ಎಲ್ಲಾ ಇಲಾಖಾ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.2 ಮೀಸಲು: ಸಚಿವ ಪರಮೇಶ್ವರ್

By Kannadaprabha News  |  First Published Jun 7, 2024, 8:22 AM IST

ರಾಜ್ಯದಲ್ಲಿ ಗೃಹ ಇಲಾಖೆ ಮಾತ್ರವಲ್ಲ, ಇತರ ಇಲಾಖೆ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಗೃಹಸಚಿವ, ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.


ಉಡುಪಿ (ಜೂ.07): ರಾಜ್ಯದಲ್ಲಿ ಗೃಹ ಇಲಾಖೆ ಮಾತ್ರವಲ್ಲ, ಇತರ ಇಲಾಖೆ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಗೃಹಸಚಿವ, ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಉಡುಪಿಯಲ್ಲಿ ಕರ್ನಾಟಕ ರಾಜ್ಯ ಸೀನಿಯರ್ ಮತ್ತು ಯೂತ್ ಮೀಟ್-2024ನ್ನು ಉದ್ಘಾಟಿಸಿ ಮಾತನಾಡಿದರು. 

ಇತ್ತೀಚೆಗೆ ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಶೇ. 2ರಂತೆ 80 ಮಂದಿ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. 18 ಮಂದಿ ಕ್ರೀಡಾಪಟುಗಳನ್ನು ಎಸ್ಸೈಗಳಾಗಿ ನೇಮಿಸಲಾಗಿದೆ ಎಂದರು. ಇದೇ ವೇಳೆ ಕ್ರೀಡಾ ವಿದ್ಯಾರ್ಥಿ ವೇತನ ಆರಂಭಿಸಲೂ ನಿರ್ಧರಿಸಲಾಗಿದೆ ಎಂದ ಅವರು, ವಿವಿಗಳಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ಕಡಿಮೆಯಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದರು. ರಾಜ್ಯದಲ್ಲಿ ಪ್ರಸ್ತುತ 13 ಜಿಲ್ಲೆಗಳ ಕ್ರೀಡಾಂಗಣಗಳಲ್ಲಿ ಮಾತ್ರ ಸಿಂಥೆಟಿಕ್ ಟ್ರ್ಯಾಕ್ ಗಳಿವೆ. 

Tap to resize

Latest Videos

undefined

ಬಿಜೆಪಿ ಮೊದಲು ಕಾನೂನು ಸುವ್ಯವಸ್ಥೆಯ ಡೆಫಿನೆಷನ್ ಹೇಳಲಿ: ಗೃಹಸಚಿವ ಪರಮೇಶ್ವರ್

ಉಳಿದ ಜಿಲ್ಲೆಗಳಲ್ಲೂ ಹಂತಹಂತವಾಗಿ ಸಿಂಥೆಟಿಕ್ ಟ್ರ್ಯಾಕ್ ಅಳವಡಿಸುವ ಬಗ್ಗೆ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಳಾಗಿರುವ 10 ವರ್ಷಗಳ ಹಿಂದೆ ಅಳವಡಿಸಿರುವ ಸಿಂಥೆಟಿಕ್ ಟ್ರ್ಯಾಕ್ ದುರಸ್ತಿ ಬಗ್ಗೆ ಕ್ರೀಡಾಸಚಿವರ ಜೊತೆ ಮಾತುಕತೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು. ಹಿರಿಯ ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರಮಿಳಾ ಅಯ್ಯಪ್ಪ, ಕಾಂಗ್ರೆಸ್ ನಾಯಕರಾದ ವಿನಯಕುಮಾರ್ ಸೊರಕೆ, ಪ್ರಸಾದ್ ರಾಜ್ ಕಾಂಚನ್, ರಾಜ್ಯ ಅಥ್ಲೆಟಿಕ್‌ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ರಾಜುವೇಲು ಉಪಸ್ಥಿತರಿದ್ದರು.

ನಾನೇ ಉದಾಹರಣೆ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಡಕಾಗುತ್ತದೆ ಎಂಬುದು ಹೆತ್ತವರ ತಪ್ಪು ಕಲ್ಪನೆ. ಕ್ರೀಡೆಗಳಿಂದ ದೈಹಿಕವಾಗಿ ಮಾತ್ರವಲ್ಲ ಮಾನಸಿಕವಾಗಿಯೂ ಲಾಭ ಇದೆ. ಶಿಕ್ಷಣದಲ್ಲಿ ಏಕಾಗ್ರತೆ ಹೆಚ್ಚುತ್ತದೆ. ಕ್ರೀಡಾಪಟುಗಳೂ ಚೆನ್ನಾಗಿ ಓದಿ ಸಾಧನೆ ಮಾಡಿದವರೂ ಇದ್ದಾರೆ. ನನ್ನದೇ ಉದಾಹರಣೆ ಇದೆ. ನಾನೂ ವಿವಿಯಲ್ಲಿ ಕ್ರೀಡಾಪಟುವಾಗಿದ್ದೆ, ಫುಟ್ಬಾಲ್‌ ಆಡುತ್ತಿದ್ದೆ, ಆದರೂ ಓದಿ ಡಾಕ್ಟರೇಟ್ ಪಡೆದಿದ್ದೇನೆ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಹೇಳಿದರು.

ಚನ್ನಪಟ್ಟಣಕ್ಕೆ ಡಿಕೆಸು ನಿಲ್ಲಿಸುವ ಚಿಂತನೆಯಿಲ್ಲ: ಡಿ.ಕೆ.ಶಿವಕುಮಾರ್‌

ರಿಲ್ಯಾಕ್ಸ್‌ ಮೂಡಿನಲ್ಲಿದ್ದ ಗೃಹಸಚಿವರು: ಲೋಕಸಭಾ ಚುನಾವಣೆ ಭರಾಟೆ ನಂತರ ಗೃಹಸಚಿವರು ಉಡುಪಿಯಲ್ಲಿ ಗುರುವಾರ ವಿಶ್ರಾಂತಿ ಪಡೆದುಕೊಂಡಂತಿತ್ತು. ಕ್ರೀಡಾಕೂಟ ಉದ್ಘಾಟನೆಗೆ ಬಂದಿದ್ದ ಸ್ವತಃ ಕ್ರೀಡಾಪಟ ಆಗಿದ್ದ ಸಚಿವರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕ್ರೀಡಾಂಗಣದಲ್ಲಿದ್ದ ಬಾಲಕರ ಮತ್ತು ಬಾಲಕಿಯರ 200 ಮೀಟರ್ ಓಟಗಳನ್ನು ವೀಕ್ಷಿಸಿ ಆನಂದಿಸಿದರು. ನಂತರ ಕೊಲ್ಲೂರಿಗೆ ತೆರಳಿ ಮೂಕಾಂಬಿಕಾ ದೇವಿ ದರ್ಶನ ಪಡೆದು, ಪ್ರಧಾನ ಅರ್ಚಕ ನರಸಿಂಹ ಅಡಿಗ ನೇತ್ರತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅವರಿಗೆ ದೇವಳದ ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಪುಷ್ಪಲತಾ ಅವರು ಪ್ರಸಾದ ನೀಡಿ ಗೌರವಿಸಿದರು.

click me!