಕೆಯಾಗಿವೆ. ಆದರೆ, ನಿರಂತರ ಹೊಸ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಸಕ್ರಿಯ ಸೋಂಕು ಪ್ರಕರಣಗಳು 10 ಸಾವಿರದ ಗಡಿ ದಾಟಿವೆ.
ಬೆಂಗಳೂರು (ಜು.31): ರಾಜ್ಯದಲ್ಲಿ ಎರಡು ಸಾವಿರಕ್ಕೆ ಹೆಚ್ಚಿದ್ದ ಕೊರೋನಾ ಸೋಂಕಿನ ಹೊಸ ಪ್ರಕರಣಗಳು ತುಸು ಇಳಿಕೆಯಾಗಿವೆ. ಆದರೆ, ನಿರಂತರ ಹೊಸ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಸಕ್ರಿಯ ಸೋಂಕು ಪ್ರಕರಣಗಳು 10 ಸಾವಿರದ ಗಡಿ ದಾಟಿವೆ. ಶನಿವಾರ 1,886 ಹೊಸ ಪ್ರಕರಣ ಪತ್ತೆಯಾಗಿದ್ದು, 1,242 ಮಂದಿ ಗುಣಮುಖರಾಗಿದ್ದಾರೆ. ಬಳ್ಳಾರಿಯಲ್ಲಿ 75 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದಾರೆ. 32 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.5.8 ರಷ್ಟುದಾಖಲಾಗಿದೆ. ಶುಕ್ರವಾರಕ್ಕೆ ಹೋಲಿದರೆ 150 ಸೋಂಕು ಪರೀಕ್ಷೆಗಳು ತಗ್ಗಿವೆ.
ಆದರೆ, ಹೊಸ ಪ್ರಕರಣಗಳು 246 ಕಡಿಮೆಯಾಗಿವೆ (ಶುಕ್ರವಾರ 2130 ಕೇಸ್, ಸಾವು ನಾಲ್ಕು) . ರಾಜ್ಯದಲ್ಲಿ ಶುಕ್ರವಾರ ಐದೂವರೆ ತಿಂಗಳ ಬಳಿಕ ಕೊರೋನಾ ಹೊಸ ಪ್ರಕರಣಗಳು ಎರಡು ಸಾವಿರ ಗಡಿದಾಟಿದ್ದು, ಸೋಂಕಿತರ ಸಾವು ಕೂಡಾ ನಾಲ್ಕೂವರೆ ತಿಂಗಳ ಬಳಿಕ ನಾಲ್ಕಕ್ಕೆ ಏರಿಕೆಯಾಗಿತ್ತು. ಸದ್ಯ ತುಸು ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿಂದ ಹೊಸ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆ ಸಕ್ರಿಯ ಸೋಂಕಿತರು 10509ಕ್ಕೆ ಹೆಚ್ಚಿವೆ. ಈ ಪೈಕಿ 66 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 10 ಮಂದಿ ಐಸಿಯು, 9 ಮಂದಿ ಆಕ್ಸಿಜನ್, 47 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 10,443 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ.
undefined
ಕೋವಿಡ್ ಲಸಿಕೆ: ಫ್ರೀ 3ನೇ ಡೋಸ್‌ಗೆ ಭಾರೀ ಬೇಡಿಕೆ
ಎಲ್ಲಿ, ಎಷ್ಟು ಪ್ರಕರಣ?: ಬೆಂಗಳೂರು ಗ್ರಾಮಾಂತರ 60, ಮೈಸೂರು 58, ಧಾರವಾಡ ಮತ್ತು ಹಾಸನ ತಲಾ 40, ಬೆಳಗಾವಿ 34, ಕೊಡಗು 32, ಕಲಬುರಗಿ 30, ಬಳ್ಳಾರಿ 28, ತುಮಕೂರು 29, ಕೋಲಾರ 21 ಮಂದಿಗೆ ಸೋಂಕು ತಗುಲಿದೆ. ಎಂಟು ಜಿಲ್ಲೆಗಳಲ್ಲಿ 20ಕ್ಕಿಂತ ಕಡಿಮೆ, 11 ಜಿಲ್ಲೆಗಳಲ್ಲಿ ಬೆರಳೆಣಿಕೆಯಷ್ಟುಮಂದಿಗೆ ಸೋಂಕು ತಗುಲಿದೆ. ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರಿನಲ್ಲಿ ಶೇ.7.52ಕ್ಕೆ ತಲುಪಿದ ಪಾಸಿಟಿವಿಟಿ: ನಗರದಲ್ಲಿ 1,342 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.7.52ಕ್ಕೆ ಏರಿಕೆ ಆಗಿದೆ. 1,063 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟವರದಿಯಾಗಿಲ್ಲ. ನಗರದಲ್ಲಿ ಸದ್ಯ 8,302 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 54 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂಟು ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 15,552 ಮಂದಿ ಕೋವಿಡ್ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ.
ಐದೂವರೆ ತಿಂಗಳ ಬಳಿಕ ಕರ್ನಾಟಕದಲ್ಲಿ 2000ಕ್ಕೂ ಅಧಿಕ ಕೋವಿಡ್ ಪ್ರಕರಣ: 4 ಸಾವು
973 ಮಂದಿ ಮೊದಲ ಡೋಸ್, 3876 ಮಂದಿ ಎರಡನೇ ಡೋಸ್ ಮತ್ತು 10,703 ಮಂದಿ ಮೂರನೇ ಡೋಸ್ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 17,964 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 14,475 ಆರ್‌ಟಿಪಿಸಿಆರ್ ಹಾಗೂ 3,489 ಮಂದಿಗೆ ರಾರಯಪಿಡ್ ಆ್ಯಂಟಿಜನ್ ಪರೀಕ್ಷೆ ನಡೆಸಲಾಗಿದೆ. ಶನಿವಾರ ನಗರದಲ್ಲಿ ಪಶ್ಚಿಮ ವಲಯದಲ್ಲಿ ಹೊಸದಾಗಿ ಮೂರು ಕಂಟೈನ್ಮೆಂಟ್ ಪ್ರದೇಶ ಸೃಷ್ಟಿಯಾಗಿವೆ. ನಗರದಲ್ಲಿ ಒಟ್ಟು 27 ಸಕ್ರಿಯ ಕಂಟೈನ್ಮೆಂಟ್ ಪ್ರದೇಶಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.