
ಬೆಂಗಳೂರು(ಡಿ.28): ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಚಾಲನೆ ನೀಡಿದ ಎರಡನೇ ದಿನವಾದ ಬುಧವಾರ ಕೇವಲ 2032 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಮೊದಲ ದಿನ ನಿರೀಕ್ಷಿತ ಮಟ್ಟದಲ್ಲಿ ಅರ್ಜಿಗಳು ಸಲ್ಲಿಕೆಯಾಗಿರಲಿಲ್ಲ.
ಈ ಯೋಜನೆಗೆ 2023ನೇ ಇಸವಿಯಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾಗಿ ಆರು ತಿಂಗಳಿಂದ ಉದ್ಯೋಗ ಲಭ್ಯವಾಗದೆ ಇರುವವರು ನೋಂದಣಿ ಮಾಡಲು ಅರ್ಹರು ಎಂದು ಸರ್ಕಾರ ಹೇಳಿದ್ದರೂ ಮಾಹಿತಿ ಕೊರತೆಯಿಂದಲೋ ಏನೋ ಅದಕ್ಕೂ ಹಿಂದಿನ 2021-22ನೇ ಸಾಲಿನಲ್ಲಿ ಪದವಿ, ಡಿಪ್ಲೊಮಾ ಪೂರೈಸಿರುವವರು ಕೂಡ ಅರ್ಜಿ ಸಲ್ಲಿಸುತ್ತಿರುವುದಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಯುವನಿಧಿ ಯೋಜನೆ: ನಿರುದ್ಯೋಗಿಗಳಿಗೆ ಈ ಭತ್ಯೆ ಬೂಸ್ಟರ್ ಡೋಸ್ ಇದ್ದಂತೆ, ಸಚಿವ ಪರಮೇಶ್ವರ
ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಡಿ.27ರ ಸಂಜೆ 6 ಗಂಟೆ ವರೆಗೆ ಒಟ್ಟು 2032 ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಈ ಮಧ್ಯೆ, ಅರ್ಹರಲ್ಲದವರೂ ನೋಂದಾಯಿಸುತ್ತಿದ್ದಾರೆ. 2021-22ನೇ ಸಾಲಿನಲ್ಲಿ ಪಾಸಾದವರು ಯೋಜನೆಗೆ ಅರ್ಹರಲ್ಲದಿದ್ದರೂ ಅರ್ಜಿ ಸಲ್ಲಿಸುತ್ತಿದ್ದಾರೆ. ಅಂತಹವರ ಅರ್ಜಿಗಳನ್ನು ತಿರಸ್ಕೃತಗೊಳ್ಳುತ್ತಿವೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ