Corona Crisis: ಕರ್ನಾಟಕದಲ್ಲಿ 2329 ಕೋವಿಡ್ ಕೇಸ್‌: ಆರು ತಿಂಗಳಲ್ಲೇ ಗರಿಷ್ಠ

By Govindaraj S  |  First Published Aug 19, 2022, 5:05 AM IST

ರಾಜ್ಯದಲ್ಲಿ ಕೊರೋನಾ ಸೋಂಕಿನ ಹೊಸ ಪ್ರಕರಣಗಳು ಮತ್ತೆ ಎರಡು ಸಾವಿರಕ್ಕೆ ಹೆಚ್ಚಿದ್ದು, ಆರು ತಿಂಗಳಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಗುರುವಾರ 2329 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 1782 ಮಂದಿ ಗುಣಮುಖರಾಗಿದ್ದಾರೆ.


ಬೆಂಗಳೂರು (ಆ.19): ರಾಜ್ಯದಲ್ಲಿ ಕೊರೋನಾ ಸೋಂಕಿನ ಹೊಸ ಪ್ರಕರಣಗಳು ಮತ್ತೆ ಎರಡು ಸಾವಿರಕ್ಕೆ ಹೆಚ್ಚಿದ್ದು, ಆರು ತಿಂಗಳಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಗುರುವಾರ 2329 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 1782 ಮಂದಿ ಗುಣಮುಖರಾಗಿದ್ದಾರೆ. ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ. 30 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.4 ರಷ್ಟು ದಾಖಲಾಗಿದೆ. ಬುಧವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳನ್ನು ಒಂಬತ್ತು ಸಾವಿರ ಹೆಚ್ಚು ನಡೆಸಲಾಗಿದೆ. 

ಹೀಗಾಗಿ, ಹೊಸ ಪ್ರಕರಣಗಳು 1443ಕ್ಕೆ ಏರಿಕೆಯಾಗಿವೆ. (ಬುಧವಾರ 886 ಪ್ರಕರಣಗಳು, ಮೂರು ಸಾವು). ಈ ಹಿಂದೆ ಫೆಬ್ರವರಿ 12 ರಂದು 2,372 ಪ್ರಕರಣಗಳು ದಾಖಲಾಗಿದ್ದವು. ಆ ಬಳಿಕ ಇಳಿಕೆಯಾಗುತ್ತಾ ಸಾಗಿ ಕನಿಷ್ಠ 50ರ ಆಸುಪಾಸಿಗೆ ಕುಸಿದಿದ್ದವು. ಆಗಸ್ಟ್‌ನಲ್ಲಿ ಮತ್ತೆ ಎರಡು ಸಾವಿರಕ್ಕೆ ಹೆಚ್ಚಳವಾಗಿತ್ತು. ಸದ್ಯ ಆರು ತಿಂಗಳಲ್ಲಿ ಅಧಿಕ ಪ್ರಕರಣಗಳು ದಾಖಲಾಗಿವೆ. 

Tap to resize

Latest Videos

undefined

ಉಚಿತ 3ನೇ ಡೋಸ್‌ ನೀಡಿದರೂ ಜನ ಪಡೆಯುತ್ತಿಲ್ಲ: ಸಚಿವ ಸುಧಾಕರ್‌

ಬೆಂಗಳೂರು ಗ್ರಾಮಾಂತರದಲ್ಲಿ 35 ವರ್ಷದ ಪುರುಷ, ಕೊಪ್ಪಳದಲ್ಲಿ 50 ವರ್ಷದ ಮಹಿಳೆ, ಧಾರವಾಡದಲ್ಲಿ 71 ವರ್ಷದ ವೃದ್ಧೆ, ಹಾವೇರಿಯಲ್ಲಿ 30 ವರ್ಷದ ಪುರುಷ ಮೃತಪಟ್ಟಿದ್ದಾರೆ. ಸದ್ಯ ಸಕ್ರಿಯ ಸೋಂಕಿತರ ಸಂಖ್ಯೆ 9,307ಕ್ಕೆ ಏರಿಕೆಯಾಗಿವೆ. ಈ ಪೈಕಿ 67 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ಮಂದಿ ಐಸಿಯು, 5 ಮಂದಿ ಆಕ್ಸಿಜನ್‌, 57 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 9240 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ.

ಬೆಂಗಳೂರಿನಲ್ಲಿ ಏಕಾಏಕಿ ಏರಿದ ಕೊರೋನಾ ಸೋಂಕಿನ ಕೇಸ್‌: ನಗರದಲ್ಲಿ ಕೊರೋನಾ ಸೋಂಕಿತ ಹೊಸ ಪ್ರಕರಣಗಳ ಸಂಖ್ಯೆ 1,606 ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ.6.96ಕ್ಕೆ ಏರಿಕೆಯಾಗಿದೆ. 1,071 ಜನರು ಗುಣಮುಖರಾಗಿದ್ದು, ಸೋಂಕಿನಿಂದ ಮೃತಪಟ್ಟವರದಿಯಾಗಿಲ್ಲ. ನಗರದಲ್ಲಿ ಸದ್ಯ 6,534 ಸಕ್ರಿಯ ಸೋಂಕು ಪ್ರಕರಣಗಳಿದ್ದು ಈ ಪೈಕಿ 51 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 18 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 4 ಎಚ್‌ಡಿಯು ಮತ್ತು 29 ಮಂದಿ ಸಾಮಾನ್ಯ ವಾರ್ಡ್‌ಗೆ ದಾಖಲಾಗಿದ್ದಾರೆ. 

ಉಳಿದವರು ಮನೆಗಳಲ್ಲಿ ಐಸೋಲೇಷನ್‌ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. 7,521 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದು ಕೊಂಡಿದ್ದಾರೆ. 294 ಮಂದಿ ಮೊದಲ ಡೋಸ್‌, 1,540 ಮಂದಿ ಎರಡನೇ ಡೋಸ್‌ ಮತ್ತು 5,687 ಮಂದಿ ಬೂಸ್ಟರ್‌ ಡೋಸ್‌ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 12 ಕ್ಲಸ್ಟರ್‌ಗಳಿದ್ದು, 5ಕ್ಕಿಂತ ಹೆಚ್ಚು ಸೋಂಕಿತರಿರುವ ಎರಡು ಕ್ಲಸ್ಟರ್‌ ಇದೆ. ಉಳಿದಂತೆ 10 ಕ್ಲಸ್ಟರ್‌ಗಳಲ್ಲಿ 5ಕ್ಕಿಂತ ಕಡಿಮೆ ಸೋಂಕಿತರು ಇದ್ದಾರೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

Corona Crisis: ಕೋವಿಡ್‌ ಸೋಂಕಿತರ ಸಾವು ಹೆಚ್ಚಳ: ಆತಂಕ

ಎಲ್ಲಿ ಎಷ್ಟು ಕೇಸ್‌?: ಗುರುವಾರದ ಹೊಸ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ 1606 ಪತ್ತೆಯಾಗಿವೆ. ಉಳಿದಂತೆ ಅತಿ ಹೆಚ್ಚು ಮೈಸೂರು 168, ರಾಯಚೂರು 52, ಧಾರವಾಡ ಮತ್ತು ರಾಮನಗರ ತಲಾ 48, ಹಾಸನ 47, ಬಳ್ಳಾಬೆಂಗಳೂರಿನಲ್ಲಿರಿಯಲ್ಲಿ 44 ಮಂದಿಗೆ ಸೋಂಕು ತಗುಲಿದೆ. 9 ಜಿಲ್ಲೆಗಳಲ್ಲಿ ಬೆರಳೆಣಿಕೆ, ಬೀದರ್‌ನಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

click me!