* ರಾಜ್ಯದಲ್ಲಿ ನಿಯಂತ್ರಣಕ್ಕೆ ಬಂದ ಕೊರೋನಾ ವೈರಸ್
* ನೆಮ್ಮದಿ ಸುದ್ದಿ ನಡುವೆ ಒಂದು ಆತಂಕಪಡುವ ಸುದ್ದಿ ವರದಿ
* ಶಾಲೆಯ 21 ವಿದ್ಯಾರ್ಥಿಗಳಿಗೆ ಕೊರೋನಾ ಅಟ್ಯಾಕ್
ಕೊಡಗು, (ಅ.26): ರಾಜ್ಯದಲ್ಲಿ ಕೊರೋನಾ ಎರಡನೇ (Corona) ಅಲೆ ಕಂಟ್ರೋಲ್‌ಗೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನ ಪ್ರಾರಂಭಿಸಲಾಗಿದೆ. ಇದರ ನೆಮ್ಮದಿ ಸುದ್ದಿ ನಡುವೆ ಒಂದು ಆತಂಕಪಡುವ ಸುದ್ದಿ ವರದಿಯಾಗಿದೆ.
ಹೌದು...ಮಡಿಕೇರಿಯ ಹೊರವಲಯದಲ್ಲಿರುವ ನವೋದಯ ಶಾಲೆಯ 21 ವಿದ್ಯಾರ್ಥಿಗಳಿಗೆ (Students)ಕೊರೋನಾ ಸೋಂಕು (Coronavirus) ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 18 ವಿದ್ಯಾರ್ಥಿಗಳನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಉಳಿದ ಮೂವರು ವಿದ್ಯಾರ್ಥಿಗಳು ಮನೆಗೆ ತೆರಳಿದ್ದಾರೆ.
undefined
ಹೊಸ ಡೇಂಜರಸ್ ವೈರಸ್ ಪತ್ತೆ - ತಜ್ಞರೊಂದಿಗೆ ಚರ್ಚೆ
ಶಾಲೆಯ 279 ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ (Covid Test) ಮಾಡಲಾಗಿತ್ತು, ಅವರಲ್ಲಿ 21 ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೇ ನಾಳೆ (ಆ.27) ಎಲ್ಲಾ 40 ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ಕೊರೋನಾ ವೈರಸ್ ಅಟ್ಯಾಕ್ ಆಗಿರುವುದು ಆತಂಕ ಮೂಡಿಸಿದೆ.
ಇನ್ನು ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ ವೆಂಕಟೇಶ್ ಪ್ರತಿಕ್ರಿಯಿಸಿದ್ದು, ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ಅ.26 ಕೊರೋನಾ ಅಂಕಿ-ಸಂಖ್ಯೆ
ಕರ್ನಾಟಕ (Karnataka) ರಾಜ್ಯದಲ್ಲಿ ಇಂದು (ಅಕ್ಟೋಬರ್ 26) ಹೊಸದಾಗಿ 277 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,86,553 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,39,990 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,024 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,510 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.