ದಸರಾ ಪರೇಡ್‌ಗೆ ಸೇನೆ, ಚಲನಚಿತ್ರ ನಟರ ಹೆಜ್ಜೆ! ವಿಭಿನ್ನ ದಸರಾ, ಮೆರವಣಿಗೆಯ ರೂಪ ಬದಲು: ಡಿಕೆಶಿ - ಕಂಬಳ ನಡೆಯುತ್ತಾ?

Kannadaprabha News   | Kannada Prabha
Published : Aug 30, 2026, 06:11 AM IST
2026 Dasara Will Be Different Army Celebrities in Parade Will Kambala Be Held

ಸಾರಾಂಶ

ಈ ಬಾರಿಯ ದಸರಾವನ್ನು ವಿಭಿನ್ನವಾಗಿ ಆಚರಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರ್ಧರಿಸಿದ್ದಾರೆ. ಜಂಬೂಸವಾರಿ ಮೆರವಣಿಗೆಯ ರೂಪ ಬದಲಾಗಲಿದ್ದು, ಇದೇ ಮೊದಲ ಬಾರಿಗೆ ಸೇನಾಪಡೆಯ ಯೋಧರು ಹಾಗೂ ಚಿತ್ರರಂಗದ ನಟ-ನಟಿಯರು ಪಾಲ್ಗೊಳ್ಳಲಿದ್ದಾರೆ. ಬರಗಾಲದ ನಡುವೆಯೂ ಪ್ರವಾಸೋದ್ಯಮದ ದೃಷ್ಟಿಯಿಂದ ಅದ್ಧೂರಿ ಆಚರಣೆ

 ಮೈಸೂರು (ಆ.30): ಈ ಬಾರಿ ವಿಭಿನ್ನವಾದ ದಸರಾ ಮಾಡುತ್ತೇವೆ‌. ದಸರಾದ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇವೆ. ಸೇನಾಪಡೆಯ ಯೋಧರು ಕೂಡ ಈ ಬಾರಿಯ ಜಂಬೂಸವಾರಿಯ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬರಗಾಲದ ನಡುವೆಯೂ ಈ ಬಾರಿ ದಸರಾ ಅದ್ದೂರಿ!

ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಬಾರಿಯ ದಸರಾವನ್ನು ಅದ್ಧೂರಿಯಾಗಿ ಮತ್ತು ಬಹಳ ವಿಭಿನ್ನವಾಗಿ ಆಚರಿಸುತ್ತೇವೆ. ಒಂದೇ ಪ್ರಕಾರದ ಐದು ಜನಪದ ಕಲಾವಿದರಿಗೆ ಈ ಬಾರಿ ಅವಕಾಶ ಇಲ್ಲ. ಬದಲಾದ ಕಾಲಕ್ಕೆ ತಕ್ಕಂತೆ ಮೆರವಣಿಗೆಯ ರೂಪವನ್ನು ಬದಲಾಯಿಸುತ್ತೇವೆ. ಸೇನಾಪಡೆಯ ಯೋಧರು ಕೂಡ ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ, ಕನ್ನಡ ಚಿತ್ರರಂಗದ ನಟ-ನಟಿಯರು ಕೂಡ ಮೆರವಣಿಗೆಯಲ್ಲಿ ಸಾಗಲಿದ್ದಾರೆ ಎಂದು ಹೇಳಿದರು.

ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತಾ?

ದಸರಾದಲ್ಲಿ ಕಂಬಳ ಆಯೋಜನೆ ಕುರಿತು ಪ್ರತಿಕ್ರಿಯಿಸಿ, ಕಂಬಳವನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ದಸರಾದಲ್ಲಿ ಕಂಬಳ ಆಯೋಜಿಸುವ ಬಗ್ಗೆ ಇನ್ನೂ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ. ಈ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಕಂಬಳದಿಂದ ಪರಿಸರ ಹಾನಿ, ನೀರು ಪೋಲು ಎಂಬುದೆಲ್ಲಾ ಸುಮ್ಮನೆ ನೆಪ. ಯಾವ ಪರಿಸರ ಹಾನಿಯೂ ಆಗುವುದಿಲ್ಲ. ನೀರು ಕೂಡ ಹೆಚ್ಚಾಗಿ ಬೇಕಾಗಿಲ್ಲ. ಸುಮ್ಮನೆ ಕೆಲವರು ವಿರೋಧ ಮಾಡುತ್ತಿದ್ದಾರೆ ಎಂದು ಹೇಳಿದರು.

ದಸರಾ ಉದ್ಘಾಟಕರ ವಿಚಾರ‌ದಲ್ಲಿ ಹಲವರ ಜೊತೆ ಚರ್ಚೆ ಮಾಡಿದ್ದೇನೆ. ಅಂತಿಮ ನಿರ್ಣಯವನ್ನು ಇನ್ನೂ ತೆಗೆದುಕೊಂಡಿಲ್ಲ ಎಂದರು.

ಬರದ ನೆಪದಲ್ಲಿ ದಸರಾವನ್ನು ಸರಳವಾಗಿ ಆಚರಿಸಲು ಸಾಧ್ಯವಿಲ್ಲ. ಈ ಕುರಿತ ನನ್ನ ನಿಲುವಿನಲ್ಲಿ ಯಾವ ಬದಲಾವಣೆಯೂ ಇಲ್ಲ. ಈ ಬಾರಿಯ ದಸರಾವನ್ನು ಅದ್ಧೂರಿಯಾಗಿ ಮಾಡುತ್ತೇನೆ. ಅದರಲ್ಲಿ ಬದಲಾವಣೆ ಪ್ರಶ್ನೆ ಇಲ್ಲ. ದಸರಾದ ಮೇಲೆ ಇಡೀ ಪ್ರವಾಸೋದ್ಯಮ ನಿಂತಿದೆ.

- ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಟ ವಿ ರವಿಚಂದ್ರನ್‌ಗೆ MLC ಸ್ಥಾನ? ರಾಜಕೀಯ ಅಖಾಡಕ್ಕೆ 'ಕ್ರೇಜಿ ಸ್ಟಾರ್' ಎಂಟ್ರಿ ಪಕ್ಕಾನಾ?
ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ವಿಧಾನಸೌಧ, ಸುವರ್ಣಸೌಧ, ಮೈಸೂರು ಅರಮನೆ!