Rising Heart Attack in Youths: 19 ವರ್ಷದ ಯುವಕನಿಗೆ ಹೃದಯಾಘಾತ; ರಾತ್ರಿ ಮಲಗಿದ್ದ ಸ್ಥಿತಿಯಲ್ಲೇ ಸಾವು; ಗೆಳೆಯರು ಶಾಕ್!

Published : Jun 11, 2025, 06:44 PM ISTUpdated : Jun 11, 2025, 06:45 PM IST
Sudden death,    Health crisis,    Cardiac arrest,

ಸಾರಾಂಶ

ಬೆಂಗಳೂರಿನ ಜೆಪಿ ನಗರದಲ್ಲಿ ೧೯ ವರ್ಷದ ಯುವಕ ನಿಶಾಂತ್ ಗೌಡ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನದಿಂದ ಬೆಂಗಳೂರಿಗೆ ಬಂದು ೧೫ ದಿನಗಳಾಗಿದ್ದ ಯುವಕ ಡಿಪ್ಲೋಮಾ ಪದವಿ ಮುಗಿಸಿ ಅಪ್ರೆಂಟಿಸ್ ಆಗಿ ಕೆಲಸ ಮಾಡುತ್ತಿದ್ದರು.

ಬೆಂಗಳೂರು (ಜೂ.11): ರಾಜ್ಯದಲ್ಲಿ ದಿನೇದಿನೆ ಯುವಕರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಇದು ಪೋಷಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಆರೋಗ್ಯಕರವಾಗಿದ್ದರೂ ಯುವಕರಲ್ಲಿ ಹೃದಯಾಘಾತದ ಪ್ರಮಾಣ ಏರಿಕೆಯಾಗುತ್ತಿರುವುದು ಕಳವಳಕಾರಿಯಾಗಿದೆ. ಈ ಸರಣಿಯಲ್ಲಿ ಮತ್ತೊಂದು ದುರಂತವಾಗಿ, ಬೆಂಗಳೂರಿನ ಜೆಪಿ ನಗರದಲ್ಲಿ 19 ವರ್ಷದ ಯುವಕ ನಿಶಾಂತ್ ಗೌಡ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರದ ನಿವಾಸಿಯಾಗಿದ್ದ ನಿಶಾಂತ್ ಗೌಡ, ಕಳೆದ 15 ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದಿದ್ದರು. ಜೆಪಿ ನಗರದ ಒಂದು ಪಿಜಿಯಲ್ಲಿ ವಾಸವಾಗಿದ್ದ ನಿಶಾಂತ್, ಡಿಪ್ಲೋಮಾ ಪದವಿಯನ್ನು ಪೂರೈಸಿ ಅಪ್ರೆಂಟಿಸ್ ಆಗಿ ಕೆಲಸಕ್ಕೆ ಸೇರಿದ್ದರು. ಜೊತೆಗೆ, ಫುಡ್ ಡೆಲಿವರಿ ಕೆಲಸವನ್ನೂ ಮಾಡುತ್ತಿದ್ದರು.

ಘಟನೆಯ ದಿನ ರಾತ್ರಿ, ಸ್ನೇಹಿತರೊಂದಿಗೆ ಮಾತನಾಡುವ ವೇಳೆ ಎದೆನೋವಿನ ಕುರಿತು ತಿಳಿಸಿ ಮಲಗಿದ್ದ ಯುವಕ. ಆದರೆ ಬೆಳಗ್ಗೆ ಸ್ನೇಹಿತರು ಎಂದಿನಂತೆ ಎದ್ದೇಳದ ನಿಶಾಂತ್‌ನನ್ನ ಗಮನಿಸಿ ನೋಡಿದಾಗ ಅದಾಗಲೇ ಮೃತಪಟ್ಟಿದ್ದಾನೆ. ಘಟನೆಯ ಕುರಿತು ಮಾಹಿತಿ ಪಡೆದ ಜೆಪಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಶಾಂತ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಅಪಮೃತ್ಯು (UDR) ಪ್ರಕರಣ ದಾಖಲಾಗಿದೆ.

ಈ ಘಟನೆಯಿಂದಾಗಿ ನಿಶಾಂತ್ ಅವರ ಕುಟುಂಬ ಹಾಗೂ ಸ್ನೇಹಿತರಲ್ಲಿ ಆಘಾತ ಮೂಡಿದೆ. ರಾಜ್ಯದಲ್ಲಿ ಯುವಕರಲ್ಲಿ ಹೃದಯಾಘಾತದಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದು ಆರೋಗ್ಯ ತಜ್ಞರನ್ನೂ ಕಳವಳಗೊಳಿಸಿದೆ. ಒತ್ತಡ, ಜೀವನಶೈಲಿ ಬದಲಾವಣೆ, ಮತ್ತು ಆರೋಗ್ಯ ತಪಾಸಣೆಯ ಕೊರತೆ ಇದಕ್ಕೆ ಕಾರಣವಿರಬಹುದು ಎಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ.

ಪೋಷಕರಿಗೆ ಮತ್ತು ಯುವಕರಿಗೆ ನಿಯಮಿತ ಆರೋಗ್ಯ ತಪಾಸಣೆ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವ ಮೂಲಕ ಅಪಾಯವನ್ನ ತಡೆಯಬಹುದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌