
ಬೆಂಗಳೂರು (ಜೂ.18): ಮುಖ್ಯಮಂತ್ರಿ(Chief Minister of karnataka) ಅವರ ಸೂಚನೆ ಬಳಿಕವೂ ರಾಜ್ಯದಲ್ಲಿ 2,13,925 ಸರ್ಕಾರಿ ಅಧಿಕಾರಿ/ನೌಕರರು ‘ಕರ್ತವ್ಯ’ ಮೊಬೈಲ್ ಆ್ಯಪ್(Kartavya mobile app)ನಲ್ಲಿ ನೋಂದಣಿ(Register) ಮಾಡಿಕೊಂಡಿಲ್ಲ. ಈ ಬಗ್ಗೆ ಕೂಡಲೇ ಗಮನಹರಿಸಿ ನೋಂದಣಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್(Shalini Rajneesh, Chief Secretary to the State Government) ಸೂಚಿಸಿದ್ದಾರೆ.
ಕಳೆದ ಜೂ.4ರಂದು ನಡೆದ ಎಲ್ಲ ಕಾರ್ಯದರ್ಶಿಗಳ ಸಭೆಯಲ್ಲಿ ಮುಖ್ಯಮಂತ್ರಿ ಅವರು ಎಲ್ಲ ಸರ್ಕಾರಿ ಅಧಿಕಾರಿಗಳು/ನೌಕರರು ನಿಗದಿತ ಸಮಯಕ್ಕೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದ್ದರು. ಅದರಂತೆ ಎಲ್ಲ ನೌಕರರು ಕರ್ತವ್ಯ(KAAMS) ಮೊಬೈಲ್ ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಂಡು ಪ್ರತಿ ದಿನ ತಮ್ಮ ಹಾಜರಾತಿ ಕಡ್ಡಾಯವಾಗಿ ದಾಖಲಿಸಬೇಕಿದೆ.
ಜೂ.16ರ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ ಈವರೆಗೂ 2,13,925 ಅಧಿಕಾರಿ/ನೌಕರರು ಕರ್ತವ್ಯ ಮೊಬೈಲ್ ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಂಡಿಲ್ಲ. ಹೀಗಾಗಿ ವೈಯಕ್ತಿಕ ಗಮನಹರಿಸಿ, ತಮ್ಮ ಜಿಲ್ಲೆಯಲ್ಲಿ ಈವರೆಗೂ ಕರ್ತವ್ಯ ಮೊಬೈಲ್ ಆ್ಯಪ್‌ನಲ್ಲಿ ನೋಂದಣಿಯಾಗದ ಅಧಿಕಾರಿ/ನೌಕರರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಈ ಬಗ್ಗೆ ಕೈಗೊಂಡ ಕ್ರಮದ ವರದಿಯನ್ನು ಏಳು ದಿನಗಳೊಳಗೆ ತಮಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ