Bengaluru: 2 ದಶಕದಲ್ಲಿ 2000 ವರ್ಷದಷ್ಟು ಪರಿಸರ ಹಾನಿ: ಸಿಎಂ ಬೊಮ್ಮಾಯಿ

Kannadaprabha News   | Asianet News
Published : Feb 05, 2022, 06:06 AM ISTUpdated : Feb 05, 2022, 06:10 AM IST
Bengaluru: 2 ದಶಕದಲ್ಲಿ 2000 ವರ್ಷದಷ್ಟು ಪರಿಸರ ಹಾನಿ: ಸಿಎಂ ಬೊಮ್ಮಾಯಿ

ಸಾರಾಂಶ

*  ಮಾಲಿನ್ಯ ನಿಯಂತ್ರಣ ಮಂಡಳಿಯ ವಾರ್ಷಿಕ ವರದಿ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ ಕಳವಳ *  ಪರಿಸರ ರಕ್ಷಣೆ ಮಾಡದಿದ್ದಲ್ಲಿ ಮುಂದಿನ ಪೀಳಿಗೆ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ *  ಪರಿಸರ ಸಂರಕ್ಷಣೆಯನ್ನು ತುರ್ತು ಆದ್ಯತೆಯನ್ನಾಗಿ ಪರಿಗಣಿಬೇಕು 

ಬೆಂಗಳೂರು(ಫೆ.05):  ವಿಶ್ವದಲ್ಲಿ(World) ಕಳೆದ ಎರಡು ಸಾವಿರ ವರ್ಷಗಳಲ್ಲಿ ಸಂಭವಿಸಿದಷ್ಟು ಪರಿಸರ ಹಾನಿ ಕೇವಲ 20 ವರ್ಷಗಳಲ್ಲಿ ಘಟಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಕಳವಳ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು(Karnataka State Pollution Control Board) ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಾರ್ಷಿಕ ವರದಿ, ಬೆಂಗಳೂರು(Bengaluru) ಪರಿಸರ ಕುರಿತು ವರದಿ, ಪರಿಸರ ವಾಹಿನಿ ಪತ್ರಿಕೆ ಹಾಗೂ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿ ಮಾತನಾಡಿದರು.

ಪರಿಸರ ರಕ್ಷಣೆ ಮಾಡದಿದ್ದಲ್ಲಿ ಮುಂದಿನ ಪೀಳಿಗೆ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಇಂದಿನಿಂದಲೇ ಜಾಗೃತರಾಗಬೇಕು. ಪರಿಸರ ಸಂರಕ್ಷಣೆಯನ್ನು ತುರ್ತು ಆದ್ಯತೆಯನ್ನಾಗಿ ಪರಿಗಣಿಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.

News Hour : ಸಚಿವ ಸಂಪುಟಕ್ಕೆ ಹೊಸ ಮುಖಗಳು,  ಬೊಮ್ಮಾಯಿಗೆ ಪರೀಕ್ಷೆ!

ಮಂಡಳಿಯು ಸಮಾಜದ ಎಲ್ಲ ವರ್ಗಗಳು ಪರಿಸರ ರಕ್ಷಣೆಗೆ ಅನುಸರಿಸಬೇಕಾದ ಉತ್ತಮ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು. ಮಕ್ಕಳು, ಯುವಕರು, ವಿವಿಧ ಕೈಗಾರಿಕೋದ್ಯಮ, ವಿವಿಧ ವಲಯಗಳಲ್ಲಿ ಕೆಲಸ ಮಾಡುವವರು ಹಾಗೂ ಸರ್ಕಾರ ಅನುಸರಿಸಬೇಕಾದ ಉತ್ತಮ ಪದ್ಧತಿಗಳ ಕುರಿತು ಅರಿವು ಮೂಡಿಸಬೇಕು. ಆ ಮೂಲಕ ಪರಿಸರ ಸಂರಕ್ಷಣೆಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯು ಸಮಾಜದ ಒಂದು ಭಾಗವಾಗಿ ಕಾರ್ಯನಿರ್ವಹಿಸಬೇಕು. ಜತೆಗೆ ಸರ್ಕಾರಿ ಸಂಸ್ಥೆಗಳಲ್ಲಿ ಸಂವಾದ ನಡೆಸಿ ಅರಿವು ಮೂಡಿಸಬೇಕು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಪರಿಸರ ಮತ್ತು ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌(Anand Singh) ಮಾತನಾಡಿ, ಮಾಲಿನ್ಯ ನಿಯಂತ್ರಣ ಮಂಡಳಿಯು ಮಾಲಿನ್ಯ ತಡೆಗಟ್ಟಲು ತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಳ್ಳಬೇಕು. ಆ ಮೂಲಕ ದಿನದ 24 ತಾಸು ಕಾರ್ಯನಿರ್ವಹಿಸಿ ಪರಿಸರ ಸಂರಕ್ಷಣೆ ಮಾಡಲು ಶ್ರಮಿಸಬೇಕು ಎಂದು ತಿಳಿಸಿದರು.ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಶಾಂತ್‌ ಎ. ತಿಮ್ಮಯ್ಯ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌, ಮಂಡಳಿ ಕಾರ್ಯದರ್ಶಿ ಶ್ರೀನಿವಾಸುಲು ಮತ್ತು ಇತರರು ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಾರ್ಷಿಕ ವರದಿ, ಬೆಂಗಳೂರು ಪರಿಸರ ಕುರಿತು ವರದಿ, ಪರಿಸರ ವಾಹಿನಿ ಪತ್ರಿಕೆ ಹಾಗೂ ಸಾಕ್ಷ್ಯಚಿತ್ರವನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದರು. ಪರಿಸರ ಮತ್ತು ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಶಾಂತ್‌ ಎ. ತಿಮ್ಮಯ್ಯ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌, ಮಂಡಳಿ ಕಾರ್ಯದರ್ಶಿ ಶ್ರೀನಿವಾಸುಲು ಮತ್ತು ಇತರರು ಉಪಸ್ಥಿತರಿದ್ದರು.

ಅಗ್ಗದ ದರಲ್ಲಿ ಕ್ಯಾನ್ಸರ್‌ ಔಷಧಿಗೆ ಚಿಂತನೆ

ರಾಜ್ಯದ(Karnataka) ಎಲ್ಲ ಪ್ರಾದೇಶಿಕ ವಲಯದಲ್ಲಿ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರವನ್ನು(Cancer Treatment Center) ಪ್ರಾರಂಭಿಸುತ್ತೇವೆ. ಜನೌಷಧಿ ಕೇಂದ್ರಗಳಲ್ಲಿ ಕ್ಯಾನ್ಸರ್‌ ಔಷಧಿಗಳು ಕಡಿಮೆ ದರದಲ್ಲಿ ಸಿಗುವಂತೆ ಮಾಡುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಾರ್ಕ್‌ಗಾಗಿ ಜಾರಕಬಂಡೆ ಮೀಸಲು ಅರಣ್ಯ ಬಲಿ? : ಪರಿಸರ ಪ್ರೇಮಿಗಳ ವಿರೋಧ!

ವಿಶ್ವ ಕ್ಯಾನ್ಸರ್‌ ದಿನದ(World Cancer Day) ಅಂಗವಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ(Department of Health and Family Welfare) ವತಿಯಿಂದ ಒಂದು ವಾರದ ಕಾಲ ರಾಜ್ಯಾದ್ಯಂತ ನಡೆಯಲಿರುವ ಕ್ಯಾನ್ಸರ್‌ ಬಗ್ಗೆಗಿನ ಜನಜಾಗೃತಿ ಅಭಿಯಾನಕ್ಕೆ ಉತ್ತರಹಳ್ಳಿ ಬಿಬಿಎಂಪಿ(BBMP) ಪಿಯು ಕಾಲೇಜು ಮೈದಾನದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಕ್ಯಾನ್ಸರ್‌ ಔಷಧಿಗಳ(Cancer Medicine) ದುಬಾರಿ ದರದ ಹೊರೆ ತಪ್ಪಿಸಲು ಕ್ಯಾನ್ಸರ್‌ ಔಷಧಿ ಉತ್ಪಾದಕರು ಹಾಗೂ ಕೇಂದ್ರ ಸರ್ಕಾರದ(Central Government) ಜೊತೆ ಮಾತುಕತೆ ನಡೆಸುತ್ತೇವೆ. ರಾಜ್ಯಾದ್ಯಂತ ಅಗ್ಗದ ದರದಲ್ಲಿ ಕ್ಯಾನ್ಸರ್‌ ಔಷಧಿ ನೀಡಲು ಒಂದು ಸಂಸ್ಥೆ ರೂಪಿಸಲಾಗುವುದು. ಆ್ಯಂಬುಲೆನ್ಸ್‌ ವ್ಯವಸ್ಥೆಯನ್ನು ಸದೃಢಗೊಳಿಸುತ್ತೇವೆ ಎಂದು ಅವರು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್‌.ಅಶೋಕ್‌, ಶಾಸಕ ಎಂ.ಕೃಷ್ಣಪ್ಪ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಭಾಗಿಯಾಗಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ
ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ