ಕಾರ್ಪೊರೇಟರ್ ಇಮ್ರಾನ್ ಪಾಷಾ ಸೇರಿ 23 ಆರೋಪಿಗಳಿಗೆ ನ್ಯಾಯಾಂಗ ಬಂಧನ

Published : Jun 11, 2020, 08:06 PM IST
ಕಾರ್ಪೊರೇಟರ್ ಇಮ್ರಾನ್ ಪಾಷಾ ಸೇರಿ 23  ಆರೋಪಿಗಳಿಗೆ ನ್ಯಾಯಾಂಗ ಬಂಧನ

ಸಾರಾಂಶ

ಬೆಂಗಳೂರಿನ ಪಾದರಾಯನಪುರ ಬಿಬಿಎಂಪಿ ಕಾರ್ಪೊರೇಟರ್ ಇಮ್ರಾನ್ ಪಾಷಾ ಸೇರಿದಂತೆ ಒಟ್ಟು 27 ಜನರಲ್ಲಿ 23 ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಂಗಳೂರು, (ಜೂನ್.11): ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದ ಬಿಬಿಎಂಪಿ ಕಾರ್ಪೊರೇಟರ್ ಸೇರಿದಂತೆ ಆತನ ಬೆಂಬಲಿಗರಿಗೆ 5ನೇ ಎಪಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಬೆಂಗಳೂರಿನ ಪಾದರಾಯನಪುರ ಕಾರ್ಪೊರೇಟರ್  ಇಮ್ರಾನ್ ಪಾಷಾ ಹೈಡ್ರಾಮಾ ಸೃಷ್ಟಿಸಿ ಆಸ್ಪತ್ರೆ ಸೇರಿದ್ದರು. ಬಳಿಕ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಅವರನ್ನು ಅದ್ದೂರಿಯಾಗಿ ಬೆಂಬಲಿಗರು ಸ್ವಾಗತ ಮಾಡಿಕೊಂಡಿದ್ದರು. 

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಇಮ್ರಾನ್ ಪಾಷಾ ಅರೆಸ್ಟ್: ಪಾದರಾಯನಪುರದಲ್ಲಿ 144 ಸೆಕ್ಷನ್ 

ಈ ಸಂಬಂಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಲಾಕ್‌ಡೌನ್‌ ನಿಮಯ ಉಲ್ಲಂಘಿಸಿದ ಇಮ್ರಾನ್ ಪಾಷಾ ಸೇರಿ 22 ಜನರನ್ನು ಪೊಲೀಸರು ಮುಂಜಾಗ್ರತಾ ಕ್ರಮಕೈಗೊಂಡು ಬಂಧಿಸಿದ್ದರು.

ಇಂದು (ಗುರುವಾರ) 23 ಆರೋಪಿಗಳನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ 5ನೇ ಎಪಿಎಂಎಂ ನ್ಯಾಯಾಲಯ  ವಿಚಾರಣೆ ನಡೆಸಿತು. ಬಳಿಕ ಜೂನ್ 22ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಇನ್ನುಳಿದ ನಾಲ್ವರಲ್ಲಿ ಒಬ್ಬನಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ ಚಿಕಿತ್ಸೆ ಒಳಪಡಿಸಲಾಗಿದ್ದು, ಮೂವರು ಆರೋಪಿಗಳ ವರದಿ ಬರುತ್ತಿದ್ದಂತೆ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಸದ್ದಿಲ್ಲದೇ ಓಪನ್ ಆದ 'ಬಿಗ್ ಬಾಸ್' ನಡೆಯುವ ಜಾಲಿವುಡ್ ಸ್ಟುಡಿಯೋ! KSPCB ಅನುಮತಿ