ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 1976 ಕೋಟಿ ಬಿಡ್ ಆಹ್ವಾನ: ನಳಿನ್ ಕಟೀಲ್‌ಗೆ ನಿತಿನ್ ಗಡ್ಕರಿ ಪತ್ರ

By Govindaraj S  |  First Published Jan 2, 2023, 9:45 PM IST

ಶಿರಾಡಿ ಘಾಟ್ ವಿಭಾಗದ ಮಾರನಹಳ್ಳಿ ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸುಮಾರು 1976 ಕೋಟಿ ಮೊತ್ತದ ಬಿಡ್‌ನ್ನು ಆಹ್ವಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಬರೆದ ಪತ್ರದಲ್ಲಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.


ಮಂಗಳೂರು (ಜ.02): ಶಿರಾಡಿ ಘಾಟ್ ವಿಭಾಗದ ಮಾರನಹಳ್ಳಿ ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸುಮಾರು 1976 ಕೋಟಿ ಮೊತ್ತದ ಬಿಡ್‌ನ್ನು ಆಹ್ವಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಬರೆದ ಪತ್ರದಲ್ಲಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಈ ಚತುಷ್ಪಥ ಕಾಮಗಾರಿ ಜೊತೆಗೆ ಮಂಗಳೂರು- ಬೆಂಗಳೂರು ನಡುವಿನ ಸಂಚಾರಕ್ಕೆ ಲಾಜಿಸ್ಟಿಕ್ ವೆಚ್ಚವನ್ನು ಕಡಿಮೆ ಮಾಡಲಿರುವ ಶಿರಾಡಿ ಘಾಟ್ ಟನಲ್ ಯೋಜನೆಯನ್ನು 15,000 ಕೋಟಿ ವೆಚ್ಚದಲ್ಲಿ 23 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ ಏಪ್ರಿಲ್, 2023 ರೊಳಗೆ ಡಿಪಿಆರ್ ಅನ್ನು ಅಂತಿಮಗೊಳಿಸಿ ಮತ್ತು ಮೇ, 2023 ರಲ್ಲಿ ಬಿಡ್‌ಗಳನ್ನು ಆಹ್ವಾನಿಸುವುದಾಗಿ ತಿಳಿಸಿದ್ದಾರೆ. ಅಲ್ಲದೇ ಸಕಲೇಶಪುರದಿಂದ ಮಾರನಹಳ್ಳಿಯ ಭಾಗದ ರಸ್ತೆಯಲ್ಲಿ ಸುಗಮ ಸಂಚಾರಕ್ಕಾಗಿ ಕೂಡಲೇ ದುರಸ್ತಿ ಮಾಡಲು ನಿರ್ಧರಿಸಲಾಗಿದ್ದು, ದುರಸ್ತಿ ಕಾಮಗಾರಿಗೆ  12.20 ಕೋಟಿ ಬಿಡ್‌ನ ಮೌಲ್ಯಮಾಪನ ಮಾಡಲಾಗುತ್ತಿದೆ. ಅಲ್ಲದೇ ಅಸ್ತಿತ್ವದಲ್ಲಿರುವ ರಸ್ತೆ ನಿರ್ವಹಣೆಗೆ ಗುತ್ತಿಗೆದಾರರು ಪ್ಯಾಚ್ ವರ್ಕ್ ದುರಸ್ತಿಗೆ ಮುಂದಾಗಿದ್ದಾರೆ ಎಂದು ಗಡ್ಕರಿ,  ನಳಿನ್ ಕುಮಾರ್ ಕಟೀಲ್‌ಗೆ ಬರೆದ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

Tap to resize

Latest Videos

Shivamogga: ಹುಟ್ಟು​ಹ​ಬ್ಬ​ದಂದೇ ಕಣ್ಣೀರಿಟ್ಟ ಜೆಡಿಎಸ್‌ ಅಭ್ಯರ್ಥಿ ಶಾರದ ಅಪ್ಪಾಜಿಗೌಡ

ಸುರಂಗ ಯೋಜನೆಗೆ ಡಿಪಿಆರ್‌: ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ಯೋಜನೆಗೆ ಡಿಪಿಆರ್‌ಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ)ಕ್ಕೆ ಸೂಚನೆ ನೀಡಲಾಗಿದೆ. ಇದರಿಂದ ಮಂಗಳೂರು-ಬೆಂಗಳೂರು ನಡುವೆ ಸರಕು ಸಾಗಾಟ ವೆಚ್ಚ ಕಡಿಮೆಯಾಗಲಿದೆ. ಈ ಯೋಜನೆಯಲ್ಲಿ 23 ಕಿ.ಮೀ. ಸುರಂಗ ಕಾಮಗಾರಿಗೆ 15 ಸಾವಿರ ಕೋಟಿ ರು. ಮೊತ್ತವನ್ನು ಮುಂದಿನ ಏಪ್ರಿಲ್‌ ಒಳಗೆ ಡಿಪಿಆರ್‌ ಅಂತಿಮಗೊಳಿಸಲಾಗುವುದು, ಮೇ ತಿಂಗಳಲ್ಲಿ ಟೆಂಡರ್‌ ಆಹ್ವಾನಿಸಲಾಗುವುದು ಎಂದು ನಿತಿನ್‌ ಗಡ್ಕರಿ ಮಾಹಿತಿಯಲ್ಲಿ ತಿಳಿಸಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ. ಶಿರಾಡಿ ಘಾಟ್‌ ದುರಸ್ತಿ, ಚತುಷ್ಪಥ ಹಾಗೂ ಸುರಂಗ ಕಾಮಗಾರಿ ಕುರಿತು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸಚಿವ ಗಡ್ಕರಿಗೆ ಪತ್ರ ಬರೆದಿದ್ದರು.

 ಶಿರಾಡಿ ಸುರಂಗ ಹೆದ್ದಾರಿ ಕಾರ್ಯಸಾಧುವಲ್ಲ: ಕಳೆದ ಹಲವು ವರ್ಷಗಳಿಂದ ಪ್ರಸ್ತಾಪಿತ ಶಿರಾಡಿ ಘಾಟ್‌ ಸುರಂಗ ಮಾರ್ಗ ಹೆದ್ದಾರಿ ಯೋಜನೆ ಕಾರ್ಯ ಸಾಧ್ಯವಲ್ಲ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದ್ದು, ಈ ಯೋಜನೆ ಕೈತಪ್ಪುವ ಸೂಚನೆ ದೊರೆತಿದೆ. ಲೋಕಸಭೆಯಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಪ್ರಶ್ನೆಗೆ ಕೇಂದ್ರ ಹೆದ್ದಾರಿ, ಭೂಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿ ನೀಡಿದ ಉತ್ತರದಲ್ಲಿ ಈ ವಿಚಾರ ಉಲ್ಲೇಖಿಸಿದ್ದಾರೆ. ಈ ಯೋಜನೆಯು ಅತಿ ಸವಾಲಿನದ್ದಾಗಿದ್ದು, ದೊಡ್ಡ ಮೊತ್ತದ ಬಂಡವಾಳ ಬೇಕಾಗುತ್ತದೆ. ಹಾಗಾಗಿ ಇದು ಕಾರ್ಯಸಾಧುವಲ್ಲ ಎಂದಿದ್ದಾರೆ.

ಬಿಜೆಪಿ ಬಗ್ಗೆ ಮಾತನಾಡುವದಕ್ಕಿಂತ ಡಿಕೆಶಿ ತಮ್ಮ ಪಕ್ಷ ಸರಿಮಾಡಿಕೊಳ್ಳಲಿ: ಸಚಿವ ನಾಗೇಶ್

ಸುರಂಗ ಹೆದ್ದಾರಿ ಬದಲಿಗೆ ಶಿರಾಡಿ ಘಾಟ್‌ ಹೆದ್ದಾರಿ ಭಾಗದಲ್ಲಿ ಸಂಚಾರ ದಟ್ಟಣೆ ಸುಗಮಗೊಳಿಸಲು ಈಗಿರುವ ದ್ವಿಪಥ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸಲಾಗುತ್ತದೆ, ಇದಕ್ಕಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸಾಧ್ಯತಾ ವರದಿ (ಡಿಪಿಆರ್‌) ತಯಾರಿಕೆ ತಜ್ಞರನ್ನು ನೇಮಿಸಿದ್ದಾರೆ ಎಂದು ಸಚಿವರು ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ. ಕಳೆದ ಫೆಬ್ರವರಿಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸಕ್ಕಾಗಿ ಮಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ನಿತಿನ್‌ ಗಡ್ಕರಿ, 6 ಲೇನ್‌ನ ಶಿರಾಡಿ ಘಾಟ್‌ ಸುರಂಗ ಮಾರ್ಗ ಯೋಜನೆ ಮಾಡುವುದಾಗಿಯೂ, ಅದಕ್ಕಾಗಿ 14 ಸಾವಿರ ಕೋಟಿ ರು. ಯೋಜನೆ ಸಿದ್ಧವಾಗಿದೆ ಎಂದೂ ತಿಳಿಸಿದ್ದರು. ಆಸ್ಟ್ರಿಯಾ ಮೂಲದ ಜಿಯೊ ಕನ್ಸಲ್ಟ್‌ ಇಂಡಿಯಾ ಸಂಸ್ಥೆ ಡಿಪಿಆರ್‌ ಕೂಡ ಸಿದ್ಧಪಡಿಸಿತ್ತು. 23.5 ಕಿ.ಮೀ ಉದ್ದದ ಸುರಂಗ ಮಾರ್ಗ ಯೋಜನೆಯಲ್ಲಿ 6 ಸುರಂಗಗಳು, 7 ಸೇತುವೆಗಳು ಸೇರಿದ್ದವು. ಸುರಂಗ ಯೋಜನೆ ಕಾರ್ಯಗತವಾದರೆ ಘಾಟ್‌ ಪ್ರದೇಶದ ಪ್ರಯಾಣ ಸಮಯದಲ್ಲಿ ಕನಿಷ್ಠ ಒಂದು ಗಂಟೆ ಕಡಿಮೆ ಮಾಡುವ ಉದ್ದೇಶವಿತ್ತು.

click me!