ಅನುಭವ ಮಂಟಪಕ್ಕೆ 200 ಕೋಟಿ ರು. ಹಂಚಿಕೆ

  • ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯ 2021-22ನೇ ಸಾಲಿನ ಕ್ರಿಯಾಯೋಜನೆಗೆ ಅನುಮೋದನೆ 
  •  500 ಕೋಟಿ ರು. ವೆಚ್ಚದ ಅನುಭವ ಮಂಟಪ ಯೋಜನೆಗೆ ಸರ್ಕಾರ 200 ಕೋಟಿ ರು. ಹಂಚಿಕೆ

ಬೆಂಗಳೂರು (ಜು.13):  ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯ 2021-22ನೇ ಸಾಲಿನ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದ್ದು, 500 ಕೋಟಿ ರು. ವೆಚ್ಚದ ಅನುಭವ ಮಂಟಪ ಯೋಜನೆಗೆ ಸರ್ಕಾರ 200 ಕೋಟಿ ರು. ಹಂಚಿಕೆ ಮಾಡಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಯಿತು. ಮಂಡಳಿ ವತಿಯಿಂದ ಕೈಗೊಂಡಿರುವ 134 ಕಾಮಗಾರಿಗಳ ಪೈಕಿ ಈವರೆಗೆ 76 ಕಾಮಗಾರಿಗಳು ಪೂರ್ಣಗೊಂಡಿದ್ದು, 58 ಕಾಮಗಾರಿಗಳು ಬಾಕಿ ಇವೆ ಎಂಬ ಮಾಹಿತಿಯನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.

Latest Videos

ಅನುಭವ ಮಂಟಪ ಶಂಕುಸ್ಥಾಪನೆ ಬಿಎಸ್‌ವೈ ಚುನಾವಣೆ ಗಿಮಿಕ್‌: ಸಿದ್ದು

ಒಟ್ಟು 500 ಕೋಟಿ ರು. ವೆಚ್ಚದ ಅನುಭವ ಮಂಟಪ ಯೋಜನೆಗೆ ಸರ್ಕಾರ 200 ಕೋಟಿ ರು. ಹಂಚಿಕೆ ಮಾಡಿದೆ. 101 ಎಕರೆ ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಹನ್ನೊಂದು ಎಕರೆ 25 ಗುಂಟೆ ಉಚಿತವಾಗಿ ಲಭ್ಯವಿದೆ. 69 ಎಕರೆ ಭೂಮಿ ಸ್ವಾ​ಧೀನಪಡಿಸಿಕೊಳ್ಳಬೇಕಾಗಿದೆ. ಈ ಭೂಮಿಯ ಮಾಲಿಕರು ಹೆಚ್ಚು ಪರಿಹಾರ ಬಯಸಿದ್ದು, ಮಾರುಕಟ್ಟೆದರದಲ್ಲಿ ಪರಿಹಾರ ಕೇಳುತ್ತಿದ್ದಾರೆ. ಆದ್ದರಿಂದ ಭೂಸ್ವಾಧಿ​ೕನ ಪ್ರಕ್ರಿಯೆಗೆ ತೊಂದರೆಯಾಗಿದೆ. ಪರಸ್ಪರ ಸಂಧಾನ ನಡೆಸಿ ರೈತರ ಸಮ್ಮತಿ ಪಡೆದು ಭೂ ಸ್ವಾಧಿ​ೕನ ಪ್ರಕ್ರಿಯೆ ಜರುಗಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಲಹೆ ನೀಡಿದರು.

ಮತ್ತೆ ಸಿಎಂ ಬದಲಾವಣೆ ವಿಚಾರ: ಯಡಿಯೂರಪ್ಪಗೆ ಟಾಂಗ್‌ ಕೊಟ್ಟ ಸಚಿವ ಕತ್ತಿ..!

ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಲಭ್ಯವಿರುವ 10 ಕೋಟಿ ರು. ಸೇರಿಸಿ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಸಭೆಯಲ್ಲಿ ಸೂಚಿಸಲಾಯಿತು. ಪ್ರಸ್ತುತ ಲಭ್ಯವಿರುವ ಭೂಮಿಯಲ್ಲಿ ಮಣ್ಣಿನ ಪರೀಕ್ಷೆ ಮತ್ತು ಇತರ ಕಾಮಗಾರಿಗಳು ನಡೆದಿವೆ. ಭೂಸ್ವಾಧಿ​ೕನ ಪ್ರಕ್ರಿಯೆ ಜತೆಗೆ ಡಿಪಿಆರ್‌ ಹಾಗೂ ಇತರೆ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದರು.

ಇನ್ನು ಮುಂದೆ ಬಸವಕಲ್ಯಾಣ ಸಭೆಗೆ ಬೀದರ್‌ ಜಿಲ್ಲಾ ಶಾಸಕರನ್ನು ಆಹ್ವಾನಿಸುವಂತೆ ಶಾಸಕ ಈಶ್ವರ ಖಂಡ್ರೆ ನೀಡಿದ ಸಲಹೆಗೆ ಮುಖ್ಯಮಂತ್ರಿಗಳು ಸಮ್ಮತಿಸಿದರು. ಇದೇ ವೇಳೆ ರೈತರ ಒಪ್ಪಿಗೆ ಮೇರೆಗೆ ಭೂಸ್ವಾಧೀನಪಡಿಸಿಕೊಳ್ಳವ ಸಂಬಂಧ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದಲ್ಲಿ ಸಭೆಯೊಂದನ್ನು ಆಯೋಜಿಸಲು ತೀರ್ಮಾನಿಸಲಾಯಿತು.

click me!